Homeಮುಖಪುಟಬಿಹಾರದ 40°C ಬೇಸಿಗೆಯ ವೇಳೆ ಜನರಿಗೆ ಕಂಬಳಿ ನೀಡಿದ ಬಿಜೆಪಿ ಸಚಿವ; 'ವಿಲಕ್ಷಣ ವರ್ತನೆ' ಎಂದ...

ಬಿಹಾರದ 40°C ಬೇಸಿಗೆಯ ವೇಳೆ ಜನರಿಗೆ ಕಂಬಳಿ ನೀಡಿದ ಬಿಜೆಪಿ ಸಚಿವ; ‘ವಿಲಕ್ಷಣ ವರ್ತನೆ’ ಎಂದ ಆರ್‌ಜೆಡಿ

- Advertisement -
- Advertisement -

ಬಿಹಾರದಲ್ಲಿ ಚುನಾವಣಾ ಕಾವು ಮತ್ತು ಬೇಸಿಗೆಯ ಬಿಸಿ ಏರುತ್ತಿರುವ ಹೊತ್ತಿನಲ್ಲೆ ರಾಜ್ಯದ ಬಿಜೆಪಿ ಸಚಿವರೊಬ್ಬರು ಜನರಿಗೆ ಕಂಬಳಿ ವಿತರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಂಗ್ಯಕ್ಕೀಡಾಡಿದ್ದಾರೆ. ಸಚಿವರ ಈ ನಡೆಯನ್ನು ವಿಪಕ್ಷ ಆರ್‌ಜೆಡಿ ‘ವಿಲಕ್ಷಣ ವರ್ತನೆ’ ಎಂದು ಕರೆದಿದೆ. ಕಾರ್ಯಕ್ರಮವೂ ಕ್ಷೇತ್ರದ ಜನರಿಗೆ ಕೃತಜ್ಞತೆ ಮತ್ತು ಗೌರವದ ಸಂಕೇತವೆಂದು ಸಚಿವರು ಕಂಬಳಿಗಳನ್ನು ವಿತರಿಸುವ ವೇಳೆ ಬಣ್ಣಿಸಿದ್ದಾರೆ ಎಂದು ವರದಿಯಾಗಿದೆ. ಬಿಹಾರದ 40°C ಬೇಸಿಗೆಯ

ಬಿಹಾರದ ಕ್ರೀಡಾ ಸಚಿವ ಸುರೇಂದ್ರ ಕುಮಾರ್ ಮೆಹ್ತಾ ಅವರು ರಾಜ್ಯವು 40 ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ತಲುಪಿದಾಗ ಜನರಿಗೆ ಕಂಬಳಿ ವಿತರಿಸುವ ವೀಡಿಯೊವನ್ನು ಪೋಸ್ಟ್ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ. ಬಿಜೆಪಿಯ ಸಂಸ್ಥಾಪನಾ ದಿನದ ಅಂಗವಾಗಿ ಬೇಗುಸರಾಯ್ ಜಿಲ್ಲೆಯ ಮನ್ಸುರ್ಚಕ್ ಬ್ಲಾಕ್‌ನ ಅಹಿಯಾಪುರ್ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದ ಸುಮಾರು 700 ಜನರಿಗೆ ಸಾಂಪ್ರದಾಯಿಕ ಬಟ್ಟೆ ಮತ್ತು ಕಂಬಳಿಗಳನ್ನು ವಿತರಿಸಿದ್ದಾರೆ.

ಏಪ್ರಿಲ್ 6 ರಂದು ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಸಚಿವರು ಜನರಿಗೆ ‘ಆಂಗ್ ವಸ್ತ್ರ’ ಹಸ್ತಾಂತರಿಸುವ ಮೂಲಕ ಗೌರವಿಸಿದರು ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. “ಫಲಾನುಭವಿಗಳಿಗೆ ಬಟ್ಟೆಗಳು ಬೇಕಾಗಿದ್ದವು. ಅವರಿಗೆ ಸಾಂಪ್ರದಾಯಿಕ ‘ಆಂಗ್ ವಸ್ತ್ರ’ವನ್ನು ಒದಗಿಸಲು ನಾವು ಈ ಸಂದರ್ಭವನ್ನು ಆರಿಸಿಕೊಂಡೆವು. ಅದರ ಜೊತೆಗೆ ಜನರಿಗೆ ಕಂಬಳಿಗಳನ್ನು ಸಹ ಹಸ್ತಾಂತರಿಸಲಾಯಿತು” ಎಂದು ಸಚಿವರ ಆಪ್ತರೊಬ್ಬರು ಹೇಳಿದ್ದಾಗಿ TNIE ವರದಿ ಮಾಡಿದೆ.

