Homeಮುಖಪುಟಇಂಗ್ಲಿಷ್ ಸೇರಿದಂತೆ ಎನ್‌ಸಿಇಆರ್‌ಟಿ ಪಠ್ಯ ಪುಸ್ತಕಗಳಿಗೆ ಹಿಂದಿ ಹೆಸರು: ಕೇರಳದಿಂದ ತೀವ್ರ ವಿರೋಧ

ಇಂಗ್ಲಿಷ್ ಸೇರಿದಂತೆ ಎನ್‌ಸಿಇಆರ್‌ಟಿ ಪಠ್ಯ ಪುಸ್ತಕಗಳಿಗೆ ಹಿಂದಿ ಹೆಸರು: ಕೇರಳದಿಂದ ತೀವ್ರ ವಿರೋಧ

- Advertisement -
- Advertisement -

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಆರ್‌ಟಿ) ತನ್ನ ಹಲವು ಹೊಸ ಇಂಗ್ಲಿಷ್ ಮಾಧ್ಯಮ ಪಠ್ಯಪುಸ್ತಕಗಳಿಗೆ ಹಿಂದಿ ಶೀರ್ಷಿಕೆಗಳನ್ನು ನೀಡಿದೆ. ಅವುಗಳಲ್ಲಿ ಇಂಗ್ಲಿಷ್ ಭಾಷೆಯನ್ನು ಕಲಿಸಲು ಉದ್ದೇಶಿಸಲಾದ ಪುಸ್ತಕಗಳು ಸೇರಿವೆ ಎಂದು ಇಂಡಿಯಾ ಟುಡೇ ಸೋಮವಾರ ವರದಿ ಮಾಡಿದೆ.

ಎನ್‌ಸಿಆರ್‌ಟಿ ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, ಶಾಲಾ ಶಿಕ್ಷಣವನ್ನು ಸುಧಾರಿಸುವ ಕಾರ್ಯಕ್ರಮಗಳು ಮತ್ತು ನೀತಿಗಳ ಕುರಿತು ಸರ್ಕಾರಕ್ಕೆ ಸಲಹೆಗಳನ್ನು ನೀಡುತ್ತದೆ.

ಪಠ್ಯಪುಸ್ತಕಗಳ ಶೀರ್ಷಿಕೆಗಳನ್ನು ಬದಲಾಯಿಸುವ ಮಂಡಳಿಯ ನಿರ್ಧಾರವನ್ನು ಕೇರಳದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಟೀಕಿಸಿದ್ದಾರೆ. ಈ ನಿರ್ಧಾರವು ಅರ್ಥಹೀನ ಎಂದು  ಅವರು ಹೇಳಿದ್ದು, ಪುನರ್‌ ಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಹಿಂದೆ 6ನೇ ತರಗತಿಯ ಇಂಗ್ಲಿಷ್ ಪಠ್ಯಪುಸ್ತಕಕ್ಕೆ ‘ಹನಿಸಕಲ್’ ಎಂಬ ಹೆಸರಿತ್ತು. ಅದನ್ನು ಈಗ ‘ಪೂರ್ವಿ’ ಎಂದು ಬದಲಾಯಿಸಲಾಗಿದೆ. ಇದರ ಹಿಂದಿ ಅರ್ಥ ‘ಪೂರ್ವ’ ಎಂದಾಗಿದೆ ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಒಂದು ರಾಗದ ಹೆಸರೂ ಹೌದು ಎಂದು ವರದಿ ಹೇಳಿದೆ.

ಮುಂದುವರಿದು, 1 ಮತ್ತು 2 ನೇ ತರಗತಿಯ ಇಂಗ್ಲಿಷ್ ಪಠ್ಯಪುಸ್ತಕಗಳಿಗೆ ಈಗ ‘ಮೃದಂಗ್’ ಎಂದು ಹೆಸರಿಸಲಾಗಿದೆ ಮತ್ತು 3 ನೇ ತರಗತಿಯ ಪಠ್ಯಪುಸ್ತಕದ ಹೆಸರನ್ನು ‘ಸಂತೂರ್’ ಎಂದು ಬದಲಾಯಿಸಲಾಗಿದೆ. ಮೃದಂಗ್ ಮತ್ತು ಸಂತೂರ್ ಭಾರತೀಯ ಸಂಗೀತ ವಾದ್ಯಗಳ ಹೆಸರುಗಳಾಗಿವೆ.

