Homeಕರ್ನಾಟಕಬಡವರ ರಕ್ತ ಹೀರಿ ಶ್ರೀಮಂತರ ಖಜಾನೆ ತುಂಬಿಸಿದ್ದೊಂದೆ ಕೇಂದ್ರ ಬಿಜೆಪಿ ಸರ್ಕಾರದ ಸಾಧನೆ: ಕೃಷ್ಣ ಬೈರೇಗೌಡ...

ಬಡವರ ರಕ್ತ ಹೀರಿ ಶ್ರೀಮಂತರ ಖಜಾನೆ ತುಂಬಿಸಿದ್ದೊಂದೆ ಕೇಂದ್ರ ಬಿಜೆಪಿ ಸರ್ಕಾರದ ಸಾಧನೆ: ಕೃಷ್ಣ ಬೈರೇಗೌಡ ಕಿಡಿ

- Advertisement -
- Advertisement -

• ಕೇಂದ್ರ ಬಿಜೆಪಿಯದ್ದು ಶ್ರೀಮಂತರ ಪರ ಸರ್ಕಾರ
• ಬಡವರನ್ನು ಸುಲಿದು ಶ್ರೀಮಂತರ ಜೇಬು ತುಂಬಿಸುತ್ತಿದ್ದಾರೆ
• ತೈಲಗಳ ಮೇಲೆ ಶೇ.250 ರಿಂದ ಶೇ.500ರ ವರೆಗೆ ತೆರಿಗೆ ಏರಿಕೆ
• ಹಳ್ಳಿ ಹಳ್ಳಿಗೂ ಹೋರಾಟವನ್ನು ತಲುಪಿಸಲು ಕರೆ

ಬೆಂಗಳೂರು: ಸತತ ಬೆಲೆ ಏರಿಕೆ ಮೂಲಕ ಬಡವರ ರಕ್ತವನ್ನು ಹೀರಿ ಅಂಬಾನಿ-ಅದಾನಿ ಸೇರಿದಂತೆ ಶ್ರೀಮಂತರ ಖಜಾನೆ ತುಂಬಿಸಿದ್ದೊಂದೆ ಕಳೆದ 11 ವರ್ಷದ ಕೇಂದ್ರ ಸರ್ಕಾರದ ಸಾಧನೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕಿಡಿಕಾರಿದರು.

ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ಗುರುವಾರ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳು, ಸತತ ಬೆಲೆ ಏರಿಕೆ ಹಾಗೂ ಅವೈಜ್ಞಾನಿಕ ತೆರಿಗೆ ಪದ್ಧತಿಯ ವಿರುದ್ಧ ಆಕ್ರೋಶ ಹೊರಹಾಕಿದರು.

“ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಒಂದು ಲೀಟರ್ ಡೀಸೆಲ್ ಮೇಲಿನ ತೆರಿಗೆ 3.40 ರೂಪಾಯಿ ಇತ್ತು. ಆದರೆ, ಬಿಜೆಪಿ ಅವಧಿಯಲ್ಲಿ ಈ ಪ್ರಮಾಣವನ್ನು 20 ರೂಪಾಯಿಗೆ ಏರಿಸಲಾಗಿದೆ. ಲೀಟರ್ ಪೆಟ್ರೋಲ್ ಗೆ 9.20 ರೂಪಾಯಿ ಇದ್ದ ತೆರಿಗೆಯನ್ನು ಇದೀಗ 20 ರೂಪಾಯಿಗೆ ಏರಿಸಲಾಗಿದೆ. ಅಡಿಗೆ ಅನಿಲವನ್ನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಒಂದು ಸಿಲಿಂಡರ್ ಅನ್ನು 400 ರೂಪಾಯಿಗೆ ನೀಡಲಾಗುತ್ತಿತ್ತು. ಆ ಬೆಲೆಯೂ ಇದೀಗ ಸಾವಿರ ರೂಪಾಯಿ ದಾಟಿದೆ” ಎಂದು ಟೀಕಿಸಿದರು.

“ಕಳೆದ ಮೂರು ಅವಧಿಯ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಅಗತ್ಯ ವಸ್ತುಗಳ ಬೆಲೆ ಸರಾಸರಿಯಾಗಿ ಶೇ.250 ರಿಂದ ಶೇ.500 ರಷ್ಟು ಏರಿಕೆಯಾಗಿದೆ. ಎಣ್ಣೆ, ಬೇಳೆ, ಸಿಮೆಂಟ್, ಸ್ಟೀಲ್ ಸೇರಿದಂತೆ ಸಾಮಾನ್ಯರು ಬಳಸುವ ಎಲ್ಲಾ ವಸ್ತುಗಳ ಬೆಲೆಯೂ ದಿನೇ ದಿನೇ ಗಗನಕ್ಕೆ ಏರುತ್ತಿದೆ. ಈ ಮೂಲಕ ಕೇಂದ್ರ ಸರ್ಕಾರ ಜನ ಸಾಮಾನ್ಯರ ಬಡವರ ರಕ್ತವನ್ನು ತಿಗಣೆ ಹೀರಿದಂತೆ ಸುಲಿಗೆ ಮಾಡುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

ಮುಂದುವರೆದು, “ಕೇಂದ್ರ ಬಿಜೆಪಿ ಸರ್ಕಾರ ಏಕೆ ಹೀಗೆ ಬಡವರನ್ನು ಸುಲಿಯುತ್ತಿದೆ ಎಂಬ ವಿಚಾರವನ್ನೂ ನಾವು ಅರಿತುಕೊಳ್ಳಬೇಕು. ಏಕೆಂದರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶ್ರೀಮಂತರ ಕಾರ್ಪೊರೇಟ್ ತೆರಿಗೆಯನ್ನು ಶೇ.30 ಕ್ಕೆ ಏರಿಸಲಾಗಿತ್ತು. ಆದರೆ, ಬಿಜೆಪಿ ಸರ್ಕಾರ ಇದೀಗ ಶ್ರೀಮಂತರ ತೆರಿಗೆಯನ್ನು ಇಳಿಸಿ ಆ ಹೊರೆಯನ್ನು ಬಡವರ ಮೇಲೆ ಹಾಕುತ್ತಿದೆ. ಬಡವರಿಂದ ಸುಲಿದು ಅದಾನಿ-ಅಂಬಾನಿಯಂತಹ ಶ್ರೀಮಂತರ ಜೇಬು ತುಂಬಿಸುತ್ತಿದೆ. ಇದು ಶ್ರೀಮಂತರ ಪರ ಸರ್ಕಾರವಾಗಿದ್ದು, ಪರಿಣಾಮ ದೇಶದಲ್ಲಿ ಶ್ರೀಮಂತರ ಹಾಗೂ ಬಡವರ ನಡುವಿನ ಅಂತರ ಹೆಚ್ಚುತ್ತಲೇ ಇದೆ” ಎಂದು