Homeಮುಖಪುಟತಜ್ಞರನ್ನು 'ತುಕ್ಡೆ ತುಕ್ಡೆ ಗ್ಯಾಂಗ್' ಎಂದ ಎಬಿವಿಪಿ | ಕಾರ್ಯಕ್ರಮದಿಂದ ಹೆಸರು ಕೈಬಿಟ್ಟ ಐಐಎಸ್‌ಇಆರ್

ತಜ್ಞರನ್ನು ‘ತುಕ್ಡೆ ತುಕ್ಡೆ ಗ್ಯಾಂಗ್’ ಎಂದ ಎಬಿವಿಪಿ | ಕಾರ್ಯಕ್ರಮದಿಂದ ಹೆಸರು ಕೈಬಿಟ್ಟ ಐಐಎಸ್‌ಇಆರ್

- Advertisement -
- Advertisement -

ಎಬಿವಿಪಿ ನಡೆಸಿದ ಪ್ರತಿಭಟನೆಗಳ ಕಾರಣಕ್ಕೆ ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ(IISER) ಗುರುವಾರ ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಲು ಆಹ್ವಾನಿಸಲಾದ ಹಲವಾರು ತಜ್ಞರನ್ನು ಕೈಬಿಟ್ಟಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಕಾರ್ಯಕ್ರಮದಲ್ಲಿ ಮಾತನಾಡಲು ಬರುವ ತಜ್ಞರು “ತುಕ್ಡೆ ತುಕ್ಡೆ ಗ್ಯಾಂಗ್‌ ಸದಸ್ಯರು” ಎಂದು ಆರೋಪಿಸಿ ಎಬಿವಿಪಿ ಪ್ರತಿಭಟನೆ ಮಾಡಿತ್ತು. ತಜ್ಞರನ್ನು ‘ತುಕ್ಡೆ ತುಕ್ಡೆ ಗ್ಯಾಂಗ್’

ಎಬಿವಿಪಿಯು ಬಿಜೆಪಿಯ ಮಾತೃ ಸಂಘಟನೆಯಾದ ಆರೆಸ್ಸೆಸ್‌ನ ವಿದ್ಯಾರ್ಥಿ ವಿಭಾಗವಾಗಿದೆ. ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳ ನಾಯಕರು ತಮ್ಮ ವಿರೋಧಿಗಳು ಮತ್ತು ಭಿನ್ನಮತೀಯರನ್ನು “ತುಕ್ಡೆ ತುಕ್ಡೆ” ಗ್ಯಾಂಗ್ ಅಥವಾ ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ವ್ಯಕ್ತಿಗಳ ಗುಂಪಿನ ಸದಸ್ಯರು ಎಂದು ಆಗಾಗ್ಗೆ ಆರೋಪಿಸುತ್ತಾರೆ.

ಪತ್ರಿಕಾ ಹೇಳಿಕೆಯಲ್ಲಿ, ಅಂಬೇಡ್ಕರ್ ಅವರ ವಾರ್ಷಿಕೋತ್ಸವವನ್ನು ಆಚರಿಸಲು ಸರಣಿ ಮಾತುಕತೆಗಳನ್ನು ಆಯೋಜಿಸಲಾಗಿದೆ ಎಂದು IISER ತಿಳಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ವಿದ್ಯಾರ್ಥಿ ನೇತೃತ್ವದ ಮುಕ್ತಿಪರ್ವ ಕಾರ್ಯಕ್ರಮದ ಭಾಗವಾಗಿ, ಸಾಮಾಜಿಕ ಸಮಾನತೆ, ಜಾತಿ ಮತ್ತು ಲಿಂಗ ಚಲನಶೀಲತೆ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಶಿಕ್ಷಣ ತಜ್ಞರಿಂದ ಸಂಸ್ಥೆಯಲ್ಲಿ ಸಂವಾದಗಳನ್ನು ಯೋಜಿಸಲಾಗಿತ್ತು” ಎಂದು ಸಂಸ್ಥೆ ಹೇಳಿತ್ತು ಎಂದು ಪತ್ರಿಕೆ ವರದಿ ಮಾಡಿದೆ.

ದೀಪಾಲಿ ಸಾಳ್ವೆ, ನಜೀಮಾ ಪರ್ವೀನ್ ಮತ್ತು ಸ್ಮಿತಾ ಎಂ ಪಾಟೀಲ್ ಸೇರಿದಂತೆ ಹಲವಾರು ಶಿಕ್ಷಣ ತಜ್ಞರನ್ನು ಜಾತಿ, ಅರ್ಥಶಾಸ್ತ್ರ ಮತ್ತು ಲಿಂಗ ಚಲನಶೀಲತೆಯ ಬಗ್ಗೆ ಮಾತನಾಡಲು ಆಹ್ವಾನಿಸಲಾಗಿತ್ತು ಎಂದು ಅದು ಹೇಳಿದೆ. “ಆದಾಗ್ಯೂ, ವಿವಾದವನ್ನು ತಪ್ಪಿಸಲು, ಈ ಸಮಯದಲ್ಲಿ ಯೋಜಿತ ಭಾಷಣಕಾರರನ್ನು ಕೈಬಿಡಲು ನಾವು ನಿರ್ಧಾರ ತೆಗೆದುಕೊಂಡಿದ್ದೇವೆ” ಎಂದು ಸಂಸ್ಥೆ ಹೇಳಿದೆ.

