Homeಮುಖಪುಟತನ್ನ ಕಲಾವಿದರ ಪಟ್ಟಿಯಿಂದ ಕುನಾಲ್‌ ಕಾಮ್ರಾರನ್ನು ಹೊರಗಿಟ್ಟ ಬುಕ್‌ಮೈಶೋ!

ತನ್ನ ಕಲಾವಿದರ ಪಟ್ಟಿಯಿಂದ ಕುನಾಲ್‌ ಕಾಮ್ರಾರನ್ನು ಹೊರಗಿಟ್ಟ ಬುಕ್‌ಮೈಶೋ!

- Advertisement -
- Advertisement -

ಬುಕ್‌ಮೈಶೊ (BookMyShow) ತನ್ನ ವೇದಿಕೆಗಳಿಂದ ಸ್ಟ್ಯಾಂಡ್‌ ಅಪ್ ಹಾಸ್ಯನಟ ಕುನಾಲ್ ಕಮ್ರಾ ಅವರನ್ನು ಕಲಾವಿದರ ಪಟ್ಟಿಯಿಂದ ಹೊರಗಿಟ್ಟಿದೆ ಎಂದು ಶಿವಸೇನೆ ಕಾರ್ಯಕರ್ತ ರಾಹುಲ್ ಕನಾಲ್ ಶನಿವಾರ ಹೇಳಿದ್ದಾರೆ. ಕುನಾಲ್ ಅವರ ಹೆಸರು ಈಗಾಗಲೆ ಬುಕ್‌ಮೈಶೊನಿಂದ ಕಾಣೆಯಾಗಿದೆ. ಅದಾಗ್ಯೂ, ಈ ಬಗ್ಗೆ ಬುಕ್‌ ಮೈ ಶೊ ತಂಡವು ಯಾವುದೇ ಹೇಳಿಕೆಗಳನ್ನು ನೀಡಲು ಮುಂದಾಗಿಲ್ಲ ಎಂದು ವರದಿಯಾಗಿದೆ. ತನ್ನ ಕಲಾವಿದರ ಪಟ್ಟಿಯಿಂದ

ತನ್ನ ಪೋರ್ಟಲ್ ಅನ್ನು ಸ್ವಚ್ಛವಾಗಿಟ್ಟು ಅಂತಹ ಕಲಾವಿದರನ್ನು ಶುದ್ಧ ಮನರಂಜನೆಯ ಪಟ್ಟಿಯಿಂದ ಹೊರಗಿಟ್ಟಿದ್ದಕ್ಕಾಗಿ ಬುಕ್‌ಮೈಶೊ ಸಿಇಒ ಆಶಿಶ್ ಹೇಮರಾಜ ಅವರಿಗೆ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಸಾಮಾಜಿಕ ಮಾಧ್ಯಮ ಉಸ್ತುವಾರಿ ಹೊಂದಿರುವ ರಾಹುಲ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

