Homeಚಳವಳಿಇವಿಎಂ ಮೂಲ ಕೋಡ್ ಬಿಡುಗಡೆ ಮಾಡಿ: ಚುನಾವಣಾ ಆಯೋಗಕ್ಕೆ ಮನವಿ

ಇವಿಎಂ ಮೂಲ ಕೋಡ್ ಬಿಡುಗಡೆ ಮಾಡಿ: ಚುನಾವಣಾ ಆಯೋಗಕ್ಕೆ ಮನವಿ

- Advertisement -
- Advertisement -

ಮತದಾರರ ಪಟ್ಟಿಗಳನ್ನು ಹುಡುಕಲು ಸಾಧ್ಯವಾಗುವಂತೆ ಮಾಡುವುದು ಮತ್ತು ಎಲೆಕ್ಟ್ರಾನಿಕ್ ವೋಟರ್ ಯಂತ್ರಗಳ (ಇವಿಎಂ) ಮೂಲ ಕೋಡ್ ಅನ್ನು ಬಿಡುಗಡೆ ಮಾಡುವುದರಿಂದ ಚುನಾವಣಾ ವ್ಯವಸ್ಥೆಯಲ್ಲಿ ಸಾರ್ವಜನಿಕರ ವಿಶ್ವಾಸವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ನಾಗರಿಕರ ಹಕ್ಕುಗಳ ಸಂಘಟನೆಯೊಂದು ಶುಕ್ರವಾರ ಚುನಾವಣಾ ಆಯೋಗಕ್ಕೆ ತಿಳಿಸಿದೆ.

ಕೇವಲ 28% ಭಾರತೀಯರು ಮಾತ್ರ ಚುನಾವಣಾ ಆಯೋಗದಲ್ಲಿ ನಂಬಿಕೆ ಹೊಂದಿದ್ದಾರೆ ಎಂಬ ಸಮೀಕ್ಷೆಯೊಂದರ ಹಿನ್ನಲೆಯಲ್ಲಿ ‘Vote for Democracy” ಎಂಬ ಹೆಸರಿನ 83 ಜನರ ಈ ನಾಗರಿಕ ಹಕ್ಕುಗಳ ಗುಂಪು ಚುನಾವಣಾ ಆಯೋಗಕ್ಕೆ ಆರು ಸಲಹೆಗಳನ್ನು ನೀಡಿದೆ. ಚುನಾವಣಾ ಆಯೋಗದ ಮೇಲೆ ನಂಬಿಕೆ ಕಳೆದುಕೊಳ್ಳುವುದು “ಪ್ರಜಾಪ್ರಭುತ್ವದ ಹಿನ್ನಡೆಯ ಆತಂಕಕಾರಿ ಸೂಚನೆ” ಎಂದು ಅದು ಹೇಳಿದೆ.

ಹುಡುಕಿ ಕಂಡುಕೊಳ್ಳಬಹುದಾದ ಡೇಟಾಬೇಸ್ ಇಲ್ಲದೆ, ಎಲ್ಲಾ ಅರ್ಹ ನಿವಾಸಿಗಳನ್ನು ಮತದಾರರಾಗಿ ಪಟ್ಟಿ ಮಾಡಲಾಗಿದೆಯೇ ಅಥವಾ ಮರಣ ಹೊಂದಿದವರನ್ನು ಅಧಿಕೃತ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆಯೇ ಎಂದು ನಾಗರಿಕರು ಸ್ವತಂತ್ರವಾಗಿ ಪರಿಶೀಲಿಸಲು ಈಗ ಯಾವುದೇ ಮಾರ್ಗವಿಲ್ಲ ಎಂದು ನಾಗರಿಕ ಹಕ್ಕುಗಳ ಗುಂಪು ವಾದಿಸಿದೆ. “ನಮ್ಮ ಈ ಬೇಡಿಕೆಯನ್ನು ಪೂರೈಸುವಲ್ಲಿ ವಿಫಲವಾದರೆ, ಚುನಾವಣಾ ಆಯೋಗವು ತಾಂತ್ರಿಕವಾಗಿ ಹಾಗೆ ಒದಗಿಸಲು ಸಜ್ಜಾಗಿಲ್ಲ ಎಂದರ್ಥ” ಎಂದು ಅವರ ಮನವಿ ಪತ್ರವು ಹೇಳಿದೆ.

