Homeಮುಖಪುಟಚಿದಂಬರಂಗಿಲ್ಲ ಬೇಲ್‌: ಡಿಸೆಂಬರ್‌ 11ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಚಿದಂಬರಂಗಿಲ್ಲ ಬೇಲ್‌: ಡಿಸೆಂಬರ್‌ 11ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

- Advertisement -
- Advertisement -

ಐಎನ್ಎಕ್ಸ್ ಮೀಡಿಯಾ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕೇಂದ್ರದ ಹಣಕಾಸು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿದೆ.

ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್, ಹಿರಿಯ ಕಾಂಗ್ರೆಸ್ ಮುಖಂಡ ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 11ರವರೆಗೆ ವಿಸ್ತರಿಸಿ ಆದೇಶಿಸಿದರು.
ಜಾರಿ ನಿರ್ದೇಶನಾಲಯ ವಾದ ಮಂಡಿಸಿ ಪಿ.ಚಿದಂಬರಂ ಅವರನ್ನು 14 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಇದಕ್ಕೆ 74 ವರ್ಷದ ಕಾಂಗ್ರೆಸ್ ನಾಯಕ ಚಿದಂಬರಂ ವಿರೋಧ ವ್ಯಕ್ತಪಡಿಸಲಿಲ್ಲ. ಹೀಗಾಗಿ ಡಿಸೆಂಬರ್ 11ರವರೆಗೆ ಅವಧಿ ವಿಸ್ತರಿಸಿ ವಿಚಾರಣೆಯನ್ನು ಮುಂದೂಡಿತು.
ಐಎನ್ಎಕ್ಸ್ ಮೀಡಿಯಾ ಸಾಗರೋತ್ತರ ನಿಧಿಯನ್ನಾಗಿ 305 ಕೋಟಿ ರೂಪಾಯಿಗಳನ್ನು ಪಡೆದಿತ್ತು. ಇದಕ್ಕೆ ವಿದೇಶ ಬಂಡವಾಳ ಪ್ರಮೋಷನ್ ಮಂಡಳಿ 2007ರಲ್ಲಿ ಸಮ್ಮತಿ ನೀಡಿತ್ತು. ಆದರೆ ಜಾರಿ ನಿರ್ದೇಶನಾಲಯ ಈ ವ್ಯವಹಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿತ್ತು.
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ  ಮಹಿಳೆಯೊಬ್ಬರ ಹೇಳಿಕೆಯ ಹಿನ್ನೆಲೆಯಲ್ಲಿ ಪಿ.ಚಿದಂಬರಂ ಅವರನ್ನು ಬಂಧಿಸಲಾಗಿದೆ. ಕೆಲವು ತಿಂಗಳುಗಳಿಂದ ತಿಹಾರ್ ಜೈಲಿನಲ್ಲಿರುವ ಪಿ.ಚಿದಂಬರಂ ಅವರನ್ನು ಇಂದು ಬೆಳಗ್ಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಭೇಟಿಯಾಗಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪನ್ನೂನ್‌ ಹತ್ಯೆಗೆ ಸಂಚು: ವಾಷಿಂಗ್‌ ಟನ್‌ ಪೋಸ್ಟ್‌ ವರದಿ ತಿರಸ್ಕರಿಸಿದ ಭಾರತ

0
ಭಾರತದ ಮಾಜಿ ಗುಪ್ತಚರ ಅಧಿಕಾರಿಯೊಬ್ಬರು ಅಮೆರಿಕದ ನೆಲದಲ್ಲಿ ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನೂನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂಬ ವಾಷಿಂಗ್ಟನ್ ಪೋಸ್ಟ್‌ನ ವರದಿಯನ್ನು ಭಾರತ ಇಂದು ಬಲವಾಗಿ ತಿರಸ್ಕರಿಸಿದೆ. ಭಾರತದ ರಿಸರ್ಚ್...