Homeಮುಖಪುಟತಹವ್ವುರ್ ರಾಣಾ ಭಾರತಕ್ಕೆ, 18 ದಿನ ಎನ್‌ಐಎ ಕಸ್ಟಡಿಗೆ ನೀಡಿದ ಕೋರ್ಟ್‌

ತಹವ್ವುರ್ ರಾಣಾ ಭಾರತಕ್ಕೆ, 18 ದಿನ ಎನ್‌ಐಎ ಕಸ್ಟಡಿಗೆ ನೀಡಿದ ಕೋರ್ಟ್‌

- Advertisement -
- Advertisement -

ಮುಂಬೈ ದಾಳಿಯ (26/11) ಆರೋಪಿ ತಹವ್ವುರ್ ರಾಣಾನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಗುರುವಾರ (ಏ.10) ರಾತ್ರಿ ಭಾರತಕ್ಕೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ 18 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕಸ್ಟಡಿಗೆ ನೀಡಿದೆ.

ಗುರುವಾರ ರಾತ್ರಿ ಅಮೆರಿಕದಿಂದ ಬಂದ ರಾಣಾನನ್ನು ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು, ಬಳಿಕ ಭಾರೀ ಭದ್ರತೆಯೊಂದಿಗೆ ಪಟಿಯಾಲ ಹೌಸ್‌ನಲ್ಲಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಮುಂದೆ ಹಾಜರುಪಡಿಸಿದ್ದರು.

ವರದಿಗಳ ಪ್ರಕಾರ, ಇಮೇಲ್ ಸಂವಹನದಂತಹ ಪ್ರಮುಖ ಸಾಕ್ಷ್ಯಗಳನ್ನು ಉಲ್ಲೇಖಿಸಿ, ಎನ್‌ಐಎ ಆರಂಭದಲ್ಲಿ ರಾಣಾನನ್ನು 20 ದಿನಗಳ ಕಾಲ ಕಸ್ಟಡಿಗೆ ನಿಡುವಂತೆ ಮನವಿ ಮಾಡಿತ್ತು.

ನ್ಯಾಯಾಲಯಕ್ಕೆ ಸಲ್ಲಿಸಿದ ತನ್ನ ಅರ್ಜಿಯಲ್ಲಿ, ಶಂಕಿತ ಪಿತೂರಿಯ ತನಿಖೆಗೆ ರಾಣಾನ ಕಸ್ಟಡಿ ವಿಚಾರಣೆ ಅತ್ಯಗತ್ಯ ಎಂದು ಎನ್‌ಐಎ ವಾದಿಸಿತ್ತು. ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವ ಗುರಿಯನ್ನು ಹೊಂದಿರುವ ಕ್ರಿಮಿನಲ್ ಸಂಚಿನಲ್ಲಿ ರಾಣಾ ಇತರರೊಂದಿಗೆ ಸಹಕರಿಸಿದ್ದಾನೆ ಎಂದು ಆರೋಪಿಸಿತ್ತು.

ವಿಚಾರಣೆಯ ಸಮಯದಲ್ಲಿ, ರಾಣಾ ಖಾಸಗಿ ವಕೀಲರನ್ನು ನೇಮಿಸಿಕೊಳ್ಳಲು ಬಯಸುತ್ತಾರಾ? ಇಲ್ಲ ನ್ಯಾಯಾಲಯದಿಂದ ಕಾನೂನು ನೆರವು ಪಡೆಯಲು ಬಯಸುತ್ತಾರಾ? ಎಂದು ನ್ಯಾಯಾಧೀಶರು ಕೇಳಿದ್ದಾರೆ.

ಎನ್‌ಐಎ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ದಯಾನ್ ಕೃಷ್ಣನ್, ಲಭ್ಯವಿರುವ ಸಾಕ್ಷ್ಯಗಳು ಮತ್ತು ಸಂಬಂಧಿತ ವಿಷಯಗಳನ್ನು ಪರಿಶೀಲಿಸಲು ಮತ್ತು ದೃಢೀಕರಿಸಲು ರಾಣಾನನ್ನು ಕಸ್ಟಡಿಗೆ ನೀಡುವುದು ಅಗತ್ಯ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ.

ರಾಣಾ ವಿರುದ್ಧದ ಆರೋಪಗಳನ್ನು ವಿವರಿಸಿ ಮತ್ತು ನ್ಯಾಯಾಧೀಶರ ಪರಿಗಣನೆಗೆ ಸಾಕ್ಷ್ಯಗಳ ಪಟ್ಟಿಯನ್ನು ಮಂಡಿಸಿ, ಎನ್‌ಐಎ ಪರವಾಗಿ ಕೃಷ್ಣನ್ ರಿಮಾಂಡ್ ಅರ್ಜಿಯನ್ನು ಸಲ್ಲಿಸಿದ್ದಾರೆ.

