Homeಮುಖಪುಟ'ವಲಸೆ ಮತ್ತು ವಿದೇಶಿಯರ ಮಸೂದೆ-2025' ಅನುಮೋದಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

‘ವಲಸೆ ಮತ್ತು ವಿದೇಶಿಯರ ಮಸೂದೆ-2025’ ಅನುಮೋದಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

- Advertisement -
- Advertisement -

ವಿದೇಶಿಯರು ಮತ್ತು ವಲಸೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿರ್ವಹಿಸುವ ‘ವಲಸೆ ಮತ್ತು ವಿದೇಶಿಯರ ಮಸೂದೆ, 2025’ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶುಕ್ರವಾರ ಒಪ್ಪಿಗೆ ನೀಡಿದ್ದು, ಅದು ಈಗ ಕಾನೂನಾಗುತ್ತಿದೆ.

ಈ ಶಾಸನವು ಏಪ್ರಿಲ್ 4, 2025 ರಂದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆಯಿತು; ನಂತರ ಅದನ್ನು ಗೆಜೆಟ್ ಅಧಿಸೂಚನೆಯ ಮೂಲಕ ತಿಳಿಸಲಾಯಿತು.

ಕಾನೂನಿನ ಪ್ರಕಾರ, ಇನ್ನು ಮುಂದೆ ಯಾರಾದರೂ ಭಾರತಕ್ಕೆ ಪ್ರವೇಶಿಸಲು ಅಥವಾ ದೇಶದಲ್ಲಿ ಉಳಿಯಲು ಅಥವಾ ನಿರ್ಗಮಿಸಲು ನಕಲಿ ಪಾಸ್‌ಪೋರ್ಟ್ ಅಥವಾ ವೀಸಾವನ್ನು ಬಳಸುತ್ತಿರುವುದು ಕಂಡುಬಂದರೆ, ಅವರಿಗೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸಲಾಗುತ್ತದೆ.

ವಿದೇಶಿಯರು ಹೆಚ್ಚು ಕಾಲ ನೆಲೆಸಿರುವವರನ್ನು ಪತ್ತೆಹಚ್ಚಲು ಹೋಟೆಲ್‌ಗಳು, ವಿಶ್ವವಿದ್ಯಾಲಯಗಳು, ಇತರ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ವಿದೇಶಿಯರ ಬಗ್ಗೆ ಮಾಹಿತಿಯನ್ನು ಕಡ್ಡಾಯವಾಗಿ ವರದಿ ಮಾಡಲು ಶಾಸನವು ಅವಕಾಶ ನೀಡುತ್ತದೆ.

ಎಲ್ಲ ಅಂತರರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳು ಮತ್ತು ಹಡಗುಗಳು ಭಾರತದ ಬಂದರು ಅಥವಾ ಸ್ಥಳದಲ್ಲಿ ನಾಗರಿಕ ಪ್ರಾಧಿಕಾರ ಅಥವಾ ವಲಸೆ ಅಧಿಕಾರಿಗೆ ಅಂತಹ ವಿಮಾನ, ಹಡಗು ಅಥವಾ ಇತರ ಸಾರಿಗೆ ವಿಧಾನದಲ್ಲಿರುವ ಪ್ರಯಾಣಿಕರು ಮತ್ತು ಸಿಬ್ಬಂದಿಯ ಮುಂಗಡ ಮಾಹಿತಿಯನ್ನು ಸಲ್ಲಿಸಬೇಕಾಗುತ್ತದೆ.

“ಯಾರು ಭಾರತಕ್ಕೆ ಪ್ರವೇಶಿಸಲು ಅಥವಾ ಭಾರತದಲ್ಲಿ ಉಳಿಯಲು ಅಥವಾ ನಿರ್ಗಮಿಸಲು ನಕಲಿ ಅಥವಾ ವಂಚನೆಯಿಂದ ಪಡೆದ ಪಾಸ್‌ಪೋರ್ಟ್ ಅಥವಾ ಇತರ ಪ್ರಯಾಣ ದಾಖಲೆ ಅಥವಾ ವೀಸಾವನ್ನು ತಿಳಿದೂ ಬಳಸಿದರೆ ಅಥವಾ ಪೂರೈಸಿದರೆ. ಎರಡು ವರ್ಷಗಳಿಗಿಂತ ಕಡಿಮೆಯಿಲ್ಲದ; ಆದರೆ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಮತ್ತು ಒಂದು ಲಕ್ಷ ರೂಪಾಯಿಗಳಿಗಿಂತ ಕಡಿಮೆಯಿಲ್ಲದ, ಹತ್ತು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ದಂಡಕ್ಕೆ ಗುರಿಯಾಗುತ್ತಾರೆ” ಎಂದು ಕಾಯಿದೆ ಹೇಳುತ್ತದೆ.

