Homeಕರ್ನಾಟಕ'ರೋಹಿತ್ ಕಾಯ್ದೆ'ಗಾಗಿ ಜನಾಂದೋಲನವಾಗಬೇಕು: ದಸಂಸ ಮುಖಂಡ ಮಾವಳ್ಳಿ ಶಂಕರ್

‘ರೋಹಿತ್ ಕಾಯ್ದೆ’ಗಾಗಿ ಜನಾಂದೋಲನವಾಗಬೇಕು: ದಸಂಸ ಮುಖಂಡ ಮಾವಳ್ಳಿ ಶಂಕರ್

- Advertisement -
- Advertisement -

ಏಪ್ರಿಲ್ 14 ರಂದು ಅಥವಾ ಅದಕ್ಕೂ ಮೊದಲು ಕರ್ನಾಟಕದಲ್ಲಿ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವ ಕ್ರಮಗಳನ್ನು ರಾಜ್ಯ ಸರ್ಕಾರ ಘೋಷಿಸಬೇಕೆಂದು ಒತ್ತಾಯಿಸಿ, ರಾಜ್ಯದ ಹಲವು ವಿವಿಗಳ ವಿದ್ಯಾರ್ಥಿಗಳು, ಸಾಮಾಜಿಕ ಕಾರ್ಯಕರ್ತರು ಶನಿವಾರ ಫ್ರೀಡಂ ಪಾರ್ಕ್‌ನಲ್ಲಿ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ ) ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್, “ರೋಹಿತ್ ಕಾಯ್ದೆಗಾಗಿ ಈ ಆಂದೋಲನ ಒಂದು ಜನಾಂದೋಲನವಾಗಬೇಕು. ದೇಶದ ವಿಶ್ವವಿದ್ಯಾನಿಲಯಗಳಲ್ಲಿ ದಲಿತ ವಿದ್ಯಾರ್ಥಿಗಳು ಅವರ ಜೀವ ಕಳೆದಕೊಳ್ಳುತ್ತಲೇ ಇದ್ದಾರೆ. ಸಮಾನತೆ ಬಗ್ಗೆ ಮಾತನಾಡುವ ನಮ್ಮ ಪ್ರಧಾನಮಂತ್ರಿಗಳು ಈ ಬಗ್ಗೆ ಮಾತನಾಡುವುದಿಲ್ಲ. ಅವರ ಸಂಘಟನೆಯವರು (ಆರ್‌ಎಸ್‌ಎಸ್‌) ದಲಿತ ವಿದ್ಯಾರ್ಥಿಗಳ ಸಾವಿಗೆ ಕಾರಣವಾದಾಗ ಅವರು ಖಂಡಿಸುವುದೇ ಇಲ್ಲ. ಕರ್ನಾಟಕದಾದ್ಯಂತ ವಿಶ್ವವಿದ್ಯಾನಿಲಯಗಳನ್ನು ಈಗ ವ್ಯವಸ್ಥಿತವಾಗಿ ಕೇಸರಿಕರಣ ಮಾಡಲಾಗುತ್ತಿದೆ; ಪ್ರಜಾಪ್ರಭುತ್ವ ವಿರೋಧಿಯಾಗಿ ನಡೆಸಲಾಗುತ್ತಿದೆ” ಎಂದು ವಾಗ್ದಾಳಿ ನಡೆಸಿದರು.

ದಲಿತ ಹೋರಾಟಗಾರರರಾದ ಬಸವರಾಜ್ ಕೌತಾಳ್ ಮಾತನಾಡಿ, ಈ ಆಂದೋಲನದಲ್ಲಿ ಎಲ್ಲ ದಲಿತ ಸಂಘಟನೆಗಳು ಕೈಜೋಡಿಸಬೇಕು ಎಂದು ಕರೆ ಕೊಟ್ಟರು. “2014 ರಿಂದ 2024 ರವರೆಗೆ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಕ್ರೌರ್ಯ ಮತ್ತು ದಬ್ಬಾಳಿಕೆಯಿಂದಾಗಿ ಸುಮಾರು 122 ದಲಿತ, ಆದಿವಾಸಿ ಒಬಿಸಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಸಾವುಗಳನ್ನು ತಡೆಯಲು ರಾಜ್ಯದಲ್ಲಿ ರೋಹಿತ್ ಕಾಯ್ದೆ ಜಾರಿಯಾಗಲೇಬೇಕು” ಎಂದರು.

