Homeಮುಖಪುಟರಿಲಯನ್ಸ್ ಜಿಯೋಗೆ 10 ವರ್ಷಗಳಿಂದ ಶುಲ್ಕ ವಿಧಿಸದ ಬಿಎಸ್‌ಎನ್‌ಎಲ್; ಸರ್ಕಾರಿ ಬೊಕ್ಕಸಕ್ಕೆ ₹2000 ಕೋಟಿ ನಷ್ಟ!

ರಿಲಯನ್ಸ್ ಜಿಯೋಗೆ 10 ವರ್ಷಗಳಿಂದ ಶುಲ್ಕ ವಿಧಿಸದ ಬಿಎಸ್‌ಎನ್‌ಎಲ್; ಸರ್ಕಾರಿ ಬೊಕ್ಕಸಕ್ಕೆ ₹2000 ಕೋಟಿ ನಷ್ಟ!

- Advertisement -
- Advertisement -

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಮುಕೇಶ್ ಅಂಬಾನಿ ಅವರ ರಿಲಾಯನ್ಸ್‌ ಜಿಯೋ ಕೇಂದ್ರ ಸರ್ಕಾರದ ಸ್ವಾಮ್ಯದ ಬಿಎಸ್‌ಎನ್‌ಎಲ್‌ನ ಮೂಲ ಸೌಕರ್ಯ ಬಳಸಿದ್ದಕ್ಕಾಗಿ 2014ರಿಂದ 10 ವರ್ಷಗಳ ಕಾಲ ಯಾವುದೇ ಶುಲ್ಕ ವಿಧಿಸದ ಕಾರಣ ಸರ್ಕಾರಕ್ಕೆ 1,757.56 ಕೋಟಿ ರೂಪಾಯಿಗಳು ನಷ್ಟ ಉಂಟಾಗಿದೆ ಎಂದು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಮಂಗಳವಾರ ತಿಳಿಸಿದ್ದಾರೆ. ರಿಲಯನ್ಸ್ ಜಿಯೋಗೆ

ಟೆಲಿಕಾಂ ಮೂಲಸೌಕರ್ಯ ಪೂರೈಕೆದಾರರಿಗೆ (ಟಿಐಪಿ) ಪಾವತಿಸಿದ ಆದಾಯ ಪಾಲಿನಿಂದ ಪರವಾನಗಿ ಶುಲ್ಕದ ಪಾಲನ್ನು ಕಡಿತಗೊಳಿಸಲು ವಿಫಲವಾದ ಕಾರಣ ಬಿಎಸ್‌ಎನ್‌ಎಲ್ ₹38.36 ಕೋಟಿ ನಷ್ಟ ಅನುಭವಿಸಿದೆ ಎಂದು ಸಿಎಜಿ ಹೇಳಿಕೆಯಲ್ಲಿ ತಿಳಿಸಿದೆ. ರಿಲಯನ್ಸ್ ಜಿಯೋಗೆ

“ಬಿಎಸ್‌ಎನ್‌ಎಲ್ ಮೆಸರ್ಸ್. ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್ (ಆರ್‌ಜೆಐಎಲ್) ಜೊತೆಗಿನ ಮಾಸ್ಟರ್ ಸರ್ವಿಸ್ ಒಪ್ಪಂದವನ್ನು (ಎಂಎಸ್‌ಎ) ಜಾರಿಗೊಳಿಸಲು ವಿಫಲವಾಗಿದೆ. ಜೊತೆಗೆ ಬಿಎಸ್‌ಎನ್‌ಎಲ್‌ನ ಹಂಚಿಕೆಯ ಮೂಲಸೌಕರ್ಯದಲ್ಲಿ ಬಳಸಲಾದ ಹೆಚ್ಚುವರಿ ತಂತ್ರಜ್ಞಾನಕ್ಕೆ ಬಿಲ್ ಮಾಡದ ಪರಿಣಾಮವಾಗಿ ಮೇ 2014 ರಿಂದ ಮಾರ್ಚ್ 2024 ರ ನಡುವೆ ಸರ್ಕಾರಿ ಖಜಾನೆಗೆ ₹1,757.76 ಕೋಟಿ ನಷ್ಟ ಮತ್ತು ದಂಡದ ಬಡ್ಡಿ ಉಂಟಾಗಿದೆ” ಎಂದು ಸಿಎಜಿ ತಿಳಿಸಿದೆ.

ಬಿಎಸ್‌ಎನ್‌ಎಲ್‌ನಿಂದ ನಿಷ್ಕ್ರಿಯ ಮೂಲಸೌಕರ್ಯ ಹಂಚಿಕೆ ಶುಲ್ಕದ ಬಿಲ್ಲಿಂಗ್‌ನಲ್ಲಿ ಕಡಿಮೆ ಮೊತ್ತವನ್ನು ಪಾವತಿಸಲಾಗಿದೆ ಎಂದು ಸಿಎಜಿ ಹೇಳಿದೆ.

“ಬಿಎಸ್‌ಎನ್‌ಎಲ್ ಮತ್ತು ರಿಲಯನ್ಸ್‌ ನಡುವಿನ ಒಪ್ಪಂದದಲ್ಲಿ ನಿಗದಿಪಡಿಸಿದ ನಿಯಮಗಳು ಮತ್ತು ಷರತ್ತುಗಳನ್ನು ಪಾಲಿಸದಿರುವುದು, ಎಸ್ಕಲೇಷನ್ ಷರತ್ತನ್ನು ಅನ್ವಯಿಸದ ಕಾರಣ ಮೂಲಸೌಕರ್ಯ ಹಂಚಿಕೆ ಶುಲ್ಕಗಳಿಗೆ ಸಂಬಂಧಿಸಿದಂತೆ 29 ಕೋಟಿ ರೂ.ಗಳ ಆದಾಯ ನಷ್ಟ (ಜಿಎಸ್‌ಟಿ ಸೇರಿದಂತೆ) ಉಂಟಾಗಿದೆ” ಎಂದು ಹೇಳಿಕೆ ತಿಳಿಸಿದೆ.

ಸಿಎಜಿಯ ಈ ಸಂಶೋಧನೆಗಳು ಬಿಎಸ್‌ಎನ್‌ಎಲ್‌ನ ಹಣಕಾಸು ನಿರ್ವಹಣೆ ಮತ್ತು ಒಪ್ಪಂದ ಜಾರಿಯಲ್ಲಿ ಗಂಭೀರ ಲೋಪಗಳನ್ನು ಬಹಿರಂಗವಾಗಿದೆ. ಜೊತೆಗೆ ಇದು ಸರ್ಕಾರಿ ಸ್ವಾಮ್ಯದ ಟೆಲಿಕಾಂ ವಲಯದಲ್ಲಿ ಆದಾಯ ಸೋರಿಕೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ. ಅದಾಗ್ಯೂ, ಸಿಎಜಿಯ ಅವಲೋಕನಗಳಿಗೆ ಕೇಂದ್ರ ಸರ್ಕಾರ ಇನ್ನೂ ಪ್ರತಿಕ್ರಿಯಿಸಿಲ್ಲ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...