ಎನ್‌ಸಿಇಆರ್‌ಟಿ ಈ ಹಿಂದೆ ವಿವಿಧ ಭಾಷೆಗಳಲ್ಲಿ ಪಠ್ಯಪುಸ್ತಕಗಳಿಗೆ ವಿಭಿನ್ನ ಶೀರ್ಷಿಕೆಗಳನ್ನು ಬಳಸಿತ್ತು ಎಂದು ಇಂಡಿಯಾ ಟುಡೇ ವರದಿ ಹೇಳಿದೆ. 6 ನೇ ತರಗತಿಯ ಗಣಿತ ಪಠ್ಯಪುಸ್ತಕವನ್ನು ಇಂಗ್ಲಿಷ್‌ನಲ್ಲಿ ಮ್ಯಾಥ್‌ಮ್ಯಾಟಿಕ್ಸ್, ಹಿಂದಿಯಲ್ಲಿ ಗಣಿತ್ ಮತ್ತು ಉರ್ದು ಭಾಷೆಯಲ್ಲಿ ರಿಯಾಜಿ ಎಂದು ಕರೆಯಲಾಗಿತ್ತು.

ಹೊಸ ಬದಲಾವಣೆಯ ಪ್ರಕಾರ, ಗಣಿತ ಪಠ್ಯಪುಸ್ತಕದ ಇಂಗ್ಲಿಷ್ ಮತ್ತು ಹಿಂದಿ ಆವೃತ್ತಿಗಳಿಗೆ ಗಣಿತ್ ಪ್ರಕಾಶ್ ಎಂದು ಹೆಸರಿಸಲಾಗಿದೆ. ಉರ್ದು ಆವೃತ್ತಿಯ ಶೀರ್ಷಿಕೆ ಏನು ಎಂಬುದು ಸ್ಪಷ್ಟವಾಗಿಲ್ಲ.

ಕೇರಳದ ವಿರೋಧ

ಪಠ್ಯಪುಸ್ತಕಗಳಿಗೆ ಹಿಂದಿ ಮರುನಾಮಕರಣ ಮಾಡುವ ಎನ್‌ಸಿಇಆರ್‌ಟಿಯ ನಿರ್ಧಾರವು ‘ಒಕ್ಕೂಟ ವ್ಯವಸ್ಥೆಯ ತತ್ವಗಳು ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ’ ವಿರುದ್ಧವಾಗಿದೆ ಎಂದು ಸೋಮವಾರ ಕೇರಳದ ಶಿಕ್ಷಣ ಸಚಿವ ಶಿವನ್‌ಕುಟ್ಟಿ ಹೇಳಿದ್ದಾರೆ.

“ಇದು ಅರ್ಥಹೀನ ಮಾತ್ರವಲ್ಲ, ನಮ್ಮ ದೇಶದ ಭಾಷಾ ವೈವಿಧ್ಯತೆಯನ್ನು ಹಾಳುಮಾಡುವ ರೀತಿಯಲ್ಲಿ ಒಬ್ಬರ ಸಾಂಸ್ಕೃತಿಕ ಮೌಲ್ಯಗಳನ್ನು ಹೇರುವ ಕೃತ್ಯವಾಗಿದೆ” ಎಂದಿದ್ದಾರೆ.