“ಈ ಕಲಾವಿದನನ್ನು ನಿಮ್ಮ ಮಾರಾಟ ಮತ್ತು ಪ್ರಚಾರ ಪಟ್ಟಿಯಿಂದ ತೆಗೆದುಹಾಕಲು ನಿಮ್ಮ ತಂಡಕ್ಕೆ ನೀವು ನಿರಂತರವಾಗಿ ಬೆಂಬಲ ನೀಡಿದ್ದಕ್ಕಾಗಿ ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತಿದ್ದೇನೆ. ಪ್ರದರ್ಶನದ ಹುಡುಕಾಟದಿಂದ ಅವರನ್ನು ಹೊರತೆಗೆದಿದ್ದಕ್ಕಾಗಿ ಧನ್ಯವಾದಗಳು. ಶಾಂತಿಯನ್ನು ಕಾಪಾಡಿಕೊಳ್ಳುವಲ್ಲಿ ಮತ್ತು ಅದೇ ಸಮಯದಲ್ಲಿ ನಮ್ಮ ಭಾವನೆಗಳನ್ನು ಗೌರವಿಸುವಲ್ಲಿ ನಿಮ್ಮ ನಂಬಿಕೆ ಬಹಳ ಮುಖ್ಯವಾಗಿದೆ” ಎಂದು ರಾಹುಲ್ ಅವರು ಹೇಮರಾನ್‌ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಮುಂಬೈ ನಿವಾಸಿಗಳು ಪ್ರತಿಯೊಂದು ರೀತಿಯ ಕಲೆಯನ್ನು ಪ್ರೀತಿಸುತ್ತಾರೆ ಮತ್ತು ನಂಬುತ್ತಾರೆ. ಆದರೆ ವೈಯಕ್ತಿಕ ಕಾರ್ಯಸೂಚಿಗಳನ್ನಲ್ಲ ಎಂದು ಅವರು ಹೇಳಿದ್ದಾರೆ. “ನಾವು ಬುಕ್‌ಮೈಶೋನ ಮೌಲ್ಯಗಳ ಬಗ್ಗೆ ನಿಮ್ಮ ಬದ್ಧತೆಯನ್ನು ಗಾಢವಾಗಿ ಗೌರವಿಸುತ್ತೇವೆ. ಇದು ಬೆಂಬಲ ಮತ್ತು ಗ್ರಾಹಕ ಅನುಭವಕ್ಕೆ ಸಂಬಂಧಿಸಿದೆ. ನಿಮ್ಮ ದೃಷ್ಟಿಕೋನ ಮತ್ತು ನಾಯಕತ್ವ ನಿಜವಾಗಿಯೂ ಪ್ರೇರಕವಾಗಿದೆ. ನಿಮ್ಮ ತಂಡವನ್ನು ನಮಗೆ ನೀಡಿ ಇದನ್ನು ಆದಷ್ಟು ಬೇಗ ತೀರ್ಮಾನಿಸಿದ್ದಕ್ಕಾಗಿ ಧನ್ಯವಾದಗಳು.” ಎಂದು ರಾಹುಲ್ ಹೇಳಿದ್ದಾರೆ.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಶಿಂಧೆ ಅವರನ್ನು ದೇಶದ್ರೋಹಿ ಎಂದು ಉಲ್ಲೇಖಿಸಿದ್ದನ್ನು ವಿರೋಧಿಸಿ ಕುನಾಲ್ ಪ್ರದರ್ಶನ ನೀಡಿದ್ದ ಸ್ಟುಡಿಯೋವನ್ನು ರಾಹುಲ್ ಧ್ವಂಸಗೊಳಿಸಿದ್ದರು. ಹಾಗಾಗಿ ಅವರ ಇರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಈ ಮಧ್ಯೆ, ಕುನಾಲ್ ಅವರು ಶನಿವಾರ ಮುಂಬೈ ಪೊಲೀಸರ ಮುಂದೆ ಹಾಜರಾಗಲು ವಿಫಲರಾಗಿದ್ದಾರೆ. ಇದು ಅವರ ಮೂರನೇ ಗೈರಾಗಿದ್ದು, ಇದಕ್ಕೂ ಮುಂಚೆ ಅವರು ಪೊಲೀಸರು ನೀಡಿದ್ದ ಎರಡು ಸಮನ್ಸ್‌ ಅನ್ನು ತಪ್ಪಿಸಿಕೊಂಡಿದ್ದರು.

ಈ ನಡುವೆ ಮದ್ರಾಸ್ ಹೈಕೋರ್ಟ್ ಏಪ್ರಿಲ್ 7 ರವರೆಗೆ ಕುನಾಲ್‌ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. ತಾನು ತಮಿಳುನಾಡಿನ ಖಾಯಂ ನಿವಾಸಿ ಆಗಿರುವುದರಿಂದ ತನ್ನ ಅರ್ಜಿ ಆಲಿಸುವ ಹಕ್ಕು ಮದ್ರಾಸ್  ಹೈಕೋರ್ಟ್‌ಗೆ ಇದೆ ಎಂದು ಅವರು ಪ್ರತಿಪಾದಿಸಿದ್ದರು. ಅವರ ವಿರುದ್ಧ ನಾಸಿಕ್ ಗ್ರಾಮೀಣ, ಜಲಗಾಂವ್ ಮತ್ತು ನಾಸಿಕ್ (ನಂದಗಾಂವ್) ನಲ್ಲಿ ದಾಖಲಾಗಿರುವ ಮೂರು ಎಫ್‌ಐಆರ್‌ಗಳನ್ನು ಖಾರ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ತನ್ನ ಕಲಾವಿದರ ಪಟ್ಟಿಯಿಂದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ‌ಉತ್ತರ ಪ್ರದೇಶ: ಆರ್‌ಎಸ್‌ಎಸ್‌ ಕುರಿತ ಪ್ರಶ್ನೆಗಳನ್ನು ಸಿದ್ಧಪಡಿಸಿದ ಪ್ರಾಧ್ಯಾಪಕಿಗೆ ಪರೀಕ್ಷೆ, ಮೌಲ್ಯಮಾಪನ ಕೆಲಸಗಳಿಂದ ಜೀವಮಾನ ನಿಷೇಧ!

‌ಉತ್ತರ ಪ್ರದೇಶ: ಆರ್‌ಎಸ್‌ಎಸ್‌ ಕುರಿತ ಪ್ರಶ್ನೆಗಳನ್ನು ಸಿದ್ಧಪಡಿಸಿದ ಪ್ರಾಧ್ಯಾಪಕಿಗೆ ಪರೀಕ್ಷೆ, ಮೌಲ್ಯಮಾಪನ ಕೆಲಸಗಳಿಂದ ಜೀವಮಾನ ನಿಷೇಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...