Homeಮುಖಪುಟ'ಜೈಲಿಗೆ ಹೋದರೂ ಸರಿ, ಅರ್ಹರು ಕೆಲಸ ಕಳೆದುಕೊಳ್ಳಲು ಬಿಡುವುದಿಲ್ಲ': ವಜಾಗೊಂಡ ಶಿಕ್ಷಕರ ಪರ ನಿಂತ ಮಮತಾ...

‘ಜೈಲಿಗೆ ಹೋದರೂ ಸರಿ, ಅರ್ಹರು ಕೆಲಸ ಕಳೆದುಕೊಳ್ಳಲು ಬಿಡುವುದಿಲ್ಲ’: ವಜಾಗೊಂಡ ಶಿಕ್ಷಕರ ಪರ ನಿಂತ ಮಮತಾ ಬ್ಯಾನರ್ಜಿ

- Advertisement -
- Advertisement -

“ಜೈಲಿಗೆ ಹೋದರೂ ಸರಿ, ಅರ್ಹರು ಶಾಲಾ ಉದ್ಯೋಗ ಕಳೆದುಕೊಳ್ಳಲು ನಾನು ಬಿಡುವುದಿಲ್ಲ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (ಎಸ್‌ಎಸ್‌ಸಿ) 2016ರಲ್ಲಿ ರಾಜ್ಯದ ಶಾಲೆಗಳಿಗೆ ನೇಮಕ ಮಾಡಿದ ಶಿಕ್ಷಕರೂ ಸೇರಿದಂತೆ 25,000ಕ್ಕೂ ಹೆಚ್ಚು ಸಿಬ್ಬಂದಿಯ ನೇಮಕಾತಿಯನ್ನು ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ಎತ್ತಿಹಿಡಿದಿದೆ.

ಈ ಹಿನ್ನೆಲೆ, ಕೋಲ್ಕತ್ತಾದ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಕೆಲಸ ಕಳೆದುಕೊಂಡವರನ್ನು ಸೋಮವಾರ (ಏ.7) ಭೇಟಿ ಮಾಡಿದ ಸಿಎಂ ಮಮತಾ ಬ್ಯಾನರ್ಜಿ “ನಾವು ಸುಪ್ರೀಂ ಕೋರ್ಟ್ ತೀರ್ಪನ್ನು ಒಪ್ಪಿಕೊಂಡಿದ್ದೇವೆ ಎಂದು ದಯವಿಟ್ಟು ಭಾವಿಸಬೇಡಿ. ಅರ್ಹ ಅಭ್ಯರ್ಥಿಗಳು ಕೆಲಸ ಕಳೆದುಕೊಳ್ಳಲೋ, ವಿರಾಮ ಪಡೆಯಲೋ ನಾನು ಬಿಡುವುದಿಲ್ಲ” ಎಂದಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪಿನಿಂದ ಎದುರಾಗಿರುವ ಸವಾಲುಗಳ ಹೊರತಾಗಿಯೂ, ಸಮಸ್ಯೆಯನ್ನು ನ್ಯಾಯಯುತವಾಗಿ ಮತ್ತು ಕಾಳಜಿಯಿಂದ ಪರಿಹರಿಸಲು ರಾಜ್ಯ ಸರ್ಕಾರದ ಬಳಿ ಪ್ರತ್ಯೇಕ ಯೋಜನೆಯಿದೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಕೆಲಸ ಕಳೆದುಕೊಂಡವರ ಘನತೆಯನ್ನು ಪುನಃಸ್ಥಾಪಿಸುವ ತನ್ನ ಅಚಲ ನಿಲುವನ್ನು ಒತ್ತಿ ಹೇಳಿದ ಮಮತಾ, ಸಮಸ್ಯೆಗೆ ಸಿಲುಕಿದವರ ಪರ ನಿಲ್ಲಲು ಯಾವುದೇ ಕಾನೂನು ಪರಿಣಾಮಗಳನ್ನು ಎದುರಿಸಲು ಸಿದ್ಧ ಎಂದು ಎಂದಿದ್ದಾರೆ.

