ಏಪ್ರಿಲ್ 13 ರಂದು ಸುದ್ದಗುಂಟೆಪಾಳ್ಯದ ಬಿಟಿಎಂ ಲೇಔಟ್‌ನ ವಸತಿ ಪ್ರದೇಶದಲ್ಲಿ ತನ್ನ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ 26 ವರ್ಷದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.
ಸಂತೋಷ್ ಡೇನಿಯಲ್ ಎಂಬ ಆರೀಪಿಯು ಜಾಗ್ವಾರ್ ಶೋ ರೂಂನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ಮೂರು ರಾಜ್ಯಗಳಲ್ಲಿ 700 ಸಿಸಿಟಿವಿ ಕ್ಯಾಮೆರಾಗಳನ್ನು ಅನುಸರಿಸಿ ವ್ಯಾಪಕ ಹುಡುಕಾಟ ನಡೆಸಿದ ನಂತರ ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಆತನನ್ನು ಬಂಧಿಸಲಾಗಿದೆ.
ಸಾಮಾಜಿಕ ಮಾಧ್ಯಮದಲ್ಲಿ ಲೈಂಗಿಕ ದೌರ್ಜನ್ಯದ ವೀಡಿಯೊ ವೈರಲ್ ಆಗಿದ್ದು, ಮಹಿಳೆ ತನ್ನ ಸ್ನೇಹಿತನೊಂದಿಗೆ ರಾತ್ರಿಯಲ್ಲಿ ನಿರ್ಜನ ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಸಂತೋಷ್ ಅವರನ್ನು ಹಿಂಬಾಲಿಸುತ್ತಿದ್ದಾನೆಂದು ಆಕೆಗೆ ತಿಳಿದಿರಲಿಲ್ಲ. ಏನಾಗುತ್ತಿದೆ ಎಂದು ತಿಳಿಯುವ ಮೋದಲೇ ಆತ ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾಗಿದ್ದ. ಆಘಾತಕ್ಕೊಳಗಾದ ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ಕೆಲವು ಸೆಕೆಂಡುಗಳ ಕಾಲ ನಿಂತು, ಏನಾಯಿತು ಎಂದು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಾ, ಆತಂಕದಲ್ಲೇ ಮನೆಗೆ ನಡೆದುಕೊಂಡು ಹೋಗಿದ್ದಾರೆ.
ಈ ಘಟನೆ ಏಪ್ರಿಲ್ 3 ರಂದು ನಡೆದರೂ, ಮೂರು ದಿನಗಳ ನಂತರ ವೀಡಿಯೊ ಕಾಣಿಸಿಕೊಂಡಿದ್ದು, ನಗರದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ತ್ವರಿತವಾಗಿ ಕಾರ್ಯಪ್ರವೃತ್ತರಾಗಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 74, 75 ಮತ್ತು 78 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದರು.
ಮೂರು ರಾಜ್ಯಗಳಲ್ಲಿ ವಾರಗಟ್ಟಲೆ ನಡೆಸಿದ ಶೋಧದ ನಂತರ, ಪೊಲೀಸರು ಕೊನೆಗೂ ಕೇರಳದಲ್ಲಿ ಸಂತೋಷ್‌ನನ್ನು ಬಂಧಿಸಿದರು.
ಹುಬ್ಬಳ್ಳಿ ಬಾಲಕಿ ಅಪಹರಣ, ಕೊಲೆ ಪ್ರಕರಣ | ಆರೋಪಿ ಬಿಹಾರದ ವಲಸೆ ಕಾರ್ಮಿಕ ‘ಎನ್‌ಕೌಂಟರ್’ನಲ್ಲಿ ಹತ


