Homeಮುಖಪುಟವಿಕಿಪೀಡಿಯಾ ಪೇಜ್‌ ತೆಗೆದುಹಾಕುವ ದೆಹಲಿ ಹೈಕೋರ್ಟ್‌ನ ಆದೇಶ ಪ್ರಶ್ನಿಸಿದ ಸುಪ್ರೀಂಕೋರ್ಟ್

ವಿಕಿಪೀಡಿಯಾ ಪೇಜ್‌ ತೆಗೆದುಹಾಕುವ ದೆಹಲಿ ಹೈಕೋರ್ಟ್‌ನ ಆದೇಶ ಪ್ರಶ್ನಿಸಿದ ಸುಪ್ರೀಂಕೋರ್ಟ್

- Advertisement -
- Advertisement -

ಆನ್‌ಲೈನ್ ವಿಶ್ವಕೋಶ ವಿಕಿಪೀಡಿಯಾ ವಿರುದ್ಧ ಸುದ್ದಿ ಸಂಸ್ಥೆ ಏಷ್ಯನ್ ನ್ಯೂಸ್ ಇಂಟರ್‌ನ್ಯಾಷನಲ್ (ANI) ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದ ವಿವಾದಿತ ಪೇಜ್ ಅನ್ನು ತೆಗೆದುಹಾಕುವಂತೆ ನಿರ್ದೇಶಿಸಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಪ್ರಶ್ನಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ವಿಕಿಪೀಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿತ್ತು. ವಿಕಿಪೀಡಿಯಾ ಪೇಜ್‌

ವಿಕಿಪೀಡಿಯಾವನ್ನು ನಿರ್ವಹಿಸುವ ವಿಕಿಮೀಡಿಯಾ ಫೌಂಡೇಶನ್ ವಿರುದ್ಧ ಜುಲೈ 2024 ರಲ್ಲಿ ANI ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿವರಗಳನ್ನು ಪುಟದಲ್ಲಿ ಉಲ್ಲೇಖಿಸಲಾಗಿತ್ತು. ಮಾನನಷ್ಟ ಪ್ರಕರಣಗಳ ವಿಚಾರಣೆಯ ಸಮಯದಲ್ಲಿ ದೆಹಲಿ ಹೈಕೋರ್ಟ್ ಮಾಡಿದ ಅವಲೋಕನಗಳ ಬಗ್ಗೆಯೂ ಅದು ವಿವರಗಳನ್ನು ಪಟ್ಟಿ ಮಾಡಿತ್ತು.

ಹೈಕೋರ್ಟ್ ನಿರ್ದೇಶನಗಳನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ನ್ಯಾಯಾಲಯ ನಿಂದನೆಯಿದ್ದರೆ ಮಾತ್ರ ಕೆಳ ನ್ಯಾಯಾಲಯವು ಅದನ್ನು ತೆಗೆದುಹಾಕುವಂತೆ ಆದೇಶಿಸಬಹುದಿತ್ತು ಎಂದು ಹೇಳಿದೆ. ಈ ಹಿಂದೆ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಎಎನ್‌ಐಗೆ ನೋಟಿಸ್ ನೀಡಿತ್ತು.

ಹೈಕೋರ್ಟ್ ಮಾಧ್ಯಮಗಳ ಟೀಕೆಗಳಿಗೆ ಪ್ರತಿಕ್ರಿಯಿಸುವಲ್ಲಿ “ಸೂಕ್ಷ್ಮವಾಗಿ” ವರ್ತಿಸುತ್ತಿದೆ ಎಂದು ನ್ಯಾಯಾಲಯ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. .

ಜುಲೈ 2024 ರಲ್ಲಿ, ANI ಸುದ್ದಿ ಸಂಸ್ಥೆಯು ವಿಕಿಪೀಡಿಯಾದ ತನ್ನ ANI ಪೇಜ್ “ದಾರಿತಪ್ಪಿಸುವ, ನಕಾರಾತ್ಮಕ ಮತ್ತು ಮಾನನಷ್ಟಕರ” ತಿದ್ದುಪಡಿಗಳನ್ನು ಅನುಮತಿಸುತ್ತಿದೆ. ಈ ತಿದ್ದುಪಡಿ ಮಾಡಲು ಅನುಮತಿ ನೀಡಿದ್ದಕ್ಕಾಗಿ ANI ಮಾನನಷ್ಟ ಮೊಕದ್ದಮೆ ಹೂಡಿತ್ತು. ವಿಕಿಪೀಡಿಯಾ ತನ್ನ ANI ಪೇಜ್‌ನಲ್ಲಿ ಈ ಸುದ್ದಿ ಸಂಸ್ಥೆಯನ್ನು ಕೇಂದ್ರ ಸರ್ಕಾರದ “ಪ್ರಚಾರ ಸಾಧನ” ಎಂದು ಉಲ್ಲೇಖಿಸಿತ್ತು.

ಮಾನನಷ್ಟ ಪ್ರಕರಣದ ನಂತರ, ವಿಕಿಪೀಡಿಯಾವು ದೆಹಲಿ ಹೈಕೋರ್ಟ್‌ನ ಕೋಪಕ್ಕೆ ಗುರಿಯಾದ ಮೊಕದ್ದಮೆಯ ಮೇಲೆಯೇ ಒಂದು ಪೇಜ್‌ ಅನ್ನು ರಚಿಸಿತ್ತು. ಈ ನಡೆಯನ್ನು ಅಪಾಯಕಾರಿ ಎಂದು ಬಣ್ಣಿಸಿದ್ದ ದೆಹಲಿ ಹೈಕೋರ್ಟ್, ಇದನ್ನು ಯಾರಾದರೂ ಇದ್ದಬಹುದು ಎಂದು ದೂರಿತ್ತು. ವಿಕಿಪೀಡಿಯಾ ಪೇಜ್‌

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‌ಉತ್ತರ ಪ್ರದೇಶ: ಆರ್‌ಎಸ್‌ಎಸ್‌ ಕುರಿತ ಪ್ರಶ್ನೆಗಳನ್ನು ಸಿದ್ಧಪಡಿಸಿದ ಪ್ರಾಧ್ಯಾಪಕಿಗೆ ಪರೀಕ್ಷೆ, ಮೌಲ್ಯಮಾಪನ ಕೆಲಸಗಳಿಂದ ಜೀವಮಾನ ನಿಷೇಧ!

‌ಉತ್ತರ ಪ್ರದೇಶ: ಆರ್‌ಎಸ್‌ಎಸ್‌ ಕುರಿತ ಪ್ರಶ್ನೆಗಳನ್ನು ಸಿದ್ಧಪಡಿಸಿದ ಪ್ರಾಧ್ಯಾಪಕಿಗೆ ಪರೀಕ್ಷೆ, ಮೌಲ್ಯಮಾಪನ ಕೆಲಸಗಳಿಂದ ಜೀವಮಾನ ನಿಷೇಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...