Homeಮುಖಪುಟದಲಿತ ವಿರೋಧಿ ಮನಸ್ಥಿತಿ | ಮಂದಿರ 'ಶುದ್ಧೀಕರಿಸಿದ' ಬಿಜೆಪಿ ನಾಯಕನ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ದಲಿತ ವಿರೋಧಿ ಮನಸ್ಥಿತಿ | ಮಂದಿರ ‘ಶುದ್ಧೀಕರಿಸಿದ’ ಬಿಜೆಪಿ ನಾಯಕನ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

- Advertisement -
- Advertisement -

ರಾಜಸ್ಥಾನದ ಅಲ್ವಾರ್‌ನಲ್ಲಿರುವ ರಾಮ ಮಂದಿರಕ್ಕೆ ಕಾಂಗ್ರೆಸ್ ನಾಯಕ ಟಿಕರಾಮ್ ಜೂಲಿ ಅವರು ಭೇಟಿ ನೀಡಿದ ನಂತರ ಆ ಮಂದಿರವನ್ನು ಗಂಗಾ ನೀರನ್ನು ಸಿಂಪಡಿಸಿ ಪ್ರಧಾನಿ ಮೋದಿ ಅವರ ಆಪ್ತ ವ್ಯಕ್ತಿ, ಬಿಜೆಪಿ ನಾಯಕ ಜ್ಞಾನದೇವ್ ಅಹುಜಾ ಅವರು ‘ಶುದ್ದೀಕರಣ’ ಮಾಡಿ ಅಸ್ಪೃಶ್ಯತೆ ಆಚರಿಸಿರುವ ಅಘಾತಕಾರಿ ಘಟನೆ ನಡೆದಿದೆ. ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದು ಬಿಜೆಪಿಯ “ದಲಿತ ವಿರೋಧಿ ಮನಸ್ಥಿತಿ”ಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ. ರಾಮಮಂದಿರಕ್ಕೆ

ದೇಶವು ನಡೆಯುತ್ತಿರುವುದು ಬಹುಜನರನ್ನು ಎರಡನೇ ದರ್ಜೆಯ ನಾಗರಿಕರು ಎಂದು ಪರಿಗಣಿಸುವ ‘ಮನುಸ್ಮೃತಿ’ಯಿಂದಲ್ಲ, ಬದಲಾಗಿ ಸಂವಿಧಾನ ಮತ್ತು ಅದರ ಆದರ್ಶಗಳಿಂದ ಎಂದು ರಾಹುಲ್ ಗಾಂಧಿ ಅವರು ಪ್ರತಿಪಾದಿಸಿದ್ದಾರೆ.

ಮಂಗಳವಾರ ಘಟನೆಯ ವಿಡಿಯೊವನ್ನು ಪೋಸ್ಟ್‌ ಮಾಡಿರುವ ಕಾಂಗ್ರೆಸ್, ಬಿಜೆಪಿಯನ್ನು “ದಲಿತ ವಿರೋಧಿ” ಎಂದು ಹೇಳಿತ್ತು. ಅಲ್ವಾರ್‌ನಲ್ಲಿರುವ ರಾಮ ಮಂದಿರಕ್ಕೆ ಪಕ್ಷದ ನಾಯಕರೊಬ್ಬರು ಭೇಟಿ ನೀಡಿ ಪೂಜೆ ಸಲ್ಲಿಸಿದ ನಂತರ ಬಿಜೆಪಿ ಅದನ್ನು ಶುದ್ದೀಕರಣ ಮಾಡಿದ್ದು, ಇದಕ್ಕಾಗಿ ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿತ್ತು.

ಘಟನೆಯನ್ನು ಉಲ್ಲೇಖಿಸಿರುವ ರಾಹುಲ್ ಗಾಂಧಿ, “ಬಿಜೆಪಿಯ ದಲಿತ ವಿರೋಧಿ ಮತ್ತು ಮನುವಾದಿ ಚಿಂತನೆಗೆ ಮತ್ತೊಂದು ಉದಾಹರಣೆ! ಬಿಜೆಪಿ ನಿರಂತರವಾಗಿ ದಲಿತರನ್ನು ಅವಮಾನಿಸುತ್ತಿದೆ ಮತ್ತು ಸಂವಿಧಾನದ ಮೇಲೆ ದಾಳಿ ಮಾಡುತ್ತಿದೆ. ಅದಕ್ಕಾಗಿಯೇ ಸಂವಿಧಾನವನ್ನು ಗೌರವಿಸುವುದು ಮಾತ್ರವಲ್ಲದೆ ಅದನ್ನು ರಕ್ಷಿಸುವುದು ಸಹ ಮುಖ್ಯವಾಗಿದೆ.” ಎಂದು ಹೇಳಿದ್ದಾರೆ.