ಸಂಸ್ಥೆಯು ನಿರ್ಧಾರ ತೆಗೆದುಕೊಳ್ಳುವ ಒಂದು ದಿನದ ಮೊದಲು, ಎಬಿವಿಪಿ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಆಹ್ವಾನಿಸಲಾದ ಭಾಷಣಕಾರರ ವಿರುದ್ಧ ತಮ್ಮ ಪ್ರತಿಭಟನೆ ನಡೆಸಿತ್ತು. ಈ ಬಗ್ಗೆ ಸಂಸ್ಥೆಯ ನಿರ್ದೇಶಕ ಸುನಿಲ್ ಭಾಗವತ್ ಅವರನ್ನು ಭೇಟಿಯಾಗಿದ್ದ ಎಬಿವಿಪಿ ಸದಸ್ಯರು, ಮಾತನಾಡಲು ಆಹ್ವಾನಿಸಲಾದ “ಕಟ್ಟರ್‌ ಮಾವೋವಾದಿಗಳ” ಉಪಸ್ಥಿತಿಯನ್ನು ಆಕ್ಷೇಪಿಸುವುದಾಗಿ ಹೇಳಿದ್ದರು.

“ಅವರ ಹೇಳಿಕೆಗಳು ಕಾನೂನು ಮತ್ತು ಸುವ್ಯವಸ್ಥೆಗೆ ಸಮಸ್ಯೆ ಉಂಟುಮಾಡುವ ಸಾಧ್ಯತೆಯಿದೆ. ಜೊತೆಗೆ ಅವರು ಧರ್ಮದ ಆಧಾರದ ಮೇಲೆ ಸಮಾಜವನ್ನು ವಿಭಜಿಸಲು ಪ್ರಯತ್ನಿಸುತ್ತಾರೆ. ಅಲ್ಲದೆ, ಅಂಬೇಡ್ಕರ್ ತಮ್ಮ ಜೀವನದುದ್ದಕ್ಕೂ ಎಡಪಂಥೀಯರ ಸಿದ್ಧಾಂತವನ್ನು ವಿರೋಧಿಸಿದ್ದರು ಎಂದು ಅದು ಹೇಳಿಕೊಂಡಿದೆ.

“ಐಐಎಸ್‌ಇಆರ್ ಅವರ ಜಯಂತಿಯ ಸಂದರ್ಭದಲ್ಲಿ ‘ತುಕ್ಡೆ ತುಕ್ಡೆ ಗ್ಯಾಂಗ್’ ಜೊತೆಗೆ ಗುರುತಿಸಿಕೊಂಡ ಸದಸ್ಯರ ಉಪಸ್ಥಿತಿಗೆ ಅವಕಾಶ ನೀಡಿದ್ದು ಏಕೆ?. ಕಳೆದ ವರ್ಷ ಮುಕ್ತಿಪರ್ವದ ಸಂದರ್ಭದಲ್ಲಿ, ಭಾಷಣಕಾರರು ಜನರ ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆಗಳನ್ನು ನೀಡಿದ್ದರು.” ಎಂದು ಎಬಿವಿಪಿ ಕೇಳಿದೆ. ಕಾರ್ಯಕ್ರಮದ ಬಗ್ಗೆ ಪುಣೆ ಪೊಲೀಸರಿಗೆ ಕೂಡಾ ಎಬಿವಿಪಿ ಮನವಿ ಸಲ್ಲಿಸಿದೆ ಎಂದು ವರದಿಯಾಗಿದೆ. ತಜ್ಞರನ್ನು ‘ತುಕ್ಡೆ ತುಕ್ಡೆ ಗ್ಯಾಂಗ್’

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಪ್ರತಿ ಊರಿನಲ್ಲಿ 8-10 ಜನ ಸಾಯಲಿ..’; ವಕ್ಫ್ ಕಾಯ್ದೆ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಕಾಂಗ್ರೆಸ್ ಮುಖಂಡ

‘ಪ್ರತಿ ಊರಿನಲ್ಲಿ 8-10 ಜನ ಸಾಯಲಿ..’; ವಕ್ಫ್ ಕಾಯ್ದೆ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಕಾಂಗ್ರೆಸ್ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...