Homeಮುಖಪುಟಸಂಭಾಲ್‌ | ಶಾಹಿ ಮಸೀದಿಯಲ್ಲಿ ಹಿಂದೂ ಆಚರಣೆಗೆ ಯತ್ನಿಸಿದ ಮೂವರು ದುಷ್ಕರ್ಮಿಗಳ ಬಂಧನ

ಸಂಭಾಲ್‌ | ಶಾಹಿ ಮಸೀದಿಯಲ್ಲಿ ಹಿಂದೂ ಆಚರಣೆಗೆ ಯತ್ನಿಸಿದ ಮೂವರು ದುಷ್ಕರ್ಮಿಗಳ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ನ ಶಾಹಿ ಜಾಮಿಯ ಮಸೀದಿಯಲ್ಲಿ ಹವನ ಮತ್ತು ಪೂಜೆ ಸೇರಿದಂತೆ ಹಿಂದೂ ಆಚರಣೆಗಳನ್ನು ಮಾಡಲು ಯತ್ನಿಸಿದ ಆರೋಪದ ಮೇಲೆ ದೆಹಲಿ ಮೂಲದ ಮೂವರು ದುಷ್ಕರ್ಮಿಗಳನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರದ ಪ್ರಾರ್ಥನೆಯ ಕಾರಣಕ್ಕೆ ಮಸೀದಿಯಲ್ಲಿ ಈಗಾಗಲೇ ಭಾರೀ ಭದ್ರತೆಯನ್ನು ನಿಯೋಜಿಸಲಾಗಿತ್ತು. ಸಂಭಾಲ್‌

ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ಬಿಷ್ಣೋಯ್ ಬಂಧನಗಳನ್ನು ದೃಢಪಡಿಸಿದ್ದು, ಮಸೀದಿ ಬಳಿ ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ. ಬಂಧಿತ ದುಷ್ಕರ್ಮಿಗಳಲ್ಲಿ ಸನಾತನ್ ಸಿಂಗ್, ವೀರ್ ಸಿಂಗ್ ಯಾದವ್ ಮತ್ತು ಅನಿಲ್ ಸಿಂಗ್ ಎಂದು ಗುರುತಿಸಲಾಗಿದೆ.

ದುಷ್ಕರ್ಮಿಗಳನ್ನು ಪೊಲೀಸ್ ಠಾಣೆಗೆ ಕಳುಹಿಸಿದ್ದು, ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತಂದಿದ್ದಕ್ಕಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. “ಭವಿಷ್ಯದಲ್ಲಿ ಸಂಭಾಲ್‌ಗೆ ಪ್ರವೇಶಿಸದಂತೆ ಅವರಿಗೆ ಎಚ್ಚರಿಕೆ ನೀಡಲಾಗುವುದು” ಎಂದು ತಿಳಿಸಿದ್ದಾರೆ. ಕೋಮು ಸಾಮರಸ್ಯವನ್ನು ಭಂಗಗೊಳಿಸುವ ಯಾವುದೇ ಪ್ರಯತ್ನವನ್ನು ಕಟ್ಟುನಿಟ್ಟಾಗಿ ಎದುರಿಸಲಾಗುವುದು ಎಂದು ಅಧಿಕಾರಿ ಒತ್ತಿ ಹೇಳಿದ್ದಾರೆ.

ಶಾಹಿ ಜಾಮಿಯ ಮಸೀದಿಯಲ್ಲಿ ನಡೆದ ಸಮೀಕ್ಷೆಯನ್ನು ವಿರೋಧಿಸಿ ಕಳೆದ ವರ್ಷ ನವೆಂಬರ್ 24 ರಂದು ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಭುಗಿಲೆದ್ದ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಪ್ರಸ್ತುತ ಮಸೀದಿಯು ಕೆಡವಲ್ಪಟ್ಟ ಹಿಂದೂ ದೇವಸ್ಥಾನದ ಸ್ಥಳದಲ್ಲಿದೆ ಎಂದು ಪ್ರತಿಪಾದಿಸಿ ಬಿಜೆಪಿ ಪರ ಬೆಂಬಲಿಗರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು ಸಮೀಕ್ಷೆಗೆ ಆದೇಶಿಸಿತ್ತು.

ಭದ್ರತಾ ಸಿಬ್ಬಂದಿ ಸೇರಿದಂತೆ ಹಲವಾರು ಜನರಿಗೆ ಗಾಯಗಳಾಗಿದ್ದರಿಂದ ನಡೆದ ಹಿಂಸಾಚಾರವು ಸಂಭಾಲ್ ಅನ್ನು ಕೋಮು ಉದ್ವಿಗ್ನತೆಗೆ ತಳ್ಳಿದೆ. ಸಂಭಾಲ್‌

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಕ್ಫ್‌ ಮಸೂದೆ ವಿರುದ್ಧ ವಿಜಯ್ ನೇತೃತ್ವದ ಟಿವಿಕೆ ಪ್ರತಿಭಟನೆ; ಕಾನೂನು ಸಮರದ ಎಚ್ಚರಿಕೆ

ವಕ್ಫ್‌ ಮಸೂದೆ ವಿರುದ್ಧ ವಿಜಯ್ ನೇತೃತ್ವದ ಟಿವಿಕೆ ಪ್ರತಿಭಟನೆ; ಕಾನೂನು ಸಮರದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...