Homeಕರ್ನಾಟಕನಾಳೆ ಜಾತಿ ಗಣತಿ ವರದಿ ಬಹಿರಂಗವಾಗಲಿ: ಕಾಂಗ್ರೆಸ್‌ ಅಹಿಂದ ನಾಯಕರ ಆಗ್ರಹ

ನಾಳೆ ಜಾತಿ ಗಣತಿ ವರದಿ ಬಹಿರಂಗವಾಗಲಿ: ಕಾಂಗ್ರೆಸ್‌ ಅಹಿಂದ ನಾಯಕರ ಆಗ್ರಹ

- Advertisement -
- Advertisement -

ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಜಾತಿವಾರು ಆಧಾರಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015 ವರದಿಯನ್ನು (ಜಾತಿ ಗಣತಿ ವರದಿ) ರಾಜ್ಯದ ಜನರ ಎದುರು ಇಟ್ಟು ಚರ್ಚೆಗೆ ಸರ್ಕಾರ ಅವಕಾಶ ಮಾಡಿಕೊಡಲಿ ಎಂದು ಕಾಂಗ್ರೆಸ್‌ನ ಅಹಿಂದ ನಾಯಕರು ಒಕ್ಕೊರಲಿನಿಂದ ಆಗ್ರಹಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್‌.ಎಂ ರೇವಣ್ಣ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ನ ಅಹಿಂದ ನಾಯಕರು ಜಂಟಿಸುದ್ದಿಗೋಷ್ಠಿ ನಡೆಸಿ ಸರ್ಕಾರಕ್ಕೆ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಹೆಚ್‌.ಎಂ ರೇವಣ್ಣ ಮಾತನಾಡಿ, “ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ದೇಶದಲ್ಲೇ ದೊಡ್ಡ ಸಮೀಕ್ಷೆಯಾಗಿದೆ. ವರದಿ ಜಾರಿಯಿಂದ ರಾಜ್ಯದ ಜನತೆಗೆ ಒಳಿತಾಗಲಿದೆ. ಪ್ರಗತಿಗೂ ಸಹಾಯಕವಾಗಲಿದೆ. ಒಂದು ವರದಿ ಏನು ಪರಿಣಾಮ ಬೀರಬಹುದು ಎಂಬುದನ್ನು ಹಾವನೂರ್‌ ವರದಿ ತೋರಿಸಿಕೊಟ್ಟಿದೆ. ಸರ್ಕಾರ ಯಾವುದೇ ಕಾರಣಕ್ಕೂ ಹಿಂದೆ ಸರಿಯದೆ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಬೇಕು” ಎಂದು ಆಗ್ರಹಿಸಿದರು.

”ಯಾರು ಏನೇ ಹೇಳಿದರೂ ನಾವು ಒಪ್ಪುವುದಿಲ್ಲ. ಸೈದ್ಧಾಂತಿಕವಾಗಿ, ವೈಜ್ಞಾನಿಕವಾಗಿ ಸಮೀಕ್ಷೆ ನಡೆದಿದೆ. ಇದೇನು ಅಂತಿಮ ಆದೇಶವಲ್ಲ. ಸಣ್ಣ ಪುಟ್ಟ ಲೋಪದೋಷಗಳು ಕಂಡು ಬಂದರೆ ಖಂಡಿತ ತಿದ್ದಿಕೊಳ್ಳಲು ಅವಕಾಶ ಇರುತ್ತದೆ. ಇಡೀ ದೇಶದಲ್ಲಿ 1930ರ ನಂತರ ನಡೆದ ಅತೀ ದೊಡ್ಡ ಸಮೀಕ್ಷೆ ಇದಾಗಿದೆ. 10 ವರ್ಷದಲ್ಲಿ 10-15 ಲಕ್ಷ ಅಂಕಿ ಅಂಶ ವ್ಯತ್ಯಾಸ ಇರಬಹುದು. ಇದೊಂದೇ ಕಾರಣಕ್ಕೆ ಇಡೀ ವರದಿಯೇ ಅವೈಜ್ಞಾನಿಕ ಎಂದು ಹೇಳುವುದು ಸರಿಯಲ್ಲ” ಎಂದರು.