“ನಾವು ಕಲ್ಲು ಹೃದಯಿಗಳಲ್ಲ… ಇದನ್ನು ಹೇಳಿದ್ದಕ್ಕಾಗಿ ನನ್ನನ್ನು ಜೈಲಿಗೆ ಹಾಕಬಹುದು, ಆದರೆ ನನಗೆ ಅದು ಮುಖ್ಯವಲ್ಲ. ನಾನು ನ್ಯಾಯಾಂಗವನ್ನು ಗೌರವಿಸುತ್ತೇನೆ. ಆದರೆ, ಈ ತೀರ್ಪನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದ ಮಮತಾ ಬ್ಯಾನರ್ಜಿ ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿ ನಡೆದ ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಎಷ್ಟು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ? ಬಂಗಾಳವನ್ನು ಏಕೆ ಗುರಿಯಾಗಿಸಿಕೊಂಡಿದ್ದೀರಿ?” ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಮತ್ತು ಕೇಂದ್ರ ಸಂಸ್ಥೆಗಳು ಬಂಗಾಳದ ಶಿಕ್ಷಣ ವ್ಯವಸ್ಥೆಯನ್ನು ಹಾಳುಗಡೆವಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದ ಮಮತಾ ಬ್ಯಾನರ್ಜಿ, ಮಾನವೀಯತೆ ಆಧಾರದಲ್ಲಿ ಕೆಲಸ ಕಳೆದುಕೊಂಡ ಅಭ್ಯರ್ಥಿಗಳಿಗೆ ಬೆಂಬಲ ನೀಡುವುದಾಗಿ ಪುನರುಚ್ಚರಿಸಿದ್ದಾರೆ.

“ನೀವು ಸಿದ್ಧರಿದ್ದರೆ ನನ್ನನ್ನು ಹಿಡಿಯಿರಿ. ನಮ್ಮ ವಕೀಲರು ತೀರ್ಪನ್ನು ಪರಿಶೀಲಿಸುತ್ತಿದ್ದಾರೆ. ನಾನು ಅಭ್ಯರ್ಥಿಗಳೊಂದಿಗಿದ್ದೇನೆ… ಅದಕ್ಕಾಗಿ ಬಿಜೆಪಿ ನನ್ನನ್ನು ಜೈಲಿಗೆ ಹಾಕಲು ಬಯಸಿದರೆ, ಹಾಗೆಯೇ ಆಗಲಿ” ಎಂದು ಹೇಳಿದ್ದಾರೆ.

ಬಿಜೆಪಿ ಮತ್ತು ಸಿಪಿಎಂ ಈ ಬಿಕ್ಕಟ್ಟನ್ನು ರಾಜಕೀಯವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿವೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ.

“ಪ್ರಚೋದಕರು ಮುಖ್ಯಮಂತ್ರಿ ಸಂಕಷ್ಟಕ್ಕೀಡಾದ ಜನರನ್ನು ಭೇಟಿಯಾಗದಂತೆ ತಡೆಯಬಹುದು ಎಂಬ ಮಾಹಿತಿ ಇದೆ. ಇದು ಜನರು ಬಿಕ್ಕಟ್ಟಿನಿಂದ ಹೊರಬರದಂತೆ ತಡೆಯುವ ಪಿತೂರಿಯಾಗಿದೆ” ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ. ಮಮತಾ ಬ್ಯಾನರ್ಜಿಯವರ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಭೇಟಿಯ ಸಮಯದಲ್ಲಿ ಇದೇ ರೀತಿಯ ಅಡೆತಡೆಗಳನ್ನು ಉಲ್ಲೇಖಿಸಿ ಘೋಷ್ ಹೇಳಿಕೆ ನೀಡಿದ್ದರು.

ವಂಚನೆಯ ಮೂಲಕ ಉದ್ಯೋಗ ಗಳಿಸಿದ್ದಾರೆಂದು ಸಾಬೀತಾದ ಅಭ್ಯರ್ಥಿಗಳನ್ನು ಮಾತ್ರ ವಜಾಗೊಳಿಸಬೇಕು ಮತ್ತು ಅವರ ಸಂಬಳವನ್ನು ವಾಪಸ್ ಪಡೆಯಬೇಕು. ಆದರೆ, ಕಳಂಕವಿಲ್ಲದವರು ತಮ್ಮ ಸಂಬಳವನ್ನು ಉಳಿಸಿಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಅರ್ಹ ವ್ಯಕ್ತಿಗಳು ಈ ಹಿಂದಿನ ಸರ್ಕಾರಿ ಹುದ್ದೆಗಳನ್ನು ಹೊಂದಿದ್ದರೆ ಅವುಗಳಿಗೆ ಮರಳಲು ಸಹ ಅವಕಾಶವಿದೆ ಎಂದಿದೆ.

