Homeಮುಖಪುಟ'ಹಿಂದೂ ಧಾರ್ಮಿಕ ಟ್ರಸ್ಟ್‌ಗಳಲ್ಲಿ ಮುಸ್ಲಿಮರಿಗೂ ಅವಕಾಶ ನೀಡುತ್ತೀರಾ?': ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

‘ಹಿಂದೂ ಧಾರ್ಮಿಕ ಟ್ರಸ್ಟ್‌ಗಳಲ್ಲಿ ಮುಸ್ಲಿಮರಿಗೂ ಅವಕಾಶ ನೀಡುತ್ತೀರಾ?’: ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ವಕ್ಫ್ (ತಿದ್ದುಪಡಿ) ಕಾಯ್ದೆ-2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ, “ಹಿಂದೂ ಧಾರ್ಮಿಕ ಟ್ರಸ್ಟ್‌ಗಳಲ್ಲಿ ಮುಸ್ಲಿಮರಿಗೂ ಅವಕಾಶ ನೀಡುತ್ತೀರಾ?” ಎಂದು ಸುಪ್ರೀಂ ಕೋರ್ಟ್ ಬುಧವಾರ (ಏ.16) ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ ಎಂದು ವರದಿಗಳು ಹೇಳಿವೆ.

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ ವಿಶ್ವನಾಥನ್ ಅವರಿದ್ದ ಪೀಠವು, ‘ಬಳಕೆದಾರರಿಂದ ವಕ್ಫ್’ (Waqf by User) ಅನ್ನು ನಿರಾಕರಿಸಲು ಹೇಗೆ ಸಾಧ್ಯ? ಏಕೆಂದರೆ, ಅನೇಕರು ವಕ್ಫ್‌ ಆಸ್ತಿಗಳನ್ನು ನೋಂದಾಯಿಸಲು ಅಗತ್ಯವಾದ ದಾಖಲೆಗಳನ್ನು ಹೊಂದಿರುವುದಿಲ್ಲ ಎಂದು ಕೇಂದ್ರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಪ್ರಶ್ನಿಸಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

‘ಬಳಕೆದಾರರಿಂದ ವಕ್ಫ್’ (Waqf By User) ಎಂದರೆ, ಆಸ್ತಿ ಮಾಲೀಕರು ತಮ್ಮ ಆಸ್ತಿಯನ್ನು ವಕ್ಫ್ ಮಾಡಿರುವ ಬಗ್ಗೆ ಔಪಚಾರಿಕ, ಲಿಖಿತ ದಾಖಲೆಗಳು ಇಲ್ಲದಿದ್ದರೂ ಕೂಡ, ಯಾವುದೇ ಅಡೆತಡೆಯಿಲ್ಲದೆ ದೀರ್ಘ ಸಮಯದಿಂದ ಧಾರ್ಮಿಕ, ಸಾಮುದಾಯಿಕ ಉದ್ದೇಶಗಳಿಗೆ ಬಳಸುತ್ತಿರುವ ಆಧಾರದ ಮೇಲೆ ಆಸ್ತಿಯನ್ನು ಧಾರ್ಮಿಕ ಅಥವಾ ದತ್ತಿ ದತ್ತಿ (ವಕ್ಫ್) ಎಂದು ಗುರುತಿಸಿಕೊಂಡು ಬರಲಾಗುತ್ತಿದೆ.

“ನೀವು ಇಂತಹ ವಕ್ಫ್‌ ಆಸ್ತಿಗಳನ್ನು ಬಳಕೆದಾರರಿಂದ ಹೇಗೆ ನೋಂದಾಯಿಸುತ್ತೀರಿ? ಅವರ ಬಳಿ ಯಾವ ದಾಖಲೆಗಳಿವೆ? ಹೌದು, ಕೆಲವು ದುರುಪಯೋಗಳು ನಡೆಯುತ್ತಿವೆ. ಆದರೆ, ನಿಜವಾದವುಗಳೂ ಇವೆ. ನಾನು ಖಾಸಗಿ ಮಂಡಳಿಯ ತೀರ್ಪುಗಳನ್ನು ಕೂಡ ನೋಡಿದ್ದೇನೆ. ಬಳಕೆದಾರರಿಂದ ವಕ್ಫ್ ಅನ್ನು ಗುರುತಿಸಲಾಗಿದೆ. ನೀವು ಅದನ್ನು ರದ್ದುಗೊಳಿಸಿದರೆ ಸಮಸ್ಯೆಯಾಗುತ್ತದೆ. ಶಾಸಕಾಂಗವು ಆದೇಶ ಅಥವಾ ತೀರ್ಪನ್ನು ಅನೂರ್ಜಿತವೆಂದು ಘೋಷಿಸಲು ಸಾಧ್ಯವಿಲ್ಲ. ನೀವು ಆಧಾರವನ್ನು ಮಾತ್ರ ತೆಗೆದುಕೊಳ್ಳಬಹುದು” ಎಂದು ಪೀಠ ಹೇಳಿದೆ.

