ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB) ಸೇರಿದಂತೆ 10 ಅರ್ಜಿಗಳನ್ನು ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಸುಪ್ರೀಂಕೋರ್ಟ್ ಪೀಠವು ಏಪ್ರಿಲ್ 16ರಂದು ನಡೆಸಲಿದೆ. ಸುಪ್ರೀಂಕೋರ್ಟ್ ವೆಬ್‌ಸೈಟ್ ಪ್ರಕಾರ, ವಿಚಾರಣೆಗಾಗಿ ತ್ರಿಸದಸ್ಯ ಪೀಠ ರಚನೆಯಾಗಿದ್ದು, ಮುಖ್ಯನ್ಯಾಯಮೂರ್ತಿ ಜೊತೆಗೆ, ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್ ಇರಲಿದ್ದಾರೆ.
AIMPLB ಯ ಅರ್ಜಿಯ ಜೊತೆಗೆ, ಎಎಪಿ ನಾಯಕ ಅಮಾನತುಲ್ಲಾ ಖಾನ್, ನಾಗರಿಕ ಹಕ್ಕುಗಳ ರಕ್ಷಣಾ ಸಂಘ, ಅರ್ಷದ್ ಮದನಿ, ಸಮಸ್ತ ಕೇರಳ ಜಮಿಯತುಲ್ ಉಲೇಮಾ, ಅಂಜುಮ್ ಖಾದರಿ, ತೈಯಬ್ ಖಾನ್ ಸಲ್ಮಾನಿ, ಮೊಹಮ್ಮದ್ ಶಫಿ, ಮೊಹಮ್ಮದ್ ಫಜ್ಲುರ್ರಹೀಮ್ ಮತ್ತು ಆರ್‌ಜೆಡಿ ನಾಯಕ ಮನೋಜ್ ಕುಮಾರ್ ಝಾ ಅವರು ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿದೆ. ಸುಪ್ರೀಂಕೋರ್ಟ್ ರಿಜಿಸ್ಟ್ರಿ ಇನ್ನೂ ಕೆಲವು ಅರ್ಜಿಗಳನ್ನು ಪೀಠದ ಮುಂದೆ ಪಟ್ಟಿ ಮಾಡಬೇಕಾಗಿದೆ.
ಏಪ್ರಿಲ್ 8 ರಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿ, ಈ ವಿಷಯದಲ್ಲಿ ಯಾವುದೇ ಆದೇಶ ಹೊರಡಿಸುವ ಮೊದಲು ವಿಚಾರಣೆ ನಡೆಸುವಂತೆ ಕೋರಿತು. ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಸಾಮಾನ್ಯವಾಗಿ ಒಂದು ಕಡೆಯವರು ಕೇವಿಯಟ್ ಸಲ್ಲಿಸಿ, ಅದನ್ನು ವಿಚಾರಣೆ ಮಾಡದೆ ಯಾವುದೇ ಆದೇಶಗಳನ್ನು ಹೊರಡಿಸದಂತೆ ನೋಡಿಕೊಳ್ಳುತ್ತದೆ.
ಕೇಂದ್ರ ಸರ್ಕಾರ ಮಂಗಳವಾರ ವಕ್ಫ್ (ತಿದ್ದುಪಡಿ) ಕಾಯ್ದೆ, 2025 ಅನ್ನು ಅಧಿಸೂಚನೆ ಮಾಡಿದೆ. ಈ ಕಾಯ್ದೆಯನ್ನು ಎರಡೂ ಸದನಗಳಲ್ಲಿ ಭಾರಿ ಚರ್ಚೆಗಳ ನಂತರ ಸಂಸತ್ತಿನಲ್ಲಿ ಅಂಗೀಕಾರ ಮಾಡಲಾಗಿತ್ತು. ನಂತರ ಏಪ್ರಿಲ್ 5 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಒಪ್ಪಿಗೆಯನ್ನು ಪಡೆಯಿತು. ಮಸೂದೆಯನ್ನು ರಾಜ್ಯಸಭೆಯಲ್ಲಿ 128 ಸದಸ್ಯರು ಪರವಾಗಿ ಮತ್ತು 95 ಸದಸ್ಯರು ವಿರೋಧಿಸಿ ಮತ ಚಲಾಯಿಸುವ ಮೂಲಕ ಅಂಗೀಕರಿಸಲಾಯಿತು. ಲೋಕಸಭೆಯಲ್ಲಿ 288 ಸದಸ್ಯರು ಬೆಂಬಲಿಸಿದರು ಮತ್ತು 232 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು.
ಜಮಿಯತ್ ಉಲಮಾ-ಇ-ಹಿಂದ್, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಕಾಂಗ್ರೆಸ್ ಸಂಸದರಾದ ಇಮ್ರಾನ್ ಪ್ರತಾಪ್‌ಗಢಿ ಮತ್ತು ಮೊಹಮ್ಮದ್ ಜಾವೇದ್ ಇತರ ಪ್ರಮುಖ ಅರ್ಜಿದಾರರಾಗಿದ್ದಾರೆ. ಏಪ್ರಿಲ್ 7 ರಂದು, ಸಿಜೆಐ ನೇತೃತ್ವದ ಪೀಠವು ಜಮಿಯತ್ ಉಲಮಾ-ಇ-ಹಿಂದ್ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರಿಗೆ ಅರ್ಜಿಗಳನ್ನು ಪಟ್ಟಿ ಮಾಡುವುದನ್ನು ಪರಿಗಣಿಸುವುದಾಗಿ ಭರವಸೆ ನೀಡಿತ್ತು.
ಡಿಎಂಕೆ ತನ್ನ ಉಪ ಪ್ರಧಾನ ಕಾರ್ಯದರ್ಶಿ ಎ. ರಾಜಾ ಮೂಲಕ ಉನ್ನತ ನ್ಯಾಯಾಲಯಕ್ಕೆ ಮನವಿ ಮಾಡಿತ್ತು ಮತ್ತು ಪತ್ರಿಕಾ ಪ್ರಕಟಣೆಯಲ್ಲಿ, “ವ್ಯಾಪಕ ವಿರೋಧದ ಹೊರತಾಗಿಯೂ, ಜೆಪಿಸಿ ಸದಸ್ಯರು ಮತ್ತು ಇತರ ಪಾಲುದಾರರು ಎತ್ತಿದ ಆಕ್ಷೇಪಣೆಗಳನ್ನು ಸರಿಯಾಗಿ ಪರಿಗಣಿಸದೆ ಕೇಂದ್ರ ಸರ್ಕಾರವು ವಕ್ಫ್ ತಿದ್ದುಪಡಿ ಮಸೂದೆ, 2025 ಅನ್ನು ಅಂಗೀಕರಿಸಿದೆ” ಎಂದು ಹೇಳಿದೆ.
ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ತಕ್ಷಣದ ಅನುಷ್ಠಾನವು ತಮಿಳುನಾಡಿನಲ್ಲಿ ಸುಮಾರು 50 ಲಕ್ಷ ಮುಸ್ಲಿಮರು ಮತ್ತು ದೇಶದ ಇತರ ಭಾಗಗಳಲ್ಲಿರುವ 20 ಕೋಟಿ ಮುಸ್ಲಿಮರ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಮತ್ತು ಪೂರ್ವಾಗ್ರಹ ಪೀಡಿತವಾಗಿದೆ ಎಂದು ಡಿಎಂಕೆ ಹೇಳಿದೆ. ಏಪ್ರಿಲ್ 16ರಂದು
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್!