ಭಾಷಾ ವೈವಿಧ್ಯತೆಯನ್ನು ಗೌರವಿಸಲು ಮತ್ತು ಮಕ್ಕಳ ಮನಸ್ಸಿನಲ್ಲಿ ಸೂಕ್ಷ್ಮ ಸಂವೇದನೆಯನ್ನು ಬೆಳೆಸಲು ದಶಕಗಳಿಂದ ಬಳಸಲಾಗುತ್ತಿದ್ದ ಇಂಗ್ಲಿಷ್ ಶೀರ್ಷಿಕೆಗಳನ್ನು ಬದಲಾಯಿಸುವುದು ಸಂಪೂರ್ಣವಾಗಿ ತಪ್ಪು ಎಂದು ಹೇಳಿದ್ದಾರೆ.

“ಹಿಂದಿಯೇತರ ಇತರ ರಾಜ್ಯಗಳಂತೆ ಕೇರಳ ಕೂಡ ಭಾಷಾ ವೈವಿಧ್ಯತೆಯನ್ನು ರಕ್ಷಿಸಲು ಮತ್ತು ಪ್ರಾದೇಶಿಕ ಸಾಂಸ್ಕೃತಿಕ ಸ್ವಾತಂತ್ರ್ಯಕ್ಕೆ ಆದ್ಯತೆ ನೀಡಲು ಬದ್ಧವಾಗಿದೆ. ಪಠ್ಯಪುಸ್ತಕಗಳ ಶೀರ್ಷಿಕೆಗಳು ಕೇವಲ ಹೆಸರುಗಳಲ್ಲ; ಅವು ಮಕ್ಕಳ ಗ್ರಹಿಕೆ ಮತ್ತು ಕಲ್ಪನೆಯನ್ನು ರೂಪಿಸುತ್ತವೆ. ಇಂಗ್ಲಿಷ್ ಮಾಧ್ಯಮದ ವಿದ್ಯಾರ್ಥಿಗಳು ಇಂಗ್ಲಿಷ್ ಶೀರ್ಷಿಕೆಗಳಿಗೆ ಅರ್ಹರು. ಶಿಕ್ಷಣವು ಹೇರಿಕೆಯ ಸಾಧನವಾಗಿರಬಾರದು, ಬದಲಾಗಿ ಸಬಲೀಕರಣ ಮತ್ತು ಒಮ್ಮತದ ಸಾಧನವಾಗಿರಬೇಕು” ಎಂದಿದ್ದಾರೆ.

ಹಿಂದಿ ಭಾಷೆಯ ಹೇರಿಕೆಯನ್ನು ವಿರೋಧಿಸಲು ರಾಜ್ಯ ಸರ್ಕಾರಗಳು ಒಗ್ಗೂಡಬೇಕೆಂದು ಅವರು ಕರೆ ನೀಡಿದ್ದಾರೆ.

2020ರ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ಎನ್‌ಸಿಇಆರ್‌ಟಿ 2023ರಲ್ಲಿ ಹೊಸ ಪಠ್ಯಪುಸ್ತಕಗಳನ್ನು ಪರಿಚಯಿಸಿತು. ಮೊದಲು 1 ಮತ್ತು 2 ನೇ ತರಗತಿಯ ಪಠ್ಯಪುಸ್ತಕಗಳನ್ನು ಬಿಡುಗಡೆ ಮಾಡಿತ್ತು. ನಂತರ 2024 ರಲ್ಲಿ 3 ಮತ್ತು 6 ನೇ ತರಗತಿಯ ಪಠ್ಯಪುಸ್ತಕಗಳನ್ನು ಬಿಡುಗಡೆ ಮಾಡಿತ್ತು. 4, 5, 7 ಮತ್ತು 8 ನೇ ತರಗತಿಗಳಿಗೆ ಹೊಸ ಪಠ್ಯಪುಸ್ತಕಗಳನ್ನು ಈಗ ಬಿಡುಗಡೆ ಮಾಡಲಾಗುತ್ತಿದೆ.

ಉತ್ತರಪ್ರದೇಶ: ಮುಸ್ಲಿಂ ಯುವತಿಯ ಬುರ್ಖಾ ಬಿಚ್ಚಿ ಥಳಿತ; ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...