ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯ ಕಾರ್ಯತಂತ್ರದ ಕುರಿತು ಚರ್ಚಿಸಲು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಡುವೆ ಮಂಗಳವಾರ ದೆಹಲಿಯಲ್ಲಿ ಮಹತ್ವದ ಸಭೆ ನಡೆಯಿತು. ಬಿಹಾರ ಚುನಾವಣಾ ಕಾರ್ಯತಂತ್ರ
ಕಾಂಗ್ರೆಸ್ ಮತ್ತು ಆರ್‌ಜೆಡಿ ಎರಡೂ ಪಕ್ಷಗಳ ನಾಯಕರು ಸೀಟು ಹಂಚಿಕೆ ಸೂತ್ರ ಸೇರಿದಂತೆ ವಿವಿಧ ಚುನಾವಣಾ ಪೂರ್ವ ವಿಷಯಗಳ ಕುರಿತು ಗಂಟೆಗಟ್ಟಲೆ ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ತೇಜಸ್ವಿ ಯಾದವ್, ಚರ್ಚೆಗಳು ಸಕಾರಾತ್ಮಕವಾಗಿ ನಡೆದಿವೆ ಮತ್ತು ಏಪ್ರಿಲ್ 17 ರಂದು ಪಾಟ್ನಾದಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ನಡೆಯುವ ಮುಂದಿನ ಸಭೆಯಲ್ಲಿ ಹೆಚ್ಚಿನ ವಿವರಗಳನ್ನು ತಿಳಿಸಲಾಗುವುದು ಎಂದು ಹೇಳಿದ್ದಾರೆ.
ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಎನ್‌ಡಿಎ ಸರ್ಕಾರವನ್ನು ಟೀಕಿಸಿದ ತೇಜಸ್ವಿ ಯಾದವ್, ರಾಜ್ಯದಲ್ಲಿ ಸಿಎಂ ನಿತೀಶ್ ಕುಮಾರ್ ಅವರನ್ನು ಬಿಜೆಪಿ ಹೈಜಾಕ್ ಮಾಡಿದೆ ಮತ್ತು ಎನ್‌ಡಿಎ ಆಳ್ವಿಕೆಯಲ್ಲಿ ಯಾವುದೇ ಅರ್ಥಪೂರ್ಣ ಬೆಳವಣಿಗೆ ನಡೆದಿಲ್ಲ ಎಂದು ಹೇಳಿದ್ದಾರೆ.
ಆರ್‌ಜೆಡಿ, ಕಾಂಗ್ರೆಸ್ ಮತ್ತು ಎಡಪಕ್ಷಗಳು ಸೇರಿದಂತೆ ಇತರ ಪಕ್ಷಗಳನ್ನು ಒಳಗೊಂಡ ಮಹಾಘಟಬಂಧನ್ ಮೈತ್ರಿಯು ಬಿಹಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಸರ್ಕಾರವನ್ನು ಸೋಲಿಸಲು ಒಗ್ಗಟ್ಟಿನಿಂದ ಸ್ಪರ್ಧಿಸಲಿದೆ ಎಂದು ಅವರು ಹೇಳಿದ್ದಾರೆ.
ಈ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ “ವಿಷಯಾಧಾರಿತ” ವೇದಿಕೆಯಲ್ಲಿ ಸ್ಪರ್ಧಿಸಲಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಮತ್ತು ಅಭಿವೃದ್ಧಿ ಸೇರಿದಂತೆ ಎಲ್ಲಾ ರಂಗಗಳಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ.
ಮಹಾಘಟಬಂಧನ್ ಮೈತ್ರಿಯ ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ತೇಜಸ್ವಿ, “ಎಲ್ಲವನ್ನೂ ಸೂಕ್ತ ಸಮಯದಲ್ಲಿ ಮತ್ತು ಪರಸ್ಪರ ನಿರ್ಧರಿಸಲಾಗುತ್ತದೆ. ಅಭಿವೃದ್ಧಿ ಮಾಡುವಲ್ಲಿ ಶೋಚನೀಯವಾಗಿ ವಿಫಲವಾಗಿರುವ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಕಿತ್ತೊಗೆಯಲು ನಾವು ಒಗ್ಗಟ್ಟಾಗಿದ್ದೇವೆ. ನಾವು ರಾಜ್ಯವನ್ನು ಸಾಮಾನ್ಯ ಅಭಿವೃದ್ಧಿಯತ್ತ ಕೊಂಡೊಯ್ಯುತ್ತೇವೆ” ಎಂದು ಅವರು ಪ್ರತಿಪಾದಿಸಿದ್ದಾರೆ.
ಕಾಂಗ್ರೆಸ್ ನಾಯಕರೊಂದಿಗಿನ ಸಭೆ ಒಂದು ಗಂಟೆ ಕಾಲ ನಡೆಯಿತು. ಸಭೆಯಲ್ಲಿ ಬಿಹಾರದ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಕುಮಾರ್, ಮನೋಜ್ ಕುಮಾರ್ ಝಾ (ಆರ್‌ಜೆಡಿ ಸಂಸದ, ರಾಜ್ಯಸಭೆ), ಸಂಜಯ್ ಯಾದವ್ (ಆರ್‌ಜೆಡಿ ಸಂಸದ, ರಾಜ್ಯಸಭೆ) ಸೇರಿದಂತೆ ಇತರ ಆರ್‌ಜೆಡಿ ನಾಯಕರು ಭಾಗವಹಿಸಿದ್ದರು. ಬಿಹಾರ ಚುನಾವಣಾ ಕಾರ್ಯತಂತ್ರ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಮಕ್ಕಳ ಕಳ್ಳಸಾಗಣೆ ಪ್ರಕರಣ | ಅಲಹಾಬಾದ್ ಹೈಕೋರ್ಟ್, ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರಿಂಕೋರ್ಟ್
ಮಕ್ಕಳ ಕಳ್ಳಸಾಗಣೆ ಪ್ರಕರಣ | ಅಲಹಾಬಾದ್ ಹೈಕೋರ್ಟ್, ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರಿಂಕೋರ್ಟ್