ಈ ವೇಳೆ, ವಕ್ಫ್ ಕಾಯ್ದೆಯಿಂದ ನಿಯಂತ್ರಿಸಲ್ಪಡಲು ಇಷ್ಟಪಡದ ಮುಸ್ಲಿಮರ ದೊಡ್ಡ ವರ್ಗವಿದೆ ಎಂದು ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ ತುಷಾರ್ ಮೆಹ್ತಾ ಅವರಿಗೆ ಮರು ಪ್ರಶ್ನೆ ಹಾಕಿದ ಪೀಠ, “ಇನ್ನು ಮುಂದೆ ಮುಸ್ಲಿಮರು ಹಿಂದೂ ದತ್ತಿ ಮಂಡಳಿಗಳ ಭಾಗವಾಗಲು ಅವಕಾಶ ನೀಡುತ್ತೀರಿ ಎಂದು ನೀವು ಹೇಳುತ್ತಿದ್ದೀರಾ? ಅದನ್ನು ಬಹಿರಂಗವಾಗಿ ಹೇಳಿ” ಎಂದಿದೆ.

ಸಂಸತ್ತಿನ ಉಭಯ ಸದನಗಳಲ್ಲಿ ವಕ್ಫ್‌ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸುವ ಮೊದಲು ಜಂಟಿ ಸಂಸದೀಯ ಸಮಿತಿಯು (ಜೆಪಿಸಿ) 38 ಸಭೆಗಳನ್ನು ನಡೆಸಿವೆ. ಬರೋಬ್ಬರಿ 98.2 ಲಕ್ಷ ಜ್ಞಾಪಕ ಪತ್ರಗಳನ್ನು ಪರಿಶೀಲಿಸಿದೆ ಎಂದು ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ವೇಳೆ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ ವಿಶ್ವನಾಥನ್ ಅವರ ಪೀಠವು ಎರಡು ಆಯಾಮದ ಪ್ರಶ್ನೆಗಳನ್ನು ಉಭಯ ಪಕ್ಷಗಳ ಮುಂದಿಟ್ಟಿದೆ.

“ನಾವು ಅರ್ಜಿಗಳನ್ನು ಪರಿಗಣಿಸಬೇಕೆ ಅಥವಾ ಹೈಕೋರ್ಟ್‌ಗೆ ವರ್ಗಾಯಿಸಬೇಕೆ? ಎರಡನೆಯದಾಗಿ ನೀವು ನಿಜವಾಗಿಯೂ ಏನು ಆಗಬೇಕೆಂದು ಬಯಸುತ್ತಿದ್ದೀರಿ? ಏನೆಂದು ವಾದಿಸಲು ಯತ್ನಿಸುತ್ತಿದ್ದೀರಿ ಎಂಬುವುದನ್ನು ಸಂಕ್ಷಿಪ್ತವಾಗಿ ಸೂಚಿಸಿ?” ಎಂದು ಸಿಜೆಐ ಖನ್ನಾ ಕೇಳಿದ್ದಾರೆ.

ಎರಡನೇ ಅಂಶವು ನಮಗೆ ಮೊದಲ ಅಂಶದ ಬಗ್ಗೆ  ನಿರ್ಧಾರ ಕೈಗೊಳ್ಳಲು ಒಂದು ಹಂತದಲ್ಲಿ ಅನುಕೂಲಕರವಾಗಿರುತ್ತದೆ ಎಂದೂ ಅವರು ಹೇಳಿದ್ದಾರೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಉಲ್ಲೇಖಿಸಿ, ಮುಸ್ಲಿಮರು ಮಾತ್ರ ವಕ್ಫ್ ಮಾಡಬಹುದು ಎಂದು ಹೇಳುವ ನಿಬಂಧನೆಯನ್ನು ಪ್ರಶ್ನಿಸುತ್ತಿರುವುದಾಗಿ ಪೀಠಕ್ಕೆ ತಿಳಿಸಿದ್ದಾರೆ.

“ನಾನು ಮುಸ್ಲಿಂ ಅಥವಾ ಇಲ್ಲವೇ ಎಂಬುದನ್ನು ಮತ್ತು ಮುಸ್ಲಿಂ ಆಗಿರುವ ಮೂಲಕ ವಕ್ಫ್‌ ಮಾಡಲು ಅರ್ಹ ಎಂಬುವುದನ್ನು ಸರ್ಕಾರ ಹೇಗೆ ನಿರ್ಧರಿಸಲು ಸಾಧ್ಯ”? ಎಂದು ಸಿಬಲ್ ಪ್ರಶ್ನಿಸಿದ್ದಾರೆ.

