Homeಕರ್ನಾಟಕಸುಳ್ಳೇ ಬಿಜೆಪಿಯ ಮನೆ ದೇವರು; ಆರೆಸ್ಸೆಸ್‌ ಸುಳ್ಳಿನ ಮಹಾ ಕಾರ್ಖಾನೆ: ಸಿದ್ದರಾಮಯ್ಯ

ಸುಳ್ಳೇ ಬಿಜೆಪಿಯ ಮನೆ ದೇವರು; ಆರೆಸ್ಸೆಸ್‌ ಸುಳ್ಳಿನ ಮಹಾ ಕಾರ್ಖಾನೆ: ಸಿದ್ದರಾಮಯ್ಯ

- Advertisement -
- Advertisement -

ಪ್ರಧಾನಿ ಮೋದಿ ಗ್ಯಾಸ್ ಸಬ್ಸಿಡಿ ತೆಗೆದು ಬಡವರ ವಿರೋಧಿಯಾಗಿದ್ದು, ಗೊಬ್ಬರ, ಔಷಧಿ, ರಾಗಿ, ಗೋದಿ, ಡೀಸೆಲ್, ಪೆಟ್ರೋಲ್ ಎಲ್ಲದರ ಬೆಲೆ ಆಕಾಶಕ್ಕೇರಿಸಿದ್ದಾರೆ. ಅವರು ಭಾರತದ ಮಧ್ಯಮ ವರ್ಗ ಮತ್ತು ಬಡವರ ವಿರೋಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಳ್ಳೇ ಬಿಜೆಪಿಯ

ಬಿಜೆಪಿ ಯಾವ‌ ಮುಖ ಇಟ್ಟುಕೊಂಡು ನಮ್ಮ ಸರ್ಕಾರದ ವಿರುದ್ಧ ಮಾತಾಡುತ್ತಿದೆ? 4ರೂ ಹಾಲಿನ ದರ ಹೆಚ್ಚಿಸಿ ಈ 4 ರೂಪಾಯಿಯನ್ನು ನೇರವಾಗಿ ರೈತರ ಜೇಬಿಗೆ ಹಾಕಿದ್ದೇವೆ. ಸರ್ಕಾರಕ್ಕೆ ಬರಲ್ಲ ಎಂದು ಅವರು ಹೇಳಿದ್ದಾರೆ. ಅವರು ಬಿಜೆಪಿ ಸರ್ಕಾರದ ಬೆಲೆ ಏರಿಕೆಯನ್ನು ವಿರೋಧಿಸಿ ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡುತ್ತಿದ್ದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿಚಾರದಲ್ಲಿ ಸೋನಿಯಾ, ರಾಹುಲ್ ವಿರುದ್ಧ ಆರೋಪ ಪಟ್ಟಿ ಹಾಕಿದ್ದನ್ನು ತೀವ್ರವಾಗಿ ಖಂಡಿಸಿದ ಮುಖ್ಯಮಂತ್ರಿ, ಆರೆಸ್ಸೆಸ್ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ಲ. ಹೀಗಾಗಿ ಈ ಆರೆಸ್ಸೆಸ್ ಪರಿವಾರಕ್ಕೆ ಭಾರತದ ಬೆಲೆಯೂ ಗೊತ್ತಿಲ್ಲ. ಸ್ವಾತಂತ್ರ್ಯದ ಬೆಲೆಯೂ ಗೊತ್ತಿಲ್ಲ ಹೇಳಿದ್ದಾರೆ.

ಆರೆಸ್ಸೆಸ್‌ನವರ ದೇಶದ್ರೋಹದ ವಿರುದ್ಧ ಮತ್ತೊಂದು ಸ್ವಾತಂತ್ರ್ಯ ಹೋರಾಟದ ಮಾದರಿ ದೇಶಾದ್ಯಂತ ನಡೆಸೋಣ. ಅದಕ್ಕೆ ಸಜ್ಜಾಗಿ ಎಂದು ಮುಖ್ಯಮಂತ್ರಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. “ರಾಜಕೀಯ ಅಂದರೆ ಬರೀ ಅಧಿಕಾರ ಅಲ್ಲ. ಸೈದ್ಧಾಂತಿಕ ಸ್ಪಷ್ಟತೆಯಿಂದ ಜನರ ಪರವಾಗಿ ನಿಂತು ನಿರಂತರ ಹೋರಾಟ ನಡೆಸುವುದೂ ರಾಜಕೀಯ ಬದ್ಧತೆಯೇ ಆಗಿದೆ” ಎಂದು ಅವರು ಹೇಳಿದ್ದಾರೆ.

” ಸುಳ್ಳೇ ಬಿಜೆಪಿಯ ಮನೆ ದೇವರು. ಆರೆಸ್ಸೆಸ್‌ ಸುಳ್ಳಿನ ಮಹಾ ಕಾರ್ಖಾನೆ. ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಸಾವರ್ಕರ್ ಮತ್ತು ಢಾಂಗೆ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಕಾಂಗ್ರೆಸ್ ಸೋಲಿಸಿದ್ದು ಎಂದು ಬಿಜೆಪಿ ಬಂಡಲ್ ಬಿಡುತ್ತಿದೆ. ನಾವು ಸುಳ್ಳಿನ ಕಾರ್ಖಾನೆ RSS ನ ಸುಳ್ಳುಗಳ ವಿರುದ್ಧ ಸತ್ಯವನ್ನು ದೇಶದ ತುಂಬ ಹೇಳುವ ಎದೆಗಾರಿಕೆ ಬೆಳೆಸಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ನಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಅಪಪ್ರಚಾರ ಮಾಡುತ್ತಾ ಮೋದಿ ಸರ್ಕಾರ ತನ್ನ ಬಡವರ, ಮಧ್ಯಮ ವರ್ಗ ವಿರೋಧಿತನವನ್ನು ಬಚ್ಚಿಡಲು ಯತ್ನಿಸುತ್ತಿದೆ. ಸರ್ಕಾರ ದಿವಾಳಿ ಆಗಿದ್ದರೆ ಗ್ಯಾರಂಟಿಗಳಿಗೆ 56 ಸಾವಿರ ಕೋಟಿ ರೂಪಾಯಿ ಪ್ರತೀ ವರ್ಷ ತೆಗೆದಿಡಲು ಸಾಧ್ಯವಾಗುತ್ತಿತ್ತಾ?” ಎಂದು ಅವರು ಪ್ರಶ್ನಿಸಿದ್ದಾರೆ.

ತಮ್ಮ ಸರ್ಕಾರ ಏರಿಕೆ ಮಾಡಿರುವ ಹಾಲಿನ ಬೆಲೆಯನ್ನು ಸಮರ್ಥಿಸಿಕೊಂಡ ಅವರು, ಏರಿಕೆ ಮಾಡಲಾದ 4 ರೂ ರೈತರ ಜೇಬಿಗೆ ಹೋಗುತ್ತಿದೆ. ಸರ್ಕಾರಕ್ಕೆ ಬರುತ್ತಿಲ್ಲ. ನೀವು ಗ್ಯಾಸ್ ಬೆಲೆ ಹತ್ತಾರು ಬಾರಿ ಹೆಚ್ಚಿಸಿ ಈಗ ಮತ್ತೆ 50 ರೂ ಹೆಚ್ಚಿಸಿದ್ದೀರಿ. ಈ ಹೆಚ್ಚುವರಿ ಹಣ ಯಾರಿಗೆ ಹೋಗುತ್ತಿದೆ ಹೇಳಿ ಎಂದು ಕೇಂದ್ರ ಸರ್ಕಾರದ ಆಡಳಿತರೂಢ ಬಿಜೆಪಿಗೆ ಕೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುಂದಿನ ವಿಚಾರಣೆಯವರೆಗೆ ವಕ್ಫ್‌ನಲ್ಲಿ ಯಾವುದೇ ಬದಲಾವಣೆ-ನೇಮಕಾತಿ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್

ಮುಂದಿನ ವಿಚಾರಣೆಯವರೆಗೆ ವಕ್ಫ್‌ನಲ್ಲಿ ಯಾವುದೇ ಬದಲಾವಣೆ-ನೇಮಕಾತಿ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...