ಮತದಾನ ಯಂತ್ರಗಳ ಮೂಲ ಕೋಡ್ ಸಾರ್ವಜನಿಕವಾಗಿ ಲಭ್ಯವಿಲ್ಲ ಎಂಬ ವಿಚಾರವನ್ನು ಎತ್ತಿತೋರಿಸಿರುವ ಅವರು, “ಬ್ಯಾಲೆಟ್‌ ಯೂನಿಟ್‌ನ ಬಟನ್‌ಗಳಲ್ಲಿ ಪ್ರತಿ ಅಭ್ಯರ್ಥಿಗೆ ಮತಗಳನ್ನು ದಾಖಲಿಸುವುದು ಮತ್ತು ಮತಗಳನ್ನು ಎಣಿಸುವುದು ಸೇರಿದಂತೆ ಮುಂತಾದ ಯಾವುದೆ ತೊಂದರೆ ಇಲ್ಲದ ಕೆಲಸ ಮಾಡುವ ಒಂದು ಸರಳ ಮೂಲ ಕೋಡ್‌ನ ಸುತ್ತ ಏಕೆ ಇಂತಹ ಗೌಪ್ಯತೆ ಇದೆ?” ಎಂದು ಮನವಿ ಪತ್ರವು ಕೇಳಿದೆ.

ಇದೆಲ್ಲದೆ, ಎಲ್ಲಾ ಬೂತ್‌ಗಳು ಮತ್ತು ಕ್ಷೇತ್ರಗಳಿಂದ ಹುಡುಕಿ ಕಂಡುಕೊಳ್ಳಬಹುದಾದ ಸ್ವರೂಪದಲ್ಲಿ ಫಾರ್ಮ್ 17C ಡೇಟಾವನ್ನು ಮತ್ತು ಒಟ್ಟು ಮತ ಎಣಿಕೆಗಳನ್ನು ಸಾರ್ವಜನಿಕ ಪರಿಶೀಲನೆಗಾಗಿ ಸಾರ್ವಜನಿಕವಾಗಿ ಅಪ್‌ಲೋಡ್ ಮಾಡಲು ಗುಂಪು ಕರೆ ನೀಡಿದೆ.

ಮತಗಟ್ಟೆಗಳಲ್ಲಿ ಚುನಾವಣಾ ಆಯೋಗವನ್ನು ಅಲ್ಲಿನ ಪ್ರೆಸೀಡಿಂಗ್ ಆಫೀಸರ್‌ ಪ್ರತಿನಿಧಿಸುತ್ತಾರೆ. ಮತದಾನ ಕೇಂದ್ರದಲ್ಲಿ ಮತದಾನ ಮುಗಿದ ನಂತರ, ಈ ಪ್ರೆಸೀಡಿಂಗ್ ಅಧಿಕಾರಿ ಫಾರ್ಮ್ 17C ಅನ್ನು ಭರ್ತಿ ಮಾಡುತ್ತಾರೆ. ಇದು ಮತಗಟ್ಟೆಯಲ್ಲಿ ನೋಂದಾಯಿಸಲಾದ ಮತದಾರರ ಸಂಖ್ಯೆ ಮತ್ತು ಎಲೆಕ್ಟ್ರಾನಿಕ್ ಮತದಾನ ಯಂತ್ರದಲ್ಲಿ ದಾಖಲಾದ ಮತಗಳ ಸಂಖ್ಯೆ ಮತ್ತು ಮತ ಚಲಾಯಿಸಿದ ಮತದಾರರ ಲಿಂಗವಾರು ವಿಂಗಡಣೆಯಂತಹ ವಿವರಗಳನ್ನು ಹೊಂದಿರುತ್ತದೆ.

ಪಾರದರ್ಶಕತೆಗಾಗಿ ಮತ್ತು ಹುಡುಕಿ ಪಡೆಯಲು ಡೇಟಾಬೇಸ್‌ನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಮೂನೆಗಳು – ಫಾರ್ಮ್ 9, 10, 11, 11A, ಮತ್ತು 11B – ಕೂಡಾ ಸಾರ್ವಜನಿಕರಿಗೆ ಲಭ್ಯ ಇರಬೇಕು ಎಂದು ನಾಗರಿಕ ಗುಂಪು ಒತ್ತಾಯಿಸಿದೆ. ಹೆಚ್ಚುವರಿಯಾಗಿ, ಚುನಾವಣೆಗಳಲ್ಲಿ ಬಳಸಲಾಗುವ ಪ್ರತಿಯೊಂದು ಚಿಹ್ನೆಯನ್ನು ಲೋಡಿಂಗ್ ಘಟಕದಿಂದ ಸಂಪೂರ್ಣ ಡೇಟಾವನ್ನು ಬಿಡುಗಡೆ ಮಾಡಲು ಗುಂಪು ಒತ್ತಾಯಿಸಿದೆ ಮತ್ತು ಪ್ರತಿ ಚುನಾವಣೆಯಲ್ಲಿ ಎಲ್ಲಾ ಇವಿಎಂಗಳಿಗೆ ಮತದಾರರ ಪರಿಶೀಲಿಸಿದ ಪೇಪರ್ ಆಡಿಟ್ ಟ್ರೇಲ್‌ಗಳನ್ನು ರಚಿಸುವಂತೆ ಒತ್ತಾಯಿಸಿದೆ.

