Homeಕರ್ನಾಟಕಅಂಬೇಡ್ಕರ್ ಪ್ರಶಸ್ತಿ | ಮಾವಳ್ಳಿ ಶಂಕರ್, ಲಕ್ಷ್ಮೀಪತಿ, ಇಂದೂಧರ ಹೊನ್ನಾಪುರ ಸೇರಿ 15 ಮಂದಿ ಆಯ್ಕೆ

ಅಂಬೇಡ್ಕರ್ ಪ್ರಶಸ್ತಿ | ಮಾವಳ್ಳಿ ಶಂಕರ್, ಲಕ್ಷ್ಮೀಪತಿ, ಇಂದೂಧರ ಹೊನ್ನಾಪುರ ಸೇರಿ 15 ಮಂದಿ ಆಯ್ಕೆ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ನೀಡಲಾಗುವ 2023, 2024 ಹಾಗೂ 2025ನೇ ಸಾಲಿನ ಪ್ರತಿಷ್ಠಿತ ‘ಅಂಬೇಡ್ಕರ್ ಪ್ರಶಸ್ತಿ’ಗೆ ಪತ್ರಕರ್ತ ಇಂದೂಧರ ಹೊನ್ನಾಪುರ, ನಿವೃತ್ತ ಅಧಿಕಾರಿ ರುದ್ರಪ್ಪ ಹನಗವಾಡಿ, ಸಾಹಿತಿ ಲಕ್ಷ್ಮೀಪತಿ ಕೋಲಾರ, ಹೋರಾಟಗಾರರಾದ ಶ್ರೀಧರ್ ಕಲಿವೀರ, ಮಾವಳ್ಳಿ ಶಂಕರ್ ಹಾಗೂ ಹೊನ್ನೂರು ಗೌರಮ್ಮ ಸೇರಿದಂತೆ 15 ಮಂದಿಯನ್ನು ಆಯ್ಕೆ ಮಾಡಲಾಗಿದೆ.

ಈ ಪ್ರಶಸ್ತಿಯು ತಲಾ 5 ಲಕ್ಷ ರೂಪಾಯಿ ನಗದು, 20 ಗ್ರಾಂ. ಚಿನ್ನದ ಪದಕ ಮತ್ತು ಫಲಕವನ್ನು ಹೊಂದಿದೆ. ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಏಪ್ರಿಲ್ 14ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಲಿರುವ ಅಂಬೇಡ್ಕರ್‌ ಅವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಪ್ರಶಸ್ತಿಗೆ ಆಯ್ಕೆಯಾಗಿರುವವರ ಪಟ್ಟಿ ಕೆಳಗಿದೆ

2023ನೇ ಸಾಲು- ಹರಿಹರಾನಂದ ಸ್ವಾಮಿ, ಮೈಸೂರು (ಸಮಾಜಸೇವೆ), ಇಂದೂಧರ ಹೊನ್ನಾಪುರ, ಬೆಂಗಳೂರು (ಪತ್ರಿಕೋದ್ಯಮ), ರುದ್ರಪ್ಪ ಹನಗವಾಡಿ, ದಾವಣಗೆರೆ (ಆಡಳಿತ), ಸೀತವ್ವ ಜೋಡಟ್ಟಿ, ಬೆಳಗಾವಿ (ದೇವದಾಸಿ ವಿಮೋಚನೆ), ಕೆ.ಪುಂಡಲೀಕರಾವ್ ಶೆಟ್ಟಿಬಾ, ಬೀದರ್‌ (ಸಮಾಜಸೇವೆ/ರಾಜಕೀಯ).

2024ನೇ ಸಾಲು-ಶ್ರೀಧರ ಕಲಿವೀರ, ಬೆಂಗಳೂರು (ಹೋರಾಟ), ಮಲ್ಲಾಜಮ್ಮ, ಮಂಡ್ಯ (ಸಮಾಜಸೇವೆ/ರಾಜಕೀಯ), ರಾಮದೇವ ರಾಕೆ, ಬೆಂಗಳೂರು (ಪತ್ರಿಕೋದ್ಯಮ), ವೈ.ಬಿ. ಹಿಮ್ಮಡಿ, ಬೆಳಗಾವಿ (ಸಾಹಿತ್ಯ/ಸಮಾಜಸೇವೆ), ಲಕ್ಷ್ಮೀಪತಿ ಕೋಲಾರ, ಕೋಲಾರ (ಸಾಹಿತ್ಯ/ ಸಂಘಟನೆ).

2025ನೇ ಸಾಲು- ದತ್ತಾತ್ರೇಯ ಇಕ್ಕಳಗಿ, ಕಲಬುರಗಿ (ಪ್ರಕಾಶನ), ಮಾವಳ್ಳಿ ಶಂಕರ್, ಬೆಂಗಳೂರು (ಹೋರಾಟ), ಎಫ್‌.ಎಚ್‌. ಜಕ್ಕಪ್ಪನವರ್, ಧಾರವಾಡ (ಹೋರಾಟ), ಹೊನ್ನೂರು ಗೌರಮ್ಮ, ಚಾಮರಾಜನಗರ (ಜನಪದ ಕಲೆ), ಈರಪ್ಪ, ಹಾಸನ (ದಲಿತ ಹೋರಾಟ).

ಶ್ರೀರಂಗಪಟ್ಟಣ | ದೇವಾಲಯಕ್ಕೆ ಪ್ರವೇಶ: ದಲಿತರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. It is very pathetic to hear that there still no entry to some section of people in the temples in this modern age. People have reached Moon and there are innovations for reaching other space worlds but there are restrictions in some places in our plannet.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...