“ರಾಜಕೀಯ ಕಾರಣಕ್ಕೆ ವಿರೋಧ ಮಾಡುವುದು ಸರಿಯಲ್ಲ. ವರದಿ ಜಾರಿಯಿಂದ ಸಾಮಾಜಿಕ ನ್ಯಾಯ ಸಿಗುತ್ತದೆ. ನಮ್ಮ ಪಕ್ಷದವರು ಆದಿಯಾಗಿ ಬಿಜೆಪಿ ಮತ್ತಿ ಜೆಡಿಎಸ್‌ನ ಒಕ್ಕಲಿಗ ಮತ್ತು ಲಿಂಗಾಯತ ನಾಯಕರು ವರದಿಯನ್ನು ವಿರೋಧಿಸಬೇಡಿ ಎಂದು ಈ ಮೂಲಕ ಕೋರಿಕೊಳ್ಳುತ್ತೇವೆ. 55 ಪ್ರಶ್ನೆಗಳಿಗೆ ರಾಜ್ಯದ ಜನತೆ ಉತ್ತರಿಸಿದೆ. ನಮ್ಮ ಮನೆಗೆ ಯಾರೂ ಬಂದಿಲ್ಲ ಎಂದು ಹೇಳುವುದು ಸರಿಯಲ್ಲ. ನಗರ ಪ್ರದೇಶಗಳಲ್ಲಿ ಸ್ವಲ್ಪ ಹೀಗಾಗಿರಬಹುದು. ಆದರೆ ಗ್ರಾಮೀಣ ಭಾಗದಲ್ಲಿ ಶೇ.99ರಷ್ಟು ಜನರು ಸಮೀಕ್ಷೆಗೆ ಮಾಹಿತಿ ನೀಡಿದ್ದಾರೆ” ಎಂದು ತಿಳಿಸಿದರು.

ಮಾಜಿ ಸಭಾಪತಿ ವಿ.ಆರ್‌ ಸುದರ್ಶನ್‌ ಅವರು ಪ್ರಾಸ್ತಾವಿಕ ಮಾತನಾಡಿ, “ರಾಜ್ಯದ ಪ್ರತಿಯೊಂದು ಕುಟುಂಬದ ಸಾಮಾಜಿಕ, ಶೈಕ್ಷಣಿಕ ಹಾಗೂ ಉದ್ಯೋಗದ ಸ್ಥಿತಿಗತಿಗಳ ಬಗ್ಗೆ 55 ಮಾನದಂಡಗಳ ಅಡಿಯಲ್ಲಿ ಮಾಹಿತಿ ಸಂಗ್ರಹಿಸಲಾಗಿದೆ. 1,35,35,772 ಕುಟುಂಬಗಳು ಸಮೀಕ್ಷೆಗೆ ಒಳಗಾಗಿವೆ. 5,9814,942 ಕೋಟಿ ಜನರಿಂದ ಮಾಹಿತಿ ಸಂಗ್ರಹಿಸಲಾಗಿದೆ. ಈ ಸಮೀಕ್ಷೆ ನಡೆಸಲು 1.66 ಲಕ್ಷ ಸರ್ಕಾರಿ ನೌಕರರ ಸಹಕಾರ ಸಿಕ್ಕಿದೆ. ಇದರಲ್ಲಿ 22 ಸಾವಿರ ಶಿಕ್ಷಕರು ಭಾಗಿಯಾಗಿದ್ದಾರೆ. ಸಮೀಕ್ಷೆಗೆ 165.51 ಕೋಟಿ ರೂ ಖರ್ಚಾಗಿದೆ. ಇಷ್ಟೆಲ್ಲ ಮಾಹಿತಿ ಇರುವಾಗ ವರದಿ ಅವೈಜ್ಞಾನಿಕ ಹೇಗೆ ಸಾಧ್ಯ” ಎಂದು ಪ್ರಶ್ನಿಸಿದರು.

 