ಸಂಭಾವ್ಯ ಸಮಸ್ಯೆಗಳ ನಿರೀಕ್ಷೆಯಲ್ಲಿ ಹೆಡ್ಲಿ ರಾಣಾಗೆ ತನ್ನ ಆಸ್ತಿ ಮತ್ತು ಸಂಪನ್ಮೂಲಗಳ ವಿವರವಾದ ಪಟ್ಟಿಯನ್ನು ಇಮೇಲ್ ಮಾಡಿದ್ದ ಎಂದು ಎನ್‌ಐಎ ನ್ಯಾಯಾಲಯಕ್ಕೆ ತಿಳಿಸಿದೆ. ಈ ಸಂವಹನವು ಇಲ್ಯಾಸ್ ಕಾಶ್ಮೀರಿ ಮತ್ತು ಅಬ್ದುರ್ ರೆಹಮಾನ್ ಸೇರಿದಂತೆ ಇತರ ಆರೋಪಿಗಳ ಪಾತ್ರಗಳನ್ನು ಬಹಿರಂಗಪಡಿಸಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ರಾಣಾನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಮುನ್ನ, ದೆಹಲಿ ಪೊಲೀಸರು ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ಮಾಧ್ಯಮ ಪ್ರತಿನಿಧಿಗಳು ಮತ್ತು ಸಾರ್ವಜನಿಕರನ್ನು ನ್ಯಾಯಾಲಯದ ಆವರಣದಿಂದ ಹೊರಗಡೆ ಕಳಿಸಿದ್ದರು.

ಎನ್‌ಐಎ ಮಹಾನಿರ್ದೇಶಕರು, ಇಬ್ಬರು ಇನ್ಸ್‌ಪೆಕ್ಟರ್ ಜನರಲ್‌ಗಳು, ಒಬ್ಬ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಮತ್ತು ಒಬ್ಬ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ 12 ಅಧಿಕಾರಿಗಳ ಉನ್ನತಾಧಿಕಾರದ ತಂಡ ರಾಣಾನನ್ನು ವಿಚಾರಣೆಗೆ ಒಳಪಡಿಸಲಿದೆ.

ಎನ್‌ಐಎ ಮೂಲಗಳ ಪ್ರಕಾರ, ತನಿಖೆಯಲ್ಲಿ ನೇರವಾಗಿ ಭಾಗಿಯಾಗಿರುವ ಈ 12 ಅಧಿಕಾರಿಗಳಿಗೆ ಮಾತ್ರ ರಾಣಾ ಇರುವ ಸೆಲ್‌ಗೆ ಪ್ರವೇಶ ನೀಡಲಾಗುತ್ತದೆ. ಬೇರೆ ಯಾವುದೇ ಅಧಿಕಾರಿ ಸೆಲ್‌ಗೆ ಹೋರಬೇಕಾದರೆ ಪೂರ್ವಾನುಮತಿ ಬೇಕಾಗುತ್ತದೆ. ಕೋರ್ ತಂಡದಲ್ಲಿರುವವರಲ್ಲಿ ಎನ್‌ಐಎ ಡಿಜಿ ಸದಾನಂದ ದಾತೆ, ಐಜಿ ಆಶಿಶ್ ಬಾತ್ರಾ ಮತ್ತು ಡಿಐಜಿ ಜಯಾ ರಾಯ್ ಸೇರಿದ್ದಾರೆ.

ರಾಣಾಗೆ ರೆಕಾರ್ಡ್ ಮಾಡಿದ ಧ್ವನಿ ಮಾದರಿಗಳು, ಛಾಯಾಚಿತ್ರಗಳು, ವಿಡಿಯೊಗಳು ಮತ್ತು ಇಮೇಲ್ ಟ್ರೇಲ್‌ಗಳು ಸೇರಿದಂತೆ ಹಲವಾರು ವಸ್ತುಗಳನ್ನು ತೋರಿಸಲಾಗುವುದು. ಅವುಗಳಲ್ಲಿ ಕೆಲವು ಪಾಕಿಸ್ತಾನದ ಗುಪ್ತಚರ ಜಾಲ ಮತ್ತು ಭಯೋತ್ಪಾದಕರೊಂದಿಗೆ ಆತನ ಸಂಪರ್ಕವನ್ನು ಖಚಿತಪಡಿಸುವ ನಿರೀಕ್ಷೆಯಿಂದ ಎಂದು ವರದಿಗಳು ಹೇಳಿವೆ.

ರಾಣಾನನ್ನು ಅಮೆರಿಕದ ಲಾಸ್‌ ಏಂಜಲೀಸ್‌ನಿಂದ ಭಾರತಕ್ಕೆ ಗಡೀಪಾರು ಮಾಡಿಸಿಕೊಂಡು ತರಲಾಗಿದೆ. 16 ವರ್ಷಗಳ ವಿಚಾರಣೆ ನಂತರ ಹಸ್ತಾಂತರ ನಡೆದಿದೆ.

ವಿಮಾನ ಅಪಘಾತ ಪ್ರಕರಣ: ಸುಳ್ಳು ಸುದ್ದಿ ಹರಡಿದ್ದ ವ್ಯಕ್ತಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಟ್ರಾನ್ಸ್‌ಜೆಂಡರ್ ಪೈಲಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...