Homeಕರ್ನಾಟಕಶ್ರೀರಂಗಪಟ್ಟಣ | ದೇವಾಲಯಕ್ಕೆ ಪ್ರವೇಶ: ದಲಿತರ ಆಗ್ರಹ

ಶ್ರೀರಂಗಪಟ್ಟಣ | ದೇವಾಲಯಕ್ಕೆ ಪ್ರವೇಶ: ದಲಿತರ ಆಗ್ರಹ

- Advertisement -
- Advertisement -

ಶ್ರೀರಂಗಪಟ್ಟಣ: ‘ತಾಲ್ಲೂಕಿನ ಹುಂಜನೆರೆ ಗ್ರಾಮದ ಚನ್ನಕೇಶ್ವರಸ್ವಾಮಿ ದೇವಾಲಯ ಮುಜರಾಯಿ ಇಲಾಖೆಗೆ ಸೇರಿದ್ದು, ದಲಿತರಿಗೆ ವರ್ಷದ ಎಲ್ಲ ದಿನವೂ ಮುಕ್ತ ಪ್ರವೇಶ ನೀಡಬೇಕು’ ಎಂದು ಗ್ರಾಮಸ್ಥರು ಹಾಗೂ ದಲಿತ ಸಂಘರ್ಷ ಸಮಿತಿಯ ಮುಖಂಡರು ಮಂಗಳವಾರ ಆಗ್ರಹಿಸಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಪಟ್ಟಣದಲ್ಲಿ ತಹಶೀಲ್ದಾರ್‌ ಪರಶುರಾಮ ಸತ್ತಿಗೇರಿ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮೇಘ ಅವರಿಗೆ ಮನವಿ ಸಲ್ಲಿಸಿದ ಮುಖಂಡರು, ‘ದೇವಾಲಯ ಮುಜರಾಯಿ ಇಲಾಖೆಗೆ ಸೇರಿದ್ದರೂ ಗ್ರಾಮದ ದಲಿತರಿಗೆ ಪ್ರವೇಶವಿಲ್ಲ. ಶಾಸಕ ರಮೇಶ ಬಂಡಿಸಿದ್ದೇಗೌಡ ಅವರಿಗೆ ತಿಳಿಸಿದ ಬಳಿಕ, ವಿಶೇಷ ದಿನಗಳಲ್ಲಿ ಮಾತ್ರ ಅವಕಾಶ ನೀಡಲು ಒಪ್ಪಿಗೆ ಸಿಕ್ಕಿದೆ. ವರ್ಷದ ಎಲ್ಲ ದಿನವೂ ದಲಿತರು ಇಲ್ಲಿ ಪೂಜೆ ಸಲ್ಲಿಸಲು ಅವಕಾಶ ಮಾಡಿಕೊಡಬೇಕು. ದೇವಾಲಯದ ಮುಂದೆ ಫಲಕ ಹಾಕಬೇಕು’ ಎಂದು ಮುಖಂಡರಾದ ಚನ್ನಪ್ಪ ಮತ್ತು ಸಿದ್ದಲಿಂಗು ಒತ್ತಾಯಿಸಿದರು.

‘ಯುಗಾದಿ ಉತ್ಸವ ಸೇರಿ ವಿಶೇಷ ದಿನಗಳಲ್ಲಿ ಮಾತ್ರ ದಲಿತರಿಗೆ ಪ್ರವೇಶ ಮತ್ತು ಪೂಜೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಉಳಿದ ದಿನಗಳಲ್ಲೂ ದಲಿತರಿಗೆ ಪೂಜೆ ಮಾಡಲು ಕ್ರಮ ವಹಿಸಬೇಕು’ ಎಂದು ದಸಂಸ ಮುಖಂಡ ಎಂ. ಚಂದ್ರಶೇಖರ್‌, ಗಂಜಾಂ ರವಿಚಂದ್ರ, ಮಹದೇವಸ್ವಾಮಿ ಮನವಿ ಮಾಡಿದರು.

‘ಮುಜರಾಯಿ ಇಲಾಖೆಗೆ ಸೇರಿದ ಯಾವುದೇ ದೇವಾಲಯದಲ್ಲೂ ಪ್ರವೇಶದ ವಿಷಯದಲ್ಲಿ ತಾರತಮ್ಯ ಮಾಡುವಂತಿಲ್ಲ. ತಾರತಮ್ಯ ಮಾಡಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ. ಶೀಘ್ರ ದಲಿತರು ಮತ್ತು ಸವರ್ಣೀಯರ ಸಭೆ ನಡೆಸಿ ಗೊಂದಲ ಬಗಹರಿಸಲಾಗುವುದು’ ಎಂದು ತಹಶೀಲ್ದಾರ್‌ ಪರಶುರಾಮ ಸತ್ತಿಗೇರಿ ಭರವಸೆ ನೀಡಿದ್ದಾರೆ ಎಂದು ಪ್ರಜಾವಾಣಿ ವರದಿ ತಿಳಿಸಿದೆ.

ಅಪೆಕ್ಸ್‌ ಬ್ಯಾಂಕ್‌ ಮಾಜಿ ನಿರ್ದೇಶಕ ಅರಕೆರೆ ಶಿವಯ್ಯ, ರೈತ ಸಂಘದ ತಾಲ್ಲೂಕು ಘಟಕದ ಸಂಚಾಲಕ ಪಾಂಡು, ಬೆಳಗೊಳ ಬಸವಯ್ಯ, ಕುಬೇರಪ್ಪ, ಕೆ.ಶೆಟ್ಟಹಳ್ಳಿ ಅಪ್ಪಾಜಿ, ಸುರೇಶ್, ಸೋಮೇಶ್ ಪಾಲ್ಗೊಂಡಿದ್ದರು.

ರಾಜಸ್ಥಾನ| ದಲಿತ ನಾಯಕನ ಭೇಟಿಯ ನಂತರ ದೇವಾಲಯ ಶುದ್ಧೀಕರಿಸಿದ ಬಿಜೆಪಿ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...