ಕೆ.ಪಿ. ಅಶ್ವಿನಿ ಮಾತನಾಡಿ “ರೋಹಿತ್ ವೇಮುಲಾ ಅವರ ಸಾಂಸ್ಥಿಕ ಹತ್ಯೆಯನ್ನು ಸಾಧ್ಯವಾದಷ್ಟು ಕಠಿಣವಾಗಿ ಖಂಡಿಸಬೇಕು. ರಾಜ್ಯ ಮತ್ತು ಕೇಂದ್ರ ವಿಶ್ವವಿದ್ಯಾಲಯಗಳಲ್ಲಿ, ವಿದ್ಯಾರ್ಥಿಗಳು ಹೇಳಲಾಗದ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಅಥವಾ ಖಾಸಗಿ ವಿಶ್ವವಿದ್ಯಾಲಯಗಳಲ್ಲಿರಲಿ, ಜಾತಿ ತಾರತಮ್ಯದ ಬಗ್ಗೆ ಮಾತನಾಡಲು ಅವಕಾಶವೇ ಇಲ್ಲ . ಜಾತಿ ತಾರತಮ್ಯವು ಹಿಂದಿನಕಾಲದ ಸಮಸ್ಯೆ ಎಂಬ ಅಭಿಪ್ರಾಯದಲ್ಲಿ ಜನರು ಬದುಕುತ್ತಿದ್ದಾರೆ. ಆದರೆ, ಅದು ನಿಜವಲ್ಲ. ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗೆ, ಸಾಮಾಜಿಕ ಮತ್ತು ಆರ್ಥಿಕ ಚಲನಶೀಲತೆಯನ್ನು ಪಡೆಯಲು ಶಿಕ್ಷಣವು ಏಕೈಕ ಮಾರ್ಗವಾಗಿದೆ. ಅದನ್ನು ಸಹ ನಮ್ಮಿಂದ ಕಸಿದುಕೊಳ್ಳಲಾಗುತ್ತಿದೆ. ದೌರ್ಜನ್ಯ ತಡೆ ಕಾಯ್ದೆಯು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ಪರಿಹರಿಸಲು ಯಾವುದೇ ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊಂದಿಲ್ಲದ ಕಾರಣ ನಾವು ಪ್ರತ್ಯೇಕ ಕಾನೂನಿಗೆ ಒತ್ತಾಯಿಸುತ್ತಿದ್ದೇವೆ. ಶಿಕ್ಷಣವು ಪ್ರಗತಿಪರ ಸ್ಥಳವಾಗಿರಬೇಕು. ಏಪ್ರಿಲ್ 14 ರ ಮೊದಲು, ರಾಜ್ಯ ಸರ್ಕಾರವು ರೋಹಿತ್ ಕಾಯ್ದೆಯ ಬಗ್ಗೆ ಚರ್ಚಿಸಲು ಕನಿಷ್ಠ ಒಂದು ಸಮಿತಿಯನ್ನು ರಚಿಸಬೇಕು” ಎಂದು ಆಗ್ರಹಿಸಿದರು.

ಶಿಕ್ಷಣ ತಜ್ಞ ಮತ್ತು ಸಾಮಾಜಿಕ ಕಾರ್ಯಕರ್ತ ಶ್ರೀಪಾದ್ ಭಟ್ ಮಾತನಾಡಿ, “ರಾಜ್ಯ ಸರ್ಕಾರವು ಎಸ್‌ಸಿ/ಎಸ್‌ಟಿ ಆಯೋಗಕ್ಕೆ ಅಧ್ಯಕ್ಷರನ್ನು ನೇಮಿಸುವ ಮೂಲಕ ಅಂಚಿನಲ್ಲಿರುವ ವರ್ಗಗಳಿಗೆ ತನ್ನ ಬದ್ಧತೆಯನ್ನು ತೋರಿಸಬೇಕು. ಇತ್ತೀಚೆಗೆ, ಯುಜಿಸಿ ಕರಡು ತಾರತಮ್ಯ ವಿರೋಧಿ ನಿಯಂತ್ರಣವನ್ನು ಮಂಡಿಸಿತು. ಆದರೆ, ಈ ಕರಡು ಜಾತಿ, ಲಿಂಗ, ಧರ್ಮದ ತಾರತಮ್ಯವನ್ನು ಒಟ್ಟಿಗೆ ನೋಡುತ್ತದೆ. ಈ ಎಲ್ಲ ತಾರತಮ್ಯಗಳನ್ನು ನಿಯಂತ್ರಿಸಬೇಕು. ಆದರೆ, ಜಾತಿ ತಾರತಮ್ಯವನ್ನು ನಿರ್ದಿಷ್ಟ ಗಮನದಿಂದ ನೋಡಬೇಕು ಮತ್ತು ನಿರ್ದಿಷ್ಟವಾಗಿ ಪರಿಹರಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಯುಜಿಸಿ ಕರಡು ಈ ದೃಷ್ಟಿಕೋನವನ್ನು ದುರ್ಬಲಗೊಳಿಸುತ್ತದೆ. ಈ ಕಾಯ್ದೆಯ ಜೊತೆಗೆ, ನಾವು ವಿಶ್ವವಿದ್ಯಾಲಯಗಳಲ್ಲಿನ ರೋಸ್ಟರ್ ಪಾಯಿಂಟ್ ವ್ಯವಸ್ಥೆಯನ್ನು ಗಂಭೀರವಾಗಿ ಮರುಪರಿಶೀಲಿಸಬೇಕು. ನಾವು ಕಾಯ್ದೆಯ ಮೇಲೆ ಮಾತ್ರ ಗಮನಹರಿಸಲು ಸಾಧ್ಯವಿಲ್ಲ. ಆದರೆ, ಯುಜಿಸಿ ಏನು ಮಾಡುತ್ತಿದೆ ಎಂಬುದನ್ನು ನೋಡಲು ಮತ್ತು ಅದಕ್ಕೆ ಪ್ರತಿಕ್ರಿಯಿಸುತ್ತಲೇ ಇರಲು ಸಾಧ್ಯವಿಲ್ಲ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...