ತನ್ನ ಫೇಸ್‌ಬುಕ್ ಪೋಸ್ಟ್‌ನಲ್ಲಿ ಹಾಕಿದ್ದ ಈ ವಿಡಿಯೊವನ್ನು ವಿವಾದದ ನಂತರ ಸಚಿವ ಮೆಹ್ತಾ ಅವರು ಅಳಿಸಿದ್ದಾರೆ. ಅಳಿಸಲ್ಪಟ್ಟ ಈ ಪೋಸ್ಟ್‌ನಲ್ಲಿ, “ಬಡವರ ಉನ್ನತಿ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಬದ್ಧವಾಗಿರುವ ವಿಶ್ವದ ಅತಿದೊಡ್ಡ ಪಕ್ಷದ 45 ನೇ ಸಂಸ್ಥಾಪನಾ ದಿನದಂದು, ನಾವು ಅಹಿಯಾಪುರದಲ್ಲಿ ಜನರಿಗೆ ‘ಅಂಗ್ ವಸ್ತ್ರ’ ನೀಡುವ ಮೂಲಕ ಗೌರವಿಸಿದ್ದೇವೆ” ಎಂದು ಬರೆದಿದ್ದಾರೆ.

“ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅನಿಯಮಿತ ವರ್ತನೆಯು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ. ಆದರೆ ಅವರ ಸಚಿವ ಸಹೋದ್ಯೋಗಿ ಮೆಹ್ತಾ ಅವರ ಈ ಕ್ರಮವು ರಾಜಕೀಯ ವಲಯದಲ್ಲಿ ಕೋಲಾಹಲವನ್ನು ಸೃಷ್ಟಿಸಿದೆ” ಎಂದು ಪಾಟ್ನಾದ ಮರೌರ್ಹಿ ನಿವಾಸಿ ಆರ್‌ಜೆಡಿ ನಾಯಕ ನಿರಂಜನ್ ಯಾದವ್ ಹೇಳಿದ್ದಾರೆ.

ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಬಡವರನ್ನು ಓಲೈಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದಾಗ್ಯೂ, ಬಿಜೆಪಿಯ ಪ್ರಮುಖ ಮಿತ್ರ ಪಕ್ಷವಾದ ಜೆಡಿ(ಯು) ಸಚಿವರನ್ನು ಸಮರ್ಥಿಸಿಕೊಂಡಿದ್ದು, ವೈರಲ್ ವೀಡಿಯೊದಲ್ಲಿ ತೋರಿಸಿರುವಂತೆ ಜನರಿಗೆ ಕಂಬಳಿಗಳನ್ನು ಅಲ್ಲ, ಬದಲಾಗಿ ‘ಚಾದರ್‌ಗಳನ್ನು’ ಹಸ್ತಾಂತರಿಸಲಾಗಿದೆ ಎಂದು ಹೇಳಿದ್ದಾರೆ. ಬಿಹಾರದ 40°C ಬೇಸಿಗೆಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಬಂಗಾಳವನ್ನು ಒಡೆದು ಆಳುವುದಕ್ಕೆ ಸಾಧ್ಯವಿಲ್ಲ..’; ವಕ್ಫ್ ಕಾಯ್ದೆ ಜಾರಿಗೆ ತರುವುದಿಲ್ಲ ಎಂದ ಮಮತಾ ಬ್ಯಾನರ್ಜಿ

‘ಬಂಗಾಳವನ್ನು ಒಡೆದು ಆಳುವುದಕ್ಕೆ ಸಾಧ್ಯವಿಲ್ಲ..’; ವಕ್ಫ್ ಕಾಯ್ದೆ ಜಾರಿಗೆ ತರುವುದಿಲ್ಲ ಎಂದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...