”ಪ್ರಮುಖ ಸಮುದಾಯ ನಾಯಕರು, ಮಠಾಧೀಶರು ತಮ್ಮ ಜಾತಿಯ ಬಗ್ಗೆ ಅಂಕಿ-ಅಂಶ ಹೇಳುವುದು ನೋಡಿದರೆ ರಾಜ್ಯದ ಜನಸಂಖ್ಯೆ ಅವರ ಪ್ರಕಾರ 50 ಕೋಟಿ ಆಗುತ್ತದೆ. ನಮ್ಮ ಜನಸಂಖ್ಯೆ ಅಷ್ಟು ಇದೆಯಾ? ಸರ್ಕಾರಕ್ಕೆ ನಮ್ಮ ಮನವಿ ಇಷ್ಟೇ: ಏ.17ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹಿರಂಗಗೊಳಿಸಿ. ರಾಜ್ಯದ ಜನತೆ ಈ ಬಗ್ಗೆ ಮುಕ್ತವಾಗಿ ಚರ್ಚಿಸಲಿ. ನಂತರ ತಮ್ಮ ಅಭಿಪ್ರಾಯಗಳನ್ನು ಸರ್ಕಾರಕ್ಕೆ ತಿಳಿಸಲಿ. ಸರಿ ಮಾಡಲು ಅವಕಾಶ ಇದೆ. ಅಧಿವೇಶನದಲ್ಲೂ ಈ ಬಗ್ಗೆ ಚರ್ಚೆಯಾಗಲಿ” ಎಂದು ಹೇಳಿದರು.

 

“ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷದವರು ಪರಿಣಿತರನ್ನು ಕರೆದು ಚರ್ಚಿಸಲಿ. ನಾವು ಯಾವುದೇ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡುವುದಿಲ್ಲ. ನೀವು ಸಹ ಆವೇಶದ ಮಾತುಗಳನ್ನು ಆಡಬೇಡಿ” ಎಂದು ಎಚ್ಚರಿಕೆಯ ಧ್ವನಿಯಲ್ಲಿ ಮಾತನಾಡಿದರು.

“ವರದಿ ಕುರಿತ ಅನುಕೂಲ ಮತ್ತು ಅನಾನುಕೂಲ ಸಂಗತಿಗಳ ಬಗ್ಗೆ ಚರ್ಚೆಗೆ ಅವಕಾಶವಿದೆ. ಸಚಿವ ಸಂಪುಟ ಉಪ ಸಮಿತಿ ಕೂಡ ರಚನೆಯಾಗಲಿ. 3-5 ಜನ ಸದಸ್ಯರಿರಲಿ. ಒಂದು ತಿಂಗಳಲ್ಲಿ ಸಮಿತಿ ವರದಿ ನೀಡಲಿ. ಮಾಧ್ಯಮದವರು ಸಹ ಸೂಕ್ಷ್ಮತೆ ಇಟ್ಟುಕೊಂಡು ವರದಿ ಮಾಡಲಿ. ಇದು ರಾಜಕೀಯ ಪ್ರಶ್ನೆಯಲ್ಲ. ಅನ್ಯಾಯಕ್ಕೆ ಒಳಗಾದ ಜನತೆಗೆ ನ್ಯಾಯ ಒದಗಿಸುವ ಪ್ರಶ್ನೆಯಾಗಿದೆ” ಎಂದು ಹೇಳಿದರು.

ಮಾಜಿ ಸಚಿವ ಮತ್ತು ವಿಧಾನ ಪರಿಷತ್‌ ಸದಸ್ಯ ಎಂ.ಆರ್‌ ಸೀತಾರಾಂ ಮಾತನಾಡಿ, “ನಾಳೆ ಅಧಿಕೃತವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ. ಪೂರ್ವಭಾವಿಯಾಗಿ ಎಲ್ಲವನ್ನು ಹೇಳುವುದು ಸರಿಯಲ್ಲ. ನಮ್ಮ ಉದ್ದೇಶ ಇಷ್ಟೇ: ಯಾರೂ ಸಹ ಸಮಾಜಘಾತುಕ ಕೆಲಸ ಮಾಡುವುದು ಬೇಡ. ಎಲ್ಲ ವರ್ಗದವರಿಗೂ ನ್ಯಾಯ ಸಿಗಲಿ” ಎಂದು ಅಭಿಪ್ರಾಯಪಟ್ಟರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವೆ ಉಮಾಶ್ರಿ, ಬಾದಾಮಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಸೇನ ಬಿ ಚಿಮ್ಮನಕಟ್ಟಿ ಸೇರಿದಂತೆ ಅಹಿಂದ ಸಮುದಾಯ ವಿವಿಧ ಸಂಘಟನೆಗಳ ನಾಯಕರು ಇದ್ದರು.

ಸೌಜನ್ಯ : ಈದಿನ.ಕಾಂ

ಮುಸ್ಲಿಮರು ದೊಡ್ಡ ಜನಸಂಖ್ಯೆ ಎಂಬುದು ಸುಳ್ಳು: ಒಕ್ಕಲಿಗ ಶಾಸಕರ ಸಭೆಯಲ್ಲಿ ಡಿಕೆಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...