Homeಮುಖಪುಟ'ಫುಲೆ' ಚಿತ್ರ ಬಿಡುಗಡೆ ಮುಂದೂಡಿಕೆ: 12 ಬದಲಾವಣೆ ಸೂಚಿಸಿದ ಸೆನ್ಸಾರ್ ಬೋರ್ಡ್

‘ಫುಲೆ’ ಚಿತ್ರ ಬಿಡುಗಡೆ ಮುಂದೂಡಿಕೆ: 12 ಬದಲಾವಣೆ ಸೂಚಿಸಿದ ಸೆನ್ಸಾರ್ ಬೋರ್ಡ್

- Advertisement -
- Advertisement -

ಏಪ್ರಿಲ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿದ್ದ ಅನಂತ್ ಮಹಾದೇವನ್ ನಿರ್ದೇಶನದ ‘ಫುಲೆ’ ಚಿತ್ರ ಬಿಡುಗಡೆಯನ್ನು ಎರಡು ವಾರಗಳ ಕಾಲ ಮುಂದೂಡಲಾಗಿದೆ.

19 ನೇ ಶತಮಾನದಲ್ಲಿ ಜಾತಿ ಮತ್ತು ಲಿಂಗ ತಾರತಮ್ಯದ ವಿರುದ್ಧ ಹೋರಾಡಿದ ಮಹಾನ್ ಸಮಾಜ ಸುಧಾರಕರಾದ ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಅವರ ಕಥೆ ಆಧರಿತ ಈ ಚಿತ್ರದಲ್ಲಿ ಪ್ರತೀಕ್ ಗಾಂಧಿ ಮತ್ತು ಪತ್ರಲೇಖಾ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಮಹಾರಾಷ್ಟ್ರದ ಬ್ರಾಹ್ಮಣ ಸಮುದಾಯದ ಒಂದು ವರ್ಗವು ಚಿತ್ರದಲ್ಲಿ ತಮ್ಮ ಚಿತ್ರಣದ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಮತ್ತು ಕೆಲ ಸಂಸ್ಥೆಗಳು ಇದು ತಮ್ಮ ಸಮುದಾಯವನ್ನು ಅವಮಾನಿಸುತ್ತದೆ ಎಂದು ಆರೋಪಿಸಿದೆ. ಇದು ಚಿತ್ರ ಬಿಡುಗಡೆ ಮುಂದೂಡಿಕೆಯಾಗಲು ಕಾರಣ ಎನ್ನಲಾಗಿದೆ.

ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ಚಿತ್ರದಲ್ಲಿ ಜಾತಿ ವ್ಯವಸ್ಥೆಯ ಕುರಿತು ಹೇಳುವ ಧ್ವನಿಮುದ್ರಿಕೆ ತೆಗೆದು ಹಾಕುವುದು ಸೇರಿದಂತೆ ಹಲವಾರು ಬದಲಾವಣೆಗಳನ್ನು ಮಾಡಲು ಸೂಚಿಸಿದೆ. ‘ಮಹರ್’, ‘ಮಾಂಗ್’, ‘ಪೇಶ್ವೆ’ ಮತ್ತು ‘ಮನು ಜಾತಿ ವ್ಯವಸ್ಥೆ’ ಮುಂತಾದ ಪದಗಳನ್ನು ತೆಗೆದು ಹಾಕಲು ಮತ್ತು ಚಿತ್ರದ ಕೆಲವು ಸಂಭಾಷಣೆಗಳನ್ನು ಬದಲಾಯಿಸಲು ನಿರ್ಮಾಪಕರಿಗೆ ಸೂಚನೆ ನೀಡಿದೆ ಎಂದು ವರದಿಗಳು ಹೇಳಿವೆ.

‘ಪೊರಕೆ ಹೊತ್ತ ವ್ಯಕ್ತಿ, ಸಾವಿತ್ರಿ ಬಾಯಿ ಮೇಲೆ ಸಗಣಿ ಎಸೆಯುವ ಹುಡುಗರು’ ಈ ದೃಶ್ಯಗಳು ಮತ್ತು ಚಿತ್ರದ ಕೆಲ ಡೈಲಾಗ್‌ಗಳಲ್ಲಿ ಬದಲಾವಣೆಗಳನ್ನು ಮಾಡಲು ಸಿಬಿಎಫ್‌ಸಿ ಸೂಚಿಸಿದೆ ಎಂದು ವರದಿಯಾಗಿದೆ.