ಕಾನೂನಿನ ನಿಬಂಧನೆಗಳು ಅಥವಾ ಅದರ ಅನುಸಾರವಾಗಿ ನೀಡಲಾದ ಯಾವುದೇ ನಿಯಮ ಅಥವಾ ಆದೇಶವನ್ನು ಉಲ್ಲಂಘಿಸಿ ಅಂತಹ ಪ್ರವೇಶಕ್ಕೆ ಅಗತ್ಯವಿರುವ ವೀಸಾ ಸೇರಿದಂತೆ, ಮಾನ್ಯ ಪಾಸ್‌ಪೋರ್ಟ್ ಅಥವಾ ಇತರ ಪ್ರಯಾಣ ದಾಖಲೆಯಿಲ್ಲದೆ ಭಾರತದ ಯಾವುದೇ ಪ್ರದೇಶಕ್ಕೆ ಪ್ರವೇಶಿಸುವ ಯಾವುದೇ ವಿದೇಶಿ, ಐದು ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಗೆ ಜೈಲು ಶಿಕ್ಷೆ ಅಥವಾ ಐದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ದಂಡ ಅಥವಾ ಎರಡನ್ನೂ ವಿಧಿಸಬಹುದು ಎಂದು ಕಾಯ್ದೆ ಹೇಳುತ್ತದೆ.

ಈ ಶಾಸನವು “ಯಾವುದೇ ವಿದೇಶಿಯರಿಂದ ಆಗಾಗ್ಗೆ ಭೇಟಿ ನೀಡಲ್ಪಡುವ” ಸ್ಥಳಗಳ ಮೇಲೆ ನಿಯಂತ್ರಣ ಸಾಧಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರ ನೀಡುತ್ತದೆ. ಮಾಲೀಕರು ತಮ್ಮ ಆವರಣವನ್ನು ನಿರ್ಭಂದಿಸಲು, ನಿರ್ದಿಷ್ಟ ಷರತ್ತುಗಳ ಅಡಿಯಲ್ಲಿ ಅದರ ಬಳಕೆಯನ್ನು ಅನುಮತಿಸಲು ಅಥವಾ ಎಲ್ಲಾ ಅಥವಾ “ನಿರ್ದಿಷ್ಟ ವರ್ಗ” ವಿದೇಶಿಯರಿಗೆ ಪ್ರವೇಶವನ್ನು ನಿರಾಕರಿಸಲು ಒತ್ತಾಯಿಸುತ್ತದೆ.

ಈ ಕಾಯಿದೆಯು ವಿದೇಶಿಯರು ಮತ್ತು ವಲಸೆಗೆ ಸಂಬಂಧಿಸಿದ ಎಲ್ಲ ವಿಷಯಗಳನ್ನು ನಿಯಂತ್ರಿಸಲು ಸಮಗ್ರ ಶಾಸನವಾಗಿದೆ.

ವಿದೇಶಿಯರು ಮತ್ತು ವಲಸೆಗೆ ಸಂಬಂಧಿಸಿದ ವಿಷಯಗಳನ್ನು ಇಲ್ಲಿಯವರೆಗೆ ನಾಲ್ಕು ಕಾಯಿದೆಗಳ ಮೂಲಕ ನಿರ್ವಹಿಸಲಾಗಿದೆ. ಅಂದರೆ ಪಾಸ್‌ಪೋರ್ಟ್ (ಭಾರತಕ್ಕೆ ಪ್ರವೇಶ) ಕಾಯ್ದೆ, 1920, ವಿದೇಶಿಯರ ನೋಂದಣಿ ಕಾಯ್ದೆ, 1939, ವಿದೇಶಿಯರ ಕಾಯ್ದೆ, 1946 ಮತ್ತು ವಲಸೆ (ವಾಹಕಗಳ ಹೊಣೆಗಾರಿಕೆ) ಕಾಯ್ದೆಗಳು ಸೇರಿವೆ. ಈ ಎಲ್ಲ ಕಾನೂನುಗಳನ್ನು ಈಗ ರದ್ದುಗೊಳಿಸಲಾಗಿದೆ.

2ನೇ ರ‍್ಯಾಂಕ್ ಪಡೆದಿದ್ದರೂ ಪಿಎಚ್‌ಡಿ ಪ್ರವೇಶ ನಿರಾಕರಣೆ: 14ನೇ ದಿನಕ್ಕೆ ಕಾಲಿಟ್ಟ ದಲಿತ ವಿದ್ಯಾರ್ಥಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...