ಹೂಡಿಕೆ ಮತ್ತು ಜಿಎಸ್‌ಟಿ ಪಾವತಿಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದು, ರಾಜ್ಯದ ಆರ್ಥಿಕ ಸ್ಥಿತಿ ಬಲಿಷ್ಠವಾಗಿದೆ ಎಂದು ಅವರು ಹೇಳಿದ್ದಾರೆ. ಮಂಡ್ಯದಲ್ಲಿರುವ ಕಾಂಗ್ರೆಸ್ ಕಚೇರಿಗೆ ಬುಧವಾರ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಕರ್ನಾಟಕದ ಆರ್ಥಿಕ ಸ್ಥಿತಿ
“ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 2,000 ರೂ., ಗೃಹ ಜ್ಯೋತಿ ಅಡಿಯಲ್ಲಿ 200 ಉಚಿತ ಯೂನಿಟ್ ವಿದ್ಯುತ್ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ ನೀಡುತ್ತಿದೆ. ಇಷ್ಟೆಲ್ಲಾ ಸವಲತ್ತುಗಳನ್ನು ನೀಡಿದ ನಂತರ ಜನರು ಆಕ್ರೋಶಗೊಳ್ಳುತ್ತಾರೆಯೆ? ಯಾವುದೇ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆಯೇ? ಇದು ಬಿಜೆಪಿಯ ‘ಆಕ್ರೋಶ'” ಎಂದು ಬಿಜೆಪಿಯ ಜನಾಕ್ರೋಶ ಯಾತ್ರೆಯ ಬಗ್ಗೆ ಹೇಳಿದ್ದಾರೆ.
ಸೋಮವಾರ ಮೈಸೂರಿನಲ್ಲಿ ಬಿಜೆಪಿ ಜನಕ್ರೋಶ ಯಾತ್ರೆಯನ್ನು ಪ್ರಾರಂಭಿಸಿತ್ತು. ಈ ಯಾತ್ರೆಯನ್ನು ಉಲ್ಲೇಖಿಸಿ ಅವರು ಮಾತನಾಡುತ್ತಿದ್ದರು. “ಜನರು ಕೋಪಗೊಂಡಿದ್ದರೆ, ಉಪಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ತಿರಸ್ಕರಿಸುತ್ತಿದ್ದರು. ಆದರೆ, ಅವರು ಉಪಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಗನನ್ನು ಸೋಲಿಸಿದರು. ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ವಿಪರ್ಯಾಸ” ಎಂದು ಅವರು ಹೇಳಿದ್ದಾರೆ.
“ದಲಿತರ ಕಲ್ಯಾಣಕ್ಕಾಗಿ ನಾವು ಮೀಸಲಾದ ಹಣವನ್ನು ಬಳಸುತ್ತಿದ್ದೇವೆ. ಗ್ಯಾರೆಂಟಿ ಯೋಜನೆಗಳಿಗಾಗಿ ನಾವು ಸುಮಾರು 51,000 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇವೆ. ಕೇಂದ್ರ ಸರ್ಕಾರವು ಜಿಎಸ್‌ಟಿಯಲ್ಲಿ ನಮ್ಮ ಪಾಲನ್ನು ನಮಗೆ ನೀಡಿಲ್ಲ ಎಂಬ ಕಾರಣಕ್ಕೆ, ನಾವು ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ರಾಜ್ಯದ ಜನರಿಗೆ ದ್ರೋಹ ಮಾಡಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.
ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ತಿಂಗಳೊಳಗೆ ಸುಮಾರು 59 ಜನರು ಸಾವನ್ನಪ್ಪಿದ್ದರು. ರಾಜ್ಯ ಪೊಲೀಸ್ ಮತ್ತು ಸಾರಿಗೆ ಇಲಾಖೆ ತ್ವರಿತವಾಗಿ ಕಾರ್ಯನಿರ್ವಹಿಸಿದ್ದು, ಇದರಿಂದಾಗಿ ಇಂತಹ ಅಪಘಾತಗಳು ಕಡಿಮೆಯಾಗಿದೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ. ಕರ್ನಾಟಕದ ಆರ್ಥಿಕ ಸ್ಥಿತಿ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ದೆಹಲಿಯ ಮೀನು ತಿನ್ನುವ ಬಂಗಾಳಿಗಳಿಗೆ ಹಿಂದುತ್ವ ಗುಂಪಿನಿಂದ ಬೆದರಿಕೆ: ವೀಡಿಯೋ
ದೆಹಲಿಯ ಮೀನು ತಿನ್ನುವ ಬಂಗಾಳಿಗಳಿಗೆ ಹಿಂದುತ್ವ ಗುಂಪಿನಿಂದ ಬೆದರಿಕೆ: ವೀಡಿಯೋ