ನಿರ್ದೇಶಕ ಅನಂತ್ ಮಹಾದೇವನ್ ಅವರಿಗೆ ಬ್ರಾಹ್ಮಣ ಸಮುದಾಯಗಳು ಚಿತ್ರದ ಬಗ್ಗೆ ಕಳವಳ ವ್ಯಕ್ತಪಡಿಸಿ ಬರೆದ ಹಲವಾರು ಪತ್ರಗಳು ಬಂದಿವೆಯಂತೆ. ಮಿಡ್-ಡೇಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮಹಾದೇವನ್, “ಟ್ರೇಲರ್ ಬಿಡುಗಡೆಯಾದ ನಂತರ ಕೆಲವು ತಪ್ಪು ತಿಳುವಳಿಕೆಗಳು ಉಂಟಾಗಿವೆ. ವೀಕ್ಷಕರಿಗೆ ಯಾವುದೇ ತೊಂದರೆಯಾಗದಂತೆ ನಾವು ಗೊಂದಲಗಳನ್ನು ನಿವಾರಿಸುತ್ತೇವೆ ಎಂದು ಹೇಳಿದ್ದಾರೆ.

ಮಹಾದೇವನ್ ಮತ್ತು ಮುವಾಝಮ್ ಬೇಗ್ ಬರೆದ ಈ ಚಿತ್ರವು 19ನೇ ಶತಮಾನದಲ್ಲಿ ಜಾತೀಯತೆಯ ವಿರುದ್ಧ ಮತ್ತು ಮಹಿಳಾ ಶಿಕ್ಷಣವನ್ನು ಉತ್ತೇಜಿಸಲು ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಮಾಡಿದ ಹೋರಾಟ ಮತ್ತು ಈ ವೇಳೆ ಅವರಿಗೆ ಎದುರಾದ ಸವಾಲುಗಳನ್ನು ವಿವರಿಸುತ್ತದೆ.

ಚಿತ್ರದ ಕುರಿತು ತಮ್ಮ ಕಳವಳಗಳನ್ನು ವ್ಯಕ್ತಪಡಿಸಿದ ಸಂಘಟನೆಗಳಲ್ಲಿ ಅಖಿಲ ಭಾರತೀಯ ಬ್ರಾಹ್ಮಣ ಸಮಾಜ ಮತ್ತು ಪರಶುರಾಮ ಆರ್ಥಿಕ ವಿಕಾಸ ಮಹಾಮಂಡಲಗಳು ಸೇರಿವೆ.

ಜ್ಯೋತಿ ಬಾ ಫುಲೆ ಅವರ 20 ಶಾಲೆಗಳ ಸ್ಥಾಪನೆ ಮತ್ತು ಸತ್ಯಶೋಧಕ ಸಮಾಜದಂತಹ ಉಪಕ್ರಮಗಳನ್ನು ಕೆಲವು ಬ್ರಾಹ್ಮಣರು ಹೇಗೆ ಬೆಂಬಲಿಸಿದರು ಎಂಬುದನ್ನು ವಿವರಿಸಲು ತಾವು ಬ್ರಾಹ್ಮಣ ಸಮುದಾಯದ ಪ್ರತಿನಿಧಿಗಳನ್ನು ಭೇಟಿ ಮಾಡಿರುವುದಾಗಿ ಮಹಾದೇವನ್ ಹೇಳಿಕೊಂಡಿದ್ದಾರೆ.
ಈ ಚಿತ್ರವು ಅಜೆಂಡಾ ಆಧಾರಿತವಲ್ಲ, ಸತ್ಯವನ್ನು ಮಾತ್ರ ಹೇಳಲಾಗಿದೆ ಎಂದಿದ್ದಾರೆ.

ಚಿತ್ರದಲ್ಲಿ ಬದಲಾವಣೆಗಳನ್ನು ಮಾಡಲು ಸೂಚಿಸುವ ಮುನ್ನ, ಆರಂಭದಲ್ಲಿ ಸೆನ್ಸಾರ್‌ ಮಂಡಳಿ ಚಿತ್ರಕ್ಕೆ ಯೂ ಪ್ರಮಾಣಪತ್ರವನ್ನು ನೀಡಿತ್ತು. ಚಿತ್ರದಲ್ಲಿ ಮಾಡಲಾದ ಕೆಲವು ಐತಿಹಾಸಿಕ ವಾದಗಳನ್ನು ಬೆಂಬಲಿಸುವ ಸರಿಯಾದ ದಾಖಲೆಗಳನ್ನು ಕೂಡ ನಿರ್ಮಾಪಕರು ಸಲ್ಲಿಸಿದ್ದಾರೆ.

ಬಿಹಾರ | ಆಡಳಿತರೂಢ ಜೆಡಿಯು ನಾಯಕನ ಗುಂಡಿಕ್ಕಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...