Homeಮುಖಪುಟಬಿಹಾರ | ಆಡಳಿತರೂಢ ಜೆಡಿಯು ನಾಯಕನ ಗುಂಡಿಕ್ಕಿ ಹತ್ಯೆ

ಬಿಹಾರ | ಆಡಳಿತರೂಢ ಜೆಡಿಯು ನಾಯಕನ ಗುಂಡಿಕ್ಕಿ ಹತ್ಯೆ

- Advertisement -
- Advertisement -

ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ ರಾಜ್ಯದ ಆಡಳಿತರೂಢ ಜೆಡಿಯು ಶಾಸಕ ಪನ್ನಾ ಲಾಲ್ ಸಿಂಗ್ ಪಟೇಲ್ ಅವರ ಸೋದರಳಿಯ ಎಂದು ಹೇಳಲಾದ 50 ವರ್ಷದ ವ್ಯಕ್ತಿಯನ್ನು ಶಸ್ತ್ರಸಜ್ಜಿತ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬಿಹಾರ

ಮೃತನನ್ನು ಖಗಾರಿಯಾದ ಕೈಥಿ ಟೋಲಾ ನಿವಾಸಿ ಕೌಶಲ್ ಸಿಂಗ್ ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ ಕೌಶಲ್ ಮತ್ತು ಅವರ ಪತ್ನಿ ಚೌಥಮ್ ಪೊಲೀಸ್ ಠಾಣೆ ವ್ಯಾಪ್ತಿಯ ಕೈಥಿ ಟೋಲಾದಲ್ಲಿರುವ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ.

ದಾಳಿಕೋರರು ಕೌಶಲ್ ಮೇಲೆ ಹತ್ತಿರದಿಂದ ಅವರಿಗೆ ಗುಂಡು ಹಾರಿಸಿದ್ದು, ಇದರಿಂದ ಅವರಿಗೆ ಗಂಭೀರ ಗಾಯಗಳಾಗಿತ್ತು. ಅವರು ಪ್ರಜ್ಞಾಹೀನರಾದ ತಕ್ಷಣ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಮಾಜಿ ಪಂಚಾಯತ್ ಸಮಿತಿ ಸದಸ್ಯರಾದ ಕೌಶಲ್ ಜೆಡಿಯು ಪಕ್ಷದ ಜೊತೆಗೆ ಗುರುತಿಸಿಕೊಂಡಿದ್ದರು. ಬುಧವಾರ ತಡರಾತ್ರಿ ಅವರು ತಮ್ಮ ಗೋದಾಮಿನಿಂದ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಕೌಶಲ್ ಅವರನ್ನು ತಕ್ಷಣ ಚೌಥಮ್‌ನಲ್ಲಿರುವ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಅಲ್ಲಿಗೆ ತಲುಪುವ ವೇಳೆ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ. ಮೃತರ ಪತ್ನಿ ಹತ್ಯೆಯಲ್ಲಿ ಭಾಗಿಯಾಗಿರುವ ಶಂಕಿತರ ಹೆಸರುಗಳನ್ನು ಬಹಿರಂಗಪಡಿಸಿದ್ದಾರೆ ಎಂದು ವರದಿಯಾಗಿದೆ. ಆದರೆ, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ.

ಮೃತರ ಪತ್ನಿ ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದ್ದು, ಅಪರಾಧಿಗಳು ಗೋದಾಮಿನಿಂದ ತಮ್ಮನ್ನು ಬೈಕ್‌ನಲ್ಲಿ ಹಿಂಬಾಲಿಸಿರಬಹುದು ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ. “ನಾವು ಮನೆಗೆ ತಲುಪುವ ಹಂತದಲ್ಲಿದ್ದಾಗ ಅಪರಾಧಿಗಳು ನನ್ನ ಗಂಡನನ್ನು ತಡೆದು ಅವರ ಮೇಲೆ ಗುಂಡು ಹಾರಿಸಿದರು” ಎಂದು ಅವರು ವಿಚಾರಣಾಧಿಕಾರಿಗಳಿಗೆ ತಿಳಿಸಿದ್ದಾರೆ.

ಪ್ರಾಥಮಿಕವಾಗಿ ಈ ಘಟನೆಯು ಕೌಟುಂಬಿಕ ಕಲಹದ ಪರಿಣಾಮದಂತೆ ಕಂಡುಬರುತ್ತಿದೆ ಎಂದು ಖಗರಿಯಾದ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರಾಕೇಶ್ ಕುಮಾರ್ ಅವರು ಹೇಳಿದ್ದಾರೆ. “ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲು ನಾವು ವಿಶೇಷ ತಂಡವನ್ನು ರಚಿಸಿದ್ದೇವೆ. ಮೃತರ ಪತ್ನಿಯ ಹೇಳಿಕೆಯನ್ನು ಸಹ ದಾಖಲಿಸಲಾಗಿದೆ” ಎಂದು ಎಸ್ಪಿ ಹೇಳಿದ್ದಾರೆ.

ಖಗರಿಯಾ ಜಿಲ್ಲೆಯಲ್ಲಿ ನಡೆದ ಜೆಡಿಯು ಶಾಸಕರ ಸಂಬಂಧಿಯ ಈ ಹತ್ಯೆಗೆ ಕೌಟುಂಬಿಕ ಕಲಹವೆ ಕಾರಣ ಎಂದು ಉಪಮುಖ್ಯಮಂತ್ರಿ, ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಅವರು ಮಂಗಳವಾರ ಸಂಜೆ ಹೇಳಿದ್ದಾರೆ. “ಇದು ಅಪರಾಧವಲ್ಲ. ಕೊಲೆ ಕೌಟುಂಬಿಕ ವಿಷಯಕ್ಕೆ ಸಂಬಂಧಿಸಿದ್ದರೆ, ಅದು ಅಪರಾಧವಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.

ಮೃತರ ಕುಟುಂಬ ಸದಸ್ಯರು ತಮ್ಮ ಪತಿಯ ಕೊಲೆಗೆ ಕೌಟುಂಬಿಕ ವಿವಾದವೂ ಒಂದು ಕಾರಣವಾಗಿರಬಹುದು ಎಂದು ಹೇಳಿದ್ದನ್ನು ಅವರು ಉಲ್ಲೇಖಿಸಿದ್ದಾರೆ. “ಮೃತರ ಕುಟುಂಬ ಸದಸ್ಯರ ಹೇಳಿಕೆಯ ಪ್ರಕಾರ, ಇದು ಕುಟುಂಬಕ್ಕೆ ಸಂಬಂಧಿಸಿದ ವಿಷಯ” ಎಂದು ಚೌಧರಿ ಹೇಳಿದ್ದಾರೆ. ಬಿಹಾರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  1 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಬಿಜೆಪಿ ಸಂಸದೆ ಕಂಗನಾ; ಎಚ್‌ಪಿಎಸ್‌ಇಬಿಎಲ್‌ ಸ್ಪಷ್ಟನೆ

1 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಬಿಜೆಪಿ ಸಂಸದೆ ಕಂಗನಾ; ಎಚ್‌ಪಿಎಸ್‌ಇಬಿಎಲ್‌ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...