ಮೋದಿ ಅವರೇ, ದೇಶವು ಸಂವಿಧಾನ ಮತ್ತು ಅದರ ಆದರ್ಶಗಳಿಂದ ನಡೆಸಲಾಗುತ್ತದೆಯೆ ಹೊರತು, ಬಹುಜನರನ್ನು ಎರಡನೇ ದರ್ಜೆಯ ಪ್ರಜೆಗಳೆಂದು ಪರಿಗಣಿಸುವ ಮನುಸ್ಮೃತಿಯ ಮೂಲಕ ಅಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಜೂಲಿ ಮತ್ತು ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಕಾಂಗ್ರೆಸ್ ನಾಯಕರು ಜ್ಞಾನದೇವ್ ಅಹುಜಾ ಅವರ ಕೃತ್ಯವನ್ನು ದಲಿತರಿಗೆ ಮಾಡಿದ ಅವಮಾನ ಎಂದು ಕರೆದಿದ್ದಾರೆ, ಆದರೆ ಬಿಜೆಪಿ ನಾಯಕ ಈ ಆರೋಪವನ್ನು ನಿರಾಕರಿಸಿದ್ದಾರೆ.

ಆದಾಗ್ಯೂ, ತಾನು ಈ ಕೃತ್ಯವನ್ನು ಯಾವುದೇ ಜಾತಿ ದೃಷ್ಟಿಕೋನದಿಂದ ಮಾಡಿಲ್ಲ ಎಂದು ಅಹುಜಾ ಹೇಳಿದ್ದಾರೆ. ತಮ್ಮ ಕ್ರಮವನ್ನು ಸಮರ್ಥಿಸಿಕೊಂಡ ಅವರು, ಕಾಂಗ್ರೆಸ್ ನಾಯಕ ಟೀಕಾ ರಾಮ್ ಅವರಿಗೆ ಅಂತಹ ಸಮಾರಂಭಗಳಲ್ಲಿ ಭಾಗವಹಿಸಲು “ಯಾವುದೇ ನೈತಿಕ ಅಧಿಕಾರ” ಇಲ್ಲ ಎಂದು ಹೇಳಿದ್ದಾರೆ. ಯಾಕೆಂದರೆ ಅವರ ಪಕ್ಷದ ನಾಯಕತ್ವವು ರಾಮನ ಅಸ್ತಿತ್ವವನ್ನು ಪ್ರಶ್ನಿಸಿತ್ತು ಮತ್ತು ಕಳೆದ ವರ್ಷ ಅಯೋಧ್ಯೆಯಲ್ಲಿ ನಡೆದ ಸಮಾರಂಭವನ್ನು “ಬಹಿಷ್ಕರಿಸಿತ್ತು” ಎಂದು ಹೇಳಿದೆ.

ಅಲ್ವಾರ್‌ನ ವಸತಿ ಸಮಾಜದಲ್ಲಿರುವ ರಾಮ ಮಂದರದಲ್ಲಿ ಭಾನುವಾರ ರಾಮ ನವಮಿಯಂದು ಸಮಾರಂಭ ನಡೆದಿತ್ತು, ಅಂದು ಜೂಲಿ ಹಾಜರಿದ್ದರು. ಅದಾಗ್ಯೂ, ಬಿಜೆಪಿ ನಾಯಕ ಅಹುಜಾ ಮಂದಿರದ ಶುದ್ದೀಕರಣ ಮಾಡಿದ್ದಾರೆ. “ನಾನು ಇಂದು ಅಲ್ಲಿಗೆ ಹೋಗಿ ದೇವಾಲಯದ ಆವರಣವನ್ನು ಶುದ್ಧೀಕರಿಸಲು ಗಂಗಾಜಲವನ್ನು ಸಿಂಪಡಿಸಿದೆ” ಎಂದು ಅವರು ಅಲ್ವಾರ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ರಾಮಮಂದಿರಕ್ಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಮೆರಿಕದ ‘ಸುಂಕ ಹೇರಿಕೆ’ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

ಅಮೆರಿಕದ ‘ಸುಂಕ ಹೇರಿಕೆ’ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...