“ಐದು ವರ್ಷಗಳಿಂದ ಇಸ್ಲಾಂ ಧರ್ಮವನ್ನು ಪಾಲಿಸುತ್ತಿರುವವರು ಮಾತ್ರ ವಕ್ಫ್ ಮಾಡಬಹುದು ಎಂದು ಸರ್ಕಾರ ಹೇಗೆ ಹೇಳಲು ಸಾಧ್ಯ? ಎಂದು ಕೇಳಿದ್ದಾರೆ.

ಕೆಲವು ಅರ್ಜಿದಾರರನ್ನು ಪ್ರತಿನಿಧಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, “ವಕ್ಫ್ ಕಾಯ್ದೆಯು ಇಡೀ ದೇಶದ ಮೇಲೆ ಪರಿಣಾಮಗಳನ್ನು ಬೀರುತ್ತದೆ. ಹಾಗಾಗಿ, ಅರ್ಜಿಗಳನ್ನು ಹೈಕೋರ್ಟ್‌ಗೆ ವರ್ಗಾಯಿಸಬಾರದು ಎಂದು ಮನವಿ ಮಾಡಿದ್ದಾರೆ.

ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ ಹಿರಿಯ ವಕೀಲ ಹುಝೇಫಾ ಅಹ್ಮದಿ, ‘ಬಳಕೆದಾರರಿಂದ ವಕ್ಫ್’ (Waqf By User) ಪಡೆಯುವುದು ಇಸ್ಲಾಂನ ಸ್ಥಾಪಿತ ಪದ್ಧತಿಯಾಗಿದ್ದು, ಅದನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ನ್ಯಾಯಾಲಯ ಇಂದು (ಏ.16) ಯಾವುದೇ ಮಧ್ಯಂತರ ಆದೇಶ ನೀಡಿಲ್ಲ. ನಾಳೆ ಮಧ್ಯಾಹ್ನ (ಏ.17) 2 ಗಂಟೆಗೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ಮುಸ್ಲಿಂ ಧಾರ್ಮಿಕ ಸಂಸ್ಥೆಗಳು, ರಾಜಕೀಯ ನಾಯಕರು, ವಿವಿಧ ಪಕ್ಷಗಳು ಮತ್ತು ಇತರರ 70ಕ್ಕೂ ಹೆಚ್ಚು ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಇಂದು ವಿಚಾರಣೆಗೆ ಕೈಗೆತ್ತಿಕೊಂಡಿದೆ.

ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ಸಂಸದ ಎಂ.ಡಿ ಜಾವೇದ್, ಆರ್‌ಜೆಡಿ ಸಂಸದ ಮನೋಜ್ ಕುಮಾರ್ ಝಾ, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಜಮಿಯತ್ ಉಲೇಮಾ-ಇ-ಹಿಂದ್, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ವೈಎಸ್‌ಆರ್‌ಸಿ ಪಕ್ಷ, ಸಮಸ್ತ ಕೇರಳ ಜಮಿಯತುಲ್ ಉಲೇಮಾ, ದೆಹಲಿ ಶಾಸಕ ಅಮಾನತುಲ್ಲಾ ಖಾನ್, ಎಸ್‌ಪಿ ಸಂಸದ ಜಿಯಾ ಉರ್ ರೆಹಮಾನ್, ಬೆಂಗಳೂರಿನ ಜಾಮಾ ಮಸೀದಿಯ ಇಮಾಮ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಟಿವಿಕೆ ಅಧ್ಯಕ್ಷ ಮತ್ತು ತಮಿಳು ನಟ ವಿಜಯ್, ನಾಗರಿಕ ಹಕ್ಕುಗಳ ರಕ್ಷಣಾ ಸಂಘ ಮುಂತಾದವರು ಅರ್ಜಿದಾರರಲ್ಲಿ ಸೇರಿದ್ದಾರೆ.

ಕೇಂದ್ರ ಸರ್ಕಾರ ಏಪ್ರಿಲ್ 8ರಂದು ಸುಪ್ರೀಂ ಕೋರ್ಟ್‌ಗೆ ಕೇವಿಯಟ್ ಸಲ್ಲಿಸಿದ್ದು, ವಕ್ಫ್‌ ಅರ್ಜಿಗಳ ಸಂಬಂಧ ಯಾವುದೇ ಆದೇಶ ಹೊರಡಿಸುವ ಮುನ್ನ ತನ್ನ ವಾದವನ್ನು ಆಲಿಸುವಂತೆ ಕೋರಿದೆ.

ವಕ್ಫ್ ಕಾಯ್ದೆ ವಿರುದ್ಧ ಪ್ರತಿಭಟನೆ: ಅರ್ಜಿಗಳ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ‘Rumour is to deport all Muslims of India by paying them compensation?’
    Hindustan for Hindus abd Pakistan for Muslims as Muslims demanded?
    Walls around may not be a good idea?

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....