Homeಮುಖಪುಟಉತ್ತರ ಪ್ರದೇಶ| ವಾಕ್-ಶ್ರವಣದೋಷವುಳ್ಳ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಚಿತ್ರಹಿಂಸೆ

ಉತ್ತರ ಪ್ರದೇಶ| ವಾಕ್-ಶ್ರವಣದೋಷವುಳ್ಳ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಚಿತ್ರಹಿಂಸೆ

- Advertisement -
- Advertisement -

ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ 11 ವರ್ಷದ ವಾಕ್ ಮತ್ತು ಶ್ರವಣದೋಷವುಳ್ಳ ಬಾಲಕಿಯ ಮೇಲೆ ಕ್ರೂರವಾಗಿ ಅತ್ಯಾಚಾರ ಮಾಡಲಾಗಿದೆ. ಆಕೆ ಪ್ರಜ್ಞಾಹೀನಳಾಗಿ ಗಂಭೀರ ಗಾಯಗಳಿಂದ ಪತ್ತೆಯಾಗಿದ್ದಾಳೆ. ಬಂಧನದ ಸಮಯದಲ್ಲಿ ಕಾಲಿಗೆ ಗುಂಡು ಹಾರಿಸುವ ಮೂಲಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳವಾರ ಸಂಜೆಯಿಂದ ಬಾಲಕಿ ಕಾಣೆಯಾಗಿದ್ದಳು, ಕುಟುಂಬ ಸದಸ್ಯರು ಆಕೆಗಾಗಿ ಹುಡುಕುತ್ತಿದ್ದರು. ನಿನ್ನೆ ಬೆಳಿಗ್ಗೆ, ಆಕೆ ಹೊಲದಲ್ಲಿ ಬೆತ್ತಲೆಯಾಗಿ ಗಾಯಗೊಂಡಿದ್ದು ಪತ್ತೆಯಾಗಿತ್ತು. ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಮೀರತ್‌ಗೆ ಕರೆದೊಯ್ಯಲಾಯಿತು. ಅಪ್ರಾಪ್ತ ವಯಸ್ಕಳ ಮೇಲಿನ ಅತ್ಯಾಚಾರ ಆರೋಪದಡಿಯಲ್ಲಿ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ದೌರ್ಜನ್ಯ ನಡೆದ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ, ಅದೇ ಗ್ರಾಮದ ನಿವಾಸಿ ಡಾನ್ ಸಿಂಗ್ (24) ಎಂಬಾತನನ್ನು ಶಂಕಿತ ಎಂದು ಗುರುತಿಸಿದ್ದಾರೆ. ಪೊಲೀಸರು ಆತನನ್ನು ವಶಕ್ಕೆ ಪಡೆಯಲು ಪ್ರಯತ್ನಿಸಿದಾಗ, ಆತ ಪೊಲೀಶರ ಮೇಲೆಯೇ ಗುಂಡು ಹಾರಿಸಿದ್ದಾನೆ, ಪ್ರತಿದಾಳಿಯಲ್ಲಿ ಗಾಯಗೊಂಡನು ಎಂದು ಪೊಲೀಸರು ತಿಳಿಸಿದ್ದಾರೆ.

“ಇದು ಒಬ್ಬರು ಅಥವಾ ಹೆಚ್ಚಿನ ವ್ಯಕ್ತಿಗಳಿಂದ ನಡೆದ ಅತ್ಯಾಚಾರದ ಸ್ಪಷ್ಟ ಪ್ರಕರಣವಾಗಿದೆ. ಏಕೆಂದರೆ, ಆಕೆಯ ಖಾಸಗಿ ಭಾಗಗಳಲ್ಲಿ ಅನೇಕ ಗಾಯಗಳಾಗಿದ್ದವು. ಆಕೆಯ ಮುಖಕ್ಕೆ ಮೊಂಡಾದ ವಸ್ತುವಿನಿಂದ ಹೊಡೆದಿದ್ದು, ಅದು ಊದಿಕೊಂಡಿತ್ತು. ಆಕೆ ಭಯಭೀತಳಾಗಿದ್ದಳು ಮತ್ತು ಏನನ್ನೂ ವಿವರಿಸಲು ಸಾಧ್ಯವಾಗುತ್ತಿರಲಿಲ್ಲ. ಇದು ನಾನು ನೋಡಿದ ಅತ್ಯಂತ ಭಯಾನಕ ಲೈಂಗಿಕ ಅಪರಾಧಗಳಲ್ಲಿ ಒಂದಾಗಿದೆ” ಎಂದು ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಿದ ಡಾ. ಅಂಜು ಸಿಂಗ್ ಹೇಳಿದ್ದಾರೆ.

ಮಾತನಾಡಲು ಅಥವಾ ಕೇಳಲು ಸಾಧ್ಯವಾಗದ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಬಾಲಕಿಯ ತಾಯಿ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ರಾಂಪುರ ಪೊಲೀಸ್ ಮುಖ್ಯಸ್ಥೆ ವಿದ್ಯಾ ಸಾಗರ್ ಮಿಶ್ರಾ ಹೇಳಿದ್ದಾರೆ.

“ನಾವು ಪ್ರಕರಣ ದಾಖಲಿಸಿ, ಬಾಲಕಿಯ ವೈದ್ಯಕೀಯ ಪರೀಕ್ಷೆಗೆ ವ್ಯವಸ್ಥೆ ಮಾಡಿದ್ದೇವೆ. ಆರೋಪಿಯನ್ನು ಪತ್ತೆಹಚ್ಚಲು ಮೂರು ತಂಡಗಳನ್ನು ರಚಿಸಲಾಗಿತ್ತು. ನಾವು ಆತನನ್ನು ಬಂಧಿಸಲು ಪ್ರಯತ್ನಿಸಿದಾಗ, ಆತ ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿದ. ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದರಿಂದ ಆತನಿಗೆ ಗುಂಡು ತಗುಲಿತು. ಆರೋಪಿಯ ವಿರುದ್ಧ ನಮ್ಮಲ್ಲಿ ಎಲೆಕ್ಟ್ರಾನಿಕ್ ಪುರಾವೆಗಳಿವೆ. ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಅವರು ಹೇಳಿದರು.

ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆರೋಪಿಯು ಬಾಲಕಿಯ ಮನೆಯ ಹೊರಗೆ ಮಾತನಾಡುತ್ತಿರುವುದು ಕಂಡುಬಂದಿದೆ ಎಂದು ಹಿರಿಯ ಅಧಿಕಾರಿ ಹೇಳಿದರು.

ಛತ್ತೀಸ್‌ಗಢದಲ್ಲಿ 22 ಜನ ನಕ್ಸಲರ ಬಂಧನ, ಸ್ಫೋಟಕಗಳು ವಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...