ತನ್ನ ಬಳಿ ತರಬೇತಿ ಪಡೆಯುತ್ತಿದ್ದ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬ್ಯಾಡ್ಮಿಂಟನ್ ತರಬೇತುದಾರನನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಬಾಲಕಿಯ ಅಜ್ಜಿ, ಆಕೆಯ (ಅಜ್ಜಿಯ) ಫೋನ್‌ನಿಂದ ಕೆಲವು ನಗ್ನ ಚಿತ್ರಗಳನ್ನು ಅಪರಿಚಿತ ಸಂಖ್ಯೆಗೆ ಕಳುಹಿಸಿರುವುದನ್ನು ನೋಡಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಅವರು ತಕ್ಷಣ ತನ್ನ ಪೋಷಕರಿಗೆ ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದರು.
ಈ ಬಗ್ಗೆ ತಾಯಿ ಪ್ರಶ್ನಿಸಿದಾಗ, ಹೆಚ್ಚುವರಿ ತರಬೇತಿ ಅವಧಿಗಳನ್ನು ನೀಡುವ ನೆಪದಲ್ಲಿ ತರಬೇತುದಾರ ತನ್ನ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿ ಬಹಿರಂಗಪಡಿಸಿದ್ದಾಳೆ. ಅದರ ಬಗ್ಗೆ ಯಾರಿಗೂ ಬಹಿರಂಗಪಡಿಸದಂತೆ ಬೆದರಿಕೆ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಸಂತ್ರಸ್ತೆಯ ತಾಯಿ ದೂರಿನಲ್ಲಿ ತಮ್ಮ ಮಗಳು ಎರಡು ವರ್ಷಗಳ ಹಿಂದೆ ಇಲ್ಲಿನ ಕ್ರೀಡಾ ಕೇಂದ್ರವೊಂದರಲ್ಲಿ ಬ್ಯಾಡ್ಮಿಂಟನ್ ತರಬೇತಿಗೆ ದಾಖಲಾಗಿದ್ದಳು ಎಂದು ಹೇಳಿದ್ದಾರೆ. ತರಬೇತುದಾರ ಆಕೆಯನ್ನು ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಅವನು ಆಕೆಯನ್ನು ತನ್ನ ಮನೆಗೆ ಕರೆದೊಯ್ದು ಅಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿದ್ದಾರೆ.
10ನೇ ತರಗತಿ ಪರೀಕ್ಷೆಯ ನಂತರ, ಬಾಲಕಿ ತನ್ನ ಅಜ್ಜಿಯ ಮನೆಗೆ ಹೋಗಿದ್ದಳು. ಮಾರ್ಚ್ 30 ರಂದು ತನ್ನ ಅಜ್ಜಿಯ ಮೊಬೈಲ್ ಫೋನ್‌ನಿಂದ ತನ್ನ ನಗ್ನ ಫೋಟೋಗಳನ್ನು ತರಬೇತುದಾರನಿಗೆ ಅವನ ಒತ್ತಾಯದ ಮೇರೆಗೆ ಕಳುಹಿಸಿದ್ದಾಳೆ ಎಂದು ದೂರುದಾರರು ಆರೋಪಿಸಿದ್ದಾರೆ.
ದೂರಿನ ಆಧಾರದ ಮೇಲೆ, ತಮಿಳುನಾಡು ಮೂಲದ ತರಬೇತುದಾರನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಗುರುವಾರ ಪ್ರಕರಣದಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಚಾರಣೆಯ ಸಮಯದಲ್ಲಿ, ಆರೋಪಿಯು ಬಾಲಕಿಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ, ಆಕೆಯ ನಗ್ನ ಫೋಟೋಗಳನ್ನು ತೆಗೆದುಕೊಂಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಅದು ಅವನ ಫೋನ್‌ನಲ್ಲಿಯೂ ಕಂಡುಬಂದಿದೆ. ಅವನ ಫೋನ್‌ನಲ್ಲಿ ಇತರ ಹುಡುಗಿಯರ ನಗ್ನ ಫೋಟೋಗಳು ಸಹ ಕಂಡುಬಂದಿವೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ಬಿಟಿಎಂ ಲೇಔಟ್ ಲೈಂಗಿಕ ದೌರ್ಜನ್ಯ ಪ್ರಕರಣ; ‘ದೊಡ್ಡ ನಗರಗಳಲ್ಲಿ ಅಲ್ಲೊಂದು ಇಲ್ಲೊಂದು ನಡೆಯುತ್ತವೆ’ ಎಂದ ಪರಮೇಶ್ವರ್