ಬಂಗಾಳ ಸರ್ಕಾರದ್ದು ಸೇರಿದಂತೆ 120ಕ್ಕೂ ಹೆಚ್ಚು ಅರ್ಜಿಗಳನ್ನು ವಿಚಾರಣೆ ನಡೆಸಿದ ನಂತರ ತೀರ್ಪು ಬಂದಿದೆ. ಒಎಂಆರ್ ಹಾಳೆಗಳನ್ನು ತಿರುಚುವುದು, ಮಂಜೂರಾದ ಖಾಲಿ ಹುದ್ದೆಗಳನ್ನು ಮೀರಿದ ನೇಮಕಾತಿಗಳು ಮತ್ತು ಇತರ ಅಕ್ರಮಗಳನ್ನು ನ್ಯಾಯಾಲಯ ಗಮನಿಸಿದೆ. 24,640 ಹುದ್ದೆಗಳಿಗೆ 23 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರೆ, 25,700ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ನೀಡಲಾಗಿದೆ.

ತ್ರಿಪುರಾದಲ್ಲಿ ಸಿಪಿಎಂ ಆಡಳಿತದ ಅವಧಿಯಲ್ಲಿ 10,323 ಶಿಕ್ಷಕರು ಉದ್ಯೋಗ ಕಳೆದುಕೊಂಡಾಗ, ಕೆಲವರ ತಪ್ಪಿಗೆ ಎಲ್ಲರನ್ನೂ ಶಿಕ್ಷಿಸಬೇಡಿ ಎಂದು ಪಕ್ಷವು ನ್ಯಾಯಾಲಯಗಳನ್ನು ಒತ್ತಾಯಿಸಿತ್ತು. ಈಗ ಬಂಗಾಳದಲ್ಲಿ ಅವರು ಇದಕ್ಕೆ ವಿರುದ್ಧವಾಗಿ ಹೇಳಿಕೆ ನೀಡುತ್ತಿದ್ದಾರೆ. ನಾವು ಅನರ್ಹರನ್ನು ರಕ್ಷಿಸುವುದಿಲ್ಲ, ಆದರೆ ನ್ಯಾಯಯುತವಾಗಿ ನೇಮಕಗೊಂಡ 20,000ಕ್ಕೂ ಹೆಚ್ಚು ಶಿಕ್ಷಕರ ಪರವಾಗಿ ನಾವು ಯಾವಾಗಲೂ ನಿಲ್ಲುತ್ತೇವೆ” ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ.

ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (ಎಸ್‌ಎಸ್‌ಸಿ) 2016 ರಲ್ಲಿ ನೇಮಕ ಮಾಡಿದ್ದ ಸುಮಾರು 25,000 ( 25,753) ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿ ಅಮಾನ್ಯಗೊಳಿಸಿದ ಕಲ್ಕತ್ತಾ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 3ರಂದು ಎತ್ತಿಹಿಡಿದಿದೆ.

ಶಾಲೆಗಳಲ್ಲಿನ ನೇಮಕಾತಿಗಳನ್ನು ರದ್ದುಗೊಳಿಸಿದ್ದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರ ಪೀಠ ತೀರ್ಪು ಪ್ರಕಟಿಸಿದೆ.

“ಇಡೀ ನೇಮಕಾತಿ ಪ್ರಕ್ರಿಯೆ ಸರಿಪಡಿಸಲಾಗದಷ್ಟು ಕಲುಷಿತಗೊಂಡಿದೆ. ನೇಮಕಾತಿಯಲ್ಲಿ ದೊಡ್ಡ ಮಟ್ಟದ ವಂಚನೆ ನಡೆದಿದೆ. ಅದನ್ನು ಮುಚ್ಚಿ ಹಾಕಲು ಇಡೀ ಆಯ್ಕೆ ಪ್ರಕ್ರಿಯೆಯನ್ನು ಹಾಳುಗೆಡವಲಾಗಿದೆ. ಆಯ್ಕೆ ಪ್ರಕ್ರಿಯೆಯ ನ್ಯಾಯಸಮ್ಮತತೆ ಮತ್ತು ವಿಶ್ವಾಸಾರ್ಹತೆಯನ್ನು ನಗ್ನಗೊಳಿಸಿದೆ” ಎಂದು ತೀರ್ಪು ಪ್ರಕಟಿಸುತ್ತಾ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹೇಳಿದ್ದಾರೆ.

ತನ್ನ ಮೇಲಿನ ಎಫ್‌ಐಆರ್ ವಿರುದ್ಧ ಬಾಂಬೆ ಹೈಕೋರ್ಟ್‌ ಮೊರೆ ಹೋದ ಕುನಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...