VVPAT ಚೀಟಿಗಳನ್ನು ಮತದಾರರಿಗೆ ನೀಡಬೇಕು, ನಂತರ ಅವರು ಅವುಗಳನ್ನು ಪ್ರತ್ಯೇಕ ಮತಪೆಟ್ಟಿಗೆಯಲ್ಲಿ ಇಡಬೇಕಾಗುತ್ತದೆ ಎಂದು ಅವರು ಒತ್ತಾಯಿಸಿದ್ದಾರೆ. ಒಂದು ಕ್ಷೇತ್ರದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳನ್ನು ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್ (VVPAT) ಘಟಕದಲ್ಲಿ ಅಪ್‌ಲೋಡ್ ಮಾಡಲು ಸಿಂಬಲ್ ಲೋಡಿಂಗ್ ಘಟಕವನ್ನು ಬಳಸಲಾಗುತ್ತದೆ. ನಂತರ ಅದನ್ನು ಎಲೆಕ್ಟ್ರಾನಿಕ್ ಮತ ಯಂತ್ರಗಳ ಮೂಲಕ ಚಲಾಯಿಸಿದ ಮತಗಳನ್ನು ಪರಿಶೀಲಿಸಲು ಬಳಸಲಾಗುತ್ತದೆ.

ಎಲೆಕ್ಟ್ರಾನಿಕ್ ಮತ ಯಂತ್ರಗಳು ತಾಂತ್ರಿಕ ದುರ್ಬಲವಾಗಿದ್ದರೆ ಮತ್ತು ಕಾರ್ಯವಿಧಾನದ ಲೋಪಗಳಿಂದ ಕೂಡಿದ್ದರೆ ಅವುಗಳ ವಿಶ್ವಾಸಾರ್ಹತೆಗೆ ಧಕ್ಕೆಯಾಗುತ್ತವೆ ಎಂದು ಗುಂಪು ಆರೋಪಿಸಿದೆ. ಆದಾಗ್ಯೂ, ಈ ಶಿಫಾರಸುಗಳನ್ನು ಅನುಸರಿಸಿದರೆ, ಕಾಗದದ ಮತಪತ್ರಗಳಲ್ಲಿ ಮತದಾನ ಮಾಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದು, ಒಂದು ವೇಳೆ VVPAT ಯಂತ್ರಗಳನ್ನು ಬಲಪಡಿಸಲು ಸಾಧ್ಯವಾಗದಿದ್ದರೆ ಕಾಗದದ ಮತಪತ್ರಗಳು ಯೋಗ್ಯವಾಗಿರುತ್ತದೆ ಎಂದು ಅವರು ವಾದಿಸಿದ್ದಾರೆ.

ಈ ಮನವಿ ಪತ್ರವನ್ನು ಅನುಮೋದಿಸಿದವರಲ್ಲಿ ಮಾಜಿ ಭಾರತೀಯ ಆಡಳಿತ ಸೇವಾ ಅಧಿಕಾರಿ ಎಂ.ಜಿ. ದೇವಸಹಾಯಂ, ಮಾಜಿ ಹೈಕೋರ್ಟ್ ನ್ಯಾಯಮೂರ್ತಿ ಡಿ. ಹರಿಪರಂತಮನ್ ಮತ್ತು ಬಿ.ಜಿ. ಕೋಲ್ಸೆ ಪಾಟೀಲ್ ಮತ್ತು ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಇದ್ದಾರೆ. ಇವಿಎಂ ಮೂಲ ಕೋಡ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಛತ್ತೀಸ್‌ಗಢ | ಪ್ರೇಮ ಸಂಬಂಧ ಆರೋಪಿಸಿ ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ

ಛತ್ತೀಸ್‌ಗಢ | ಪ್ರೇಮ ಸಂಬಂಧ ಆರೋಪಿಸಿ ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...