Homeಮುಖಪುಟಮಹಾರಾಷ್ಟ್ರ | 'ಎಕ್ಸ್‌ಕ್ಯೂಸ್‌ಮಿ' ಎಂದ ಮಹಿಳೆಯರಿಗೆ ಮರಾಠಿ ಮಾತನಾಡಿ ಎಂದು ಹಲ್ಲೆ ನಡೆಸಿದ ದುಷ್ಕರ್ಮಿಗಳು

ಮಹಾರಾಷ್ಟ್ರ | ‘ಎಕ್ಸ್‌ಕ್ಯೂಸ್‌ಮಿ’ ಎಂದ ಮಹಿಳೆಯರಿಗೆ ಮರಾಠಿ ಮಾತನಾಡಿ ಎಂದು ಹಲ್ಲೆ ನಡೆಸಿದ ದುಷ್ಕರ್ಮಿಗಳು

- Advertisement -
- Advertisement -

ಮರಾಠಿಯಲ್ಲಿ ಮಾತನಾಡುವ ಬದಲು “ಎಕ್ಸ್‌ಕ್ಯೂಸ್‌ಮಿ” ಎಂದು ಹೇಳಿದ್ದಕ್ಕಾಗಿ ಇಬ್ಬರು ಮಹಿಳೆಯರ ಮೇಲೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವ್ಲಿ ನಗರದಲ್ಲಿ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ. ದುಷ್ಕರ್ಮಿಗಳು ಮಹಿಳೆಯರಿಬ್ಬರ ಮೇಲೆ ಹಲ್ಲೆ ನಡೆಸುವಾಗ, ಮಹಿಳೆಯ ಕೈಯಲ್ಲಿ ಮಗು ಇತ್ತು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಮಂಗಳವಾರ ವರದಿ ಮಾಡಿದೆ. ಮಹಾರಾಷ್ಟ್ರ

ಡೊಂಬಿವ್ಲಿಯಲ್ಲಿರುವ ಹೌಸಿಂಗ್ ಸೊಸೈಟಿಯ ಪ್ರವೇಶದ್ವಾರಕ್ಕೆ ಹೋಗುವ ದಾರಿಯ ಅಡ್ಡವಿದ್ದ ವ್ಯಕ್ತಿಯನ್ನು ಬೈಕ್‌ನಲ್ಲಿದ್ದ ಮಹಿಳೆಯರು ದಾಟಲು ಪ್ರಯತ್ನಿಸಿದಾಗ ಈ ಘಟನೆ ಸಂಭವಿಸಿದೆ ಎಂದು ವರದಿ ಹೇಳಿದೆ. ಮಹಿಳೆಯರಲ್ಲಿ ಒಬ್ಬರು “ಎಕ್ಸ್‌ಕ್ಯೂಸ್‌ಮಿ” ಎಂದು ಹೇಳಿದ್ದು, ಈ ವೇಳೆ ವ್ಯಕ್ತಿಯು ಕೋಪಗೊಂಡಿದ್ದು ಮರಾಠಿಯಲ್ಲಿ ಮಾತನಾಡುವಂತೆ ಒತ್ತಾಯಿಸಿದ್ದರು. ಇದು ಜಗಲಕ್ಕೆ ಕಾರಣವಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಈ ವೇಳೆ ಹೆಚ್ಚಿನ ಜನರು ಸಂಘರ್ಷಕ್ಕೆ ಇಳಿದಿದ್ದು ವಾಗ್ವಾದ ಉಲ್ಬಣಗೊಂಡಿದ್ದು ಮತ್ತು ಮಹಿಳೆಯರನ್ನು ಥಳಿಸಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ಬಗ್ಗೆ ಇನ್ನೂ ಎಫ್‌ಐಆರ್‌ ದಾಖಲಾಗಿಲ್ಲ ಎಂದು ವರದಿ ಉಲ್ಲೇಖಿಸಿದೆ. ಎಫ್‌ಐಆರ್‌ ಬದಲಾಗಿ ಪ್ರಾಥಮಿಕ ತನಿಖೆ ನಡೆಯುತ್ತಿದ್ದು, ಬೇರೆ ಯಾವುದೇ ಕಾರಣದಿಂದ ವಾಗ್ವಾದ ನಡೆದಿದೆಯೇ ಎಂದು ಪೊಲೀಸರು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿರುವ ಬ್ಯಾಂಕ್ ನೌಕರರು ಗ್ರಾಹಕರೊಂದಿಗೆ ಮರಾಠಿಯಲ್ಲಿ ಮಾತನಾಡಬೇಕೆಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ನಡೆಸಿದ ಅಭಿಯಾನದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ.

ಏಪ್ರಿಲ್ 1 ರಂದು ಮುಂಬೈನ ಪೊವೈ ಪ್ರದೇಶದಲ್ಲಿ ಮರಾಠಿಯಲ್ಲಿ ಮಾತನಾಡದ ಕಾರಣಕ್ಕಾಗಿ ಸೆಕ್ಯೂರಿಟಿ ಗಾರ್ಡ್‌ಗೆ ಥಳಿಸಿದ ಆರೋಪದ ಮೇಲೆ ಪಕ್ಷದ ಮೂವರು ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

ನಗರದ ಮತ್ತೊಂದು ಬ್ಯಾಂಕಿನಲ್ಲಿ ಇದೇ ರೀತಿಯ ಘಟನೆ ಸಂಭವಿಸಿದೆ, ಅಲ್ಲಿ ಮರಾಠಿಯಲ್ಲಿ ಮಾತನಾಡದಿದ್ದಕ್ಕಾಗಿ ಅಧಿಕಾರಿಯೊಬ್ಬರಿಗೆ ಬೆದರಿಕೆ ಹಾಕಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಏಪ್ರಿಲ್ 5 ರಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ಪಕ್ಷದ ಕಾರ್ಯಕರ್ತರಿಗೆ ತಮ್ಮ ಆಂದೋಲನವನ್ನು ನಿಲ್ಲಿಸುವಂತೆ ಹೇಳಿದ್ದರು. ಜೊತೆಗೆ, ರಾಜ್ಯಾದ್ಯಂತ ಸಂಸ್ಥೆಗಳಲ್ಲಿ ಮರಾಠಿ ಬಳಸುವ ಕಾನೂನುಗಳನ್ನು ಜಾರಿಗೊಳಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಮಹಾರಾಷ್ಟ್ರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಮೃತ್ ಯೋಜನೆಯಲ್ಲಿ ₹17 ಸಾವಿರ ಕೋಟಿ ಹಣ ದುರುಪಯೋಗ: ಎನ್.ಆರ್. ರಮೇಶ್ ಆರೋಪ

ಅಮೃತ್ ಯೋಜನೆಯಲ್ಲಿ ₹17 ಸಾವಿರ ಕೋಟಿ ಹಣ ದುರುಪಯೋಗ: ಎನ್.ಆರ್. ರಮೇಶ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...