Homeಮುಖಪುಟಮಕ್ಕಳ ಕಳ್ಳಸಾಗಣೆ ಪ್ರಕರಣ | ಅಲಹಾಬಾದ್ ಹೈಕೋರ್ಟ್, ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರಿಂಕೋರ್ಟ್

ಮಕ್ಕಳ ಕಳ್ಳಸಾಗಣೆ ಪ್ರಕರಣ | ಅಲಹಾಬಾದ್ ಹೈಕೋರ್ಟ್, ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರಿಂಕೋರ್ಟ್

- Advertisement -
- Advertisement -

ಮಕ್ಕಳ ಕಳ್ಳಸಾಗಣೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ನೀಡಿದ್ದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಮಂಗಳವಾರ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ನಿರ್ಲಕ್ಷ್ಯದ ಕ್ರಮಕ್ಕಾಗಿ ಹೈಕೋರ್ಟ್ ಮತ್ತು ಉತ್ತರ ಪ್ರದೇಶ ಸರ್ಕಾರ ಎರಡನ್ನೂ ತರಾಟೆಗೆ ತೆಗೆದುಕೊಂಡಿದೆ. ಮಕ್ಕಳ ಕಳ್ಳಸಾಗಣೆ ಪ್ರಕರಣ

ಮಕ್ಕಳ ಕಳ್ಳಸಾಗಣೆ ಮತ್ತು ಅದರಿಂದ ಉಂಟಾಗುವ ಅಪರಾಧಗಳನ್ನು ತಡೆಗಟ್ಟಲು ಎಲ್ಲಾ ರಾಜ್ಯಗಳಿಗೆ ಮಾರ್ಗಸೂಚಿಗಳನ್ನು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ನೀಡಿದ್ದು, ನಿರ್ದೇಶನಗಳನ್ನು ಜಾರಿಗೊಳಿಸುವಲ್ಲಿ ಯಾವುದೇ ವಿಫತೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು ಮತ್ತು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುತ್ತದೆ ಎಂದು ಹೇಳಿದೆ.

ಉತ್ತರ ಪ್ರದೇಶದ ಮಕ್ಕಳ ಕಳ್ಳಸಾಗಣೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಿಗೆ ಅಲಹಾಬಾದ್ ಹೈಕೋರ್ಟ್ ನೀಡಿದ ನಿರೀಕ್ಷಣಾ ಜಾಮೀನಿನ ವಿರುದ್ಧ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಮಗುವಿನ ತಾಯಿ ಸಲ್ಲಿಸಿದ ಅರ್ಜಿಯನ್ನು ಆಲಿಸಿದ ನಂತರ ಸುಪ್ರೀಂ ಕೋರ್ಟ್ ಈ ನಿರ್ದೇಶನಗಳನ್ನು ನೀಡಿದೆ.

ಕದ್ದ ಮಗುವನ್ನು – ಆರೋಪಿಯು – ಗಂಡು ಮಗುವನ್ನು ಹೊಂದಲು ಬಯಸುವ ದಂಪತಿಗಳಿಗೆ ನೀಡಿದ ಪ್ರಕರಣ ಇದಾಗಿದೆ.

“ನಾವು ಎಲ್ಲರಿಗೂ, ವಿಶೇಷವಾಗಿ ದೇಶಾದ್ಯಂತದ ಪೋಷಕರಿಗೆ ಒಂದು ಸಂದೇಶವನ್ನು ನೀಡಲು ಬಯಸುತ್ತೇವೆ. ಅವರು ತಮ್ಮ ಮಕ್ಕಳ ಬಗ್ಗೆ ಅತ್ಯಂತ ಜಾಗರೂಕರಾಗಿರಬೇಕು. ಹೆತ್ತವರ ಕಡೆಯಿಂದ ಅಗುವ ಅಲ್ಪ ನಿರ್ಲಕ್ಷ್ಯವೂ ಅತ್ಯಂತ ದುಬಾರಿಯಾಗಬಹುದು.

ಯಾವುದೇ ಪೋಷಕರು ತಮ್ಮ ಮಗು ಸತ್ತಾಗ ಎದುರಿಸಬಹುದಾದ ನೋವು ಮತ್ತು ಸಂಕಟವು ಕಳ್ಳಸಾಗಣೆಯಲ್ಲಿ ತೊಡಗಿರುವ ಅಂತಹ ಗ್ಯಾಂಗ್‌ಗಳಿಗೆ ಕೈಗೆ ಅವರ ಮಕ್ಕಳನ್ನು ಸಿಕ್ಕಾಗ ಅವರು ಅನುಭವಿಸಬಹುದಾದ ನೋವು ಮತ್ತು ಸಂಕಟಕ್ಕಿಂತ ಭಿನ್ನವಾಗಿರುತ್ತದೆ” ಎಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಹೇಳಿದೆ.

ಒಂದು ಮಗು ಸತ್ತಾಗ, ಪೋಷಕರು ಕಾಲಕ್ರಮೇಣ ಸರ್ವಶಕ್ತನ ಇಚ್ಛೆಗೆ ಬಿಟ್ಟಿದ್ದು ಬಿಡಬಹುದು, ಆದರೆ ಮಗು ಕಳೆದುಹೋದಾಗ ಮತ್ತು ಪತ್ತೆಯಾಗದಿದ್ದಾಗ, ಅವರು ತಮ್ಮ ಜೀವನದುದ್ದಕ್ಕೂ ನೋವು ಮತ್ತು ಸಂಕಟವನ್ನು ಅನುಭವಿಸಬೇಕಾಗುತ್ತದೆ. ಅದು ಸಾವಿಗಿಂತ ಕೆಟ್ಟದಾಗಿದೆ. ಆದ್ದರಿಂದ, ಎಲ್ಲರೂ ಬಹಳ ಎಚ್ಚರಿಕೆಯಿಂದ ಮತ್ತು ಜಾಗರೂಕರಾಗಿರಲು ನಾವು ವಿನಮ್ರವಾಗಿ ಒತ್ತಾಯಿಸುತ್ತೇವೆ ಎಂದು ಸುಪ್ರಿಂಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಜೆ ಬಿ ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್ ಮಹಾದೇವನ್ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ಮಂಗಳವಾರ ತನ್ನ ಆದೇಶದಲ್ಲಿ, ಮಕ್ಕಳ ಕಳ್ಳಸಾಗಣೆ ಪ್ರಕರಣಗಳ ವಿಚಾರಣೆಯನ್ನು ಆರು ತಿಂಗಳೊಳಗೆ ಪೂರ್ಣಗೊಳಿಸಲು ಕೆಳ ನ್ಯಾಯಾಲಯಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡುವಂತೆ ಎಲ್ಲಾ ರಾಜ್ಯ ಹೈಕೋರ್ಟ್‌ಗಳಿಗೆ ನಿರ್ದೇಶನ ನೀಡಿದೆ.

ಯಾವುದೇ ನವಜಾತ ಶಿಶುವನ್ನು ಯಾವುದೇ ಆಸ್ಪತ್ರೆಯಿಂದ ಕಳ್ಳಸಾಗಣೆ ಮಾಡಿದರೆ, ಕಾನೂನಿನ ಪ್ರಕಾರ ಇತರ ಕ್ರಮಗಳ ಜೊತೆಗೆ, ಆಸ್ಪತ್ರೆಯ ವಿರುದ್ಧದ ತಕ್ಷಣದ ಕ್ರಮವೆಂದರೆ ಅದರ ಕಾರ್ಯಾಚರಣೆಯ ಪರವಾನಗಿಯನ್ನು ಅಮಾನತುಗೊಳಿಸಬೇಕು ಎಂದು ನ್ಯಾಯಾಲಯವು ಹೇಳಿದೆ.

ಯಾವುದೇ ಮಹಿಳೆ ಆಸ್ಪತ್ರೆಯಲ್ಲಿ ತನ್ನ ಮಗುವನ್ನು ಹೆರಿಗೆ ಮಾಡಲು ಬಂದಾಗ, ನವಜಾತ ಶಿಶುವನ್ನು ಎಲ್ಲಾ ರೀತಿಯಲ್ಲೂ ರಕ್ಷಿಸುವುದು ಆಸ್ಪತ್ರೆ ಆಡಳಿತ ಮಂಡಳಿಯ ಜವಾಬ್ದಾರಿಯಾಗಿದೆ ಎಂದು ಕೋರ್ಟ್ ಹೇಳಿದೆ.

ಮಂಗಳವಾರ ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂಕೋರ್ಟ್ ಅಲಹಾಬಾದ್ ಹೈಕೋರ್ಟ್ ಮತ್ತು ಉತ್ತರ ಪ್ರದೇಶ ಸರ್ಕಾರವನ್ನು ಈ ಪ್ರಕರಣವನ್ನು ನಿಭಾಯಿಸಿದ ರೀತಿಗೆ ತರಾಟೆಗೆ ತೆಗೆದುಕೊಂಡಿದೆ.

“ಜಾಮೀನು ಅರ್ಜಿಗಳನ್ನು ಹೈಕೋರ್ಟ್ ನಿರ್ದಯವಾಗಿ ನಿರ್ವಹಿಸಿದ್ದು, ಇದರಿಂದಾಗಿ ಅನೇಕ ಆರೋಪಿಗಳು ಪರಾರಿಯಾಗಿದ್ದಾರೆ. ಈ ಆರೋಪಿಗಳು ಸಮಾಜಕ್ಕೆ ಗಂಭೀರ ಬೆದರಿಕೆ ಒಡ್ಡಿದ್ದಾರೆ” ಎಂದು ಪೀಠವು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಉತ್ತರ ಪ್ರದೇಶದ ಸರ್ಕಾರದ ಗಂಭೀರತೆಯನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್, “ಈ ಪ್ರಕರಣವನ್ನು ಉತ್ತರ ಪ್ರದೇಶ ರಾಜ್ಯವು ಹೇಗೆ ನಿರ್ವಹಿಸಿದೆ ಮತ್ತು ಏಕೆ ಮೇಲ್ಮನವಿ ಸಲ್ಲಿಸಲಾಗಿಲ್ಲ ಎಂದು ಕೇಳಿದ್ದು, ಸರ್ಕಾರದ ನಡೆಯ ಬಗ್ಗೆ ನಾವು ಸಂಪೂರ್ಣವಾಗಿ ನಿರಾಶೆಗೊಂಡಿದ್ದೇವೆ ಎಂದು ಹೇಳಿದೆ.

ಪ್ರಕರಣದ ಕೆಲವು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿದ್ದಕ್ಕಾಗಿ ಅಲಹಾಬಾದ್ ಹೈಕೋರ್ಟ್ ಅನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಮಕ್ಕಳ ಕಳ್ಳಸಾಗಣೆ ಪ್ರಕರಣ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ‘ಆರ್ಥಿಕವಾಗಿ ಸ್ಥಿರವಾಗಿಲ್ಲದವರನ್ನು ಉನ್ನತೀಕರಿಸುವುದೇ ನಮ್ಮ ಗುರಿ..’; ಮೋದಿ ಟೀಕೆಗೆ ಡಿಕೆಶಿ ತಿರುಗೇಟು

‘ಆರ್ಥಿಕವಾಗಿ ಸ್ಥಿರವಾಗಿಲ್ಲದವರನ್ನು ಉನ್ನತೀಕರಿಸುವುದೇ ನಮ್ಮ ಗುರಿ..’; ಮೋದಿ ಟೀಕೆಗೆ ಡಿಕೆಶಿ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...