ಕಳೆದ ಕೆಲವು ವರ್ಷಗಳಲ್ಲಿ ಹಾವೇರಿ ಜಿಲ್ಲೆಯಲ್ಲಿ ಕೈಗೊಂಡ ಕಾಮಗಾರಿಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಗುತ್ತಿಗೆದಾರರ 738 ಕೋಟಿ ರೂ.ಗಳ ಬಾಕಿ ಹಣವನ್ನು ಪಾವತಿಸಿಲ್ಲ ಎಂದು ಹಾವೇರಿ ಜಿಲ್ಲಾ ಗುತ್ತಿಗೆದಾರರ ಸಂಘ ಆರೋಪಿಸಿದೆ. ಭಾನುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಹಾವೇರಿ ಜಿಲ್ಲಾ ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಹಾವೇರಿ, ಏಪ್ರಿಲ್ ಅಂತ್ಯದ ವೇಳೆಗೆ ಸರ್ಕಾರ ಬಾಕಿ ಹಣವನ್ನು ಪಾವತಿಸದಿದ್ದರೆ ಜಿಲ್ಲೆಯ ಗುತ್ತಿಗೆದಾರರು ದಯಾಮರಣಕ್ಕೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಬಾಕಿ ಪಾವತಿಸದ
“ಹಲವಾರು ಇಲಾಖೆಗಳಲ್ಲಿ ಕಮಿಷನ್ ಹಾವಳಿ ಮಿತಿಮೀರಿದೆ. ಹಲವಾರು ಅಧಿಕಾರಿಗಳು ಮತ್ತು ಮಧ್ಯವರ್ತಿಗಳು ಕಾಮಗಾರಿಗಳಿಗೆ ಶೇ. 10 ರಿಂದ 15 ರಷ್ಟು ಕಮಿಷನ್ ಪಡೆದಿದ್ದಾರೆ. ಇಲ್ಲಿಯವರೆಗೆ, 10 ಮಂದಿ ಗುತ್ತಿಗೆದಾರರು ತೊಂದರೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.” ಎಂದು ಅವರು ಹೇಳಿದ್ದಾರೆ.
“ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್ ಮತ್ತು ಗ್ರಾಮೀಣಾಭಿವೃದ್ಧಿ – ಪಂಚಾಯತ್ ರಾಜ್ ಸೇರಿದಂತೆ ಹಲವಾರು ಇಲಾಖೆಗಳಲ್ಲಿ ಕಮಿಷನ್ ಹಾವಳಿ ವ್ಯಾಪಕವಾಗಿದೆ. ಕಾಮಗಾರಿಗಳನ್ನು ನಿರ್ವಹಿಸಲು ಗುತ್ತಿಗೆದಾರರು ಹೆಚ್ಚಿನ ಬಡ್ಡಿಗೆ ಹಣವನ್ನು ಎರವಲು ಪಡೆಯುತ್ತಿದ್ದಾರೆ. ಅವರು ನಮ್ಮ ಬಾಕಿ ಹಣವನ್ನು ಪಾವತಿಸುತ್ತಾರೆ ಎಂಬ ಆಶಯದೊಂದಿಗೆ ನಾವು ಕಮಿಷನ್ ಪಾವತಿಸಿದ್ದೇವೆ. ಮಧ್ಯವರ್ತಿಗಳು ಗುತ್ತಿಗೆದಾರರ ರಕ್ತವನ್ನು ಹೀರುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.
“ಹಾವೇರಿ ಜಿಲ್ಲೆಯ ಲೋಕೋಪಯೋಗಿ ಇಲಾಖೆಯಲ್ಲಿ 200 ಕೋಟಿ ರೂ.ಗಳ ಬಿಲ್‌ಗಳು ಬಾಕಿ ಉಳಿದಿದೆ. ಆರ್‌ಡಿಪಿಆರ್ ಗುತ್ತಿಗೆದಾರರಿಗೆ 138 ಕೋಟಿ ರೂ.ಗಳು ಬಾಕಿ ಇಟ್ಟಿದ್ದು ಮತ್ತು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಘೋಷಿಸಲಾದ ಕಾಮಗಾರಿಗಳಿಗೆ 400 ಕೋಟಿ ರೂ.ಗಳನ್ನು ಪಾವತಿಸಬೇಕಾಗಿದೆ” ಎಂದು ಅವರು ಹೇಳಿದ್ದಾರೆ.
“ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯುತ್ತಿರುವಾಗ ಬೆಳಗಾವಿಯಲ್ಲಿ ಗುತ್ತಿಗೆದಾರರು ಪ್ರತಿಭಟನೆ ನಡೆಸಿದ್ದರು. ಆಗ ಲೋಕೋಪಯೋಗಿ ಸಚಿವರು ಮಾರ್ಚ್ ಅಂತ್ಯದ ವೇಳೆಗೆ ಹಂತ ಹಂತವಾಗಿ ಬಿಲ್‌ಗಳನ್ನು ತೆರವುಗೊಳಿಸುವುದಾಗಿ ಭರವಸೆ ನೀಡಿದ್ದರು”
“ಅದಾಗ್ಯೂ, ಆರ್‌ಡಿಪಿಆರ್, ಕೆಎನ್‌ಎನ್‌ಎಲ್ ಮತ್ತು ಸಣ್ಣ ನೀರಾವರಿ ಇಲಾಖೆಗಳು ಕೋಟಿಗಟ್ಟಲೆ ಮೊತ್ತದ ಬಿಲ್‌ಗಳನ್ನು ತೆರವುಗೊಳಿಸಿಲ್ಲ. ಸರ್ಕಾರವು ತಮ್ಮ ಬಿಲ್‌ಗಳನ್ನು ತೆರವುಗೊಳಿಸಬೇಕು ಅಥವಾ ಅವರಿಗೆ ದಯಾಮರಣ ನೀಡಬೇಕೆಂದು ಗುತ್ತಿಗೆದಾರರು ಬಯಸುತ್ತಿದ್ದಾರೆ” ಎಂದು ಮಲ್ಲಿಕಾರ್ಜುನ ಹಾವೇರಿ ಹೇಳಿದ್ದಾರೆ. ಬಾಕಿ ಪಾವತಿಸದ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಅಂಬೇಡ್ಕರ್ ಜನ್ಮದಿನ ವಿಶೇಷ: ಅಂಬೇಡ್ಕರ್ ಪರಿಭಾವಿಸಿದ ಭಾರತ V/s ವರ್ತಮಾನ ಭಾರತ
ಅಂಬೇಡ್ಕರ್ ಜನ್ಮದಿನ ವಿಶೇಷ: ಅಂಬೇಡ್ಕರ್ ಪರಿಭಾವಿಸಿದ ಭಾರತ V/s ವರ್ತಮಾನ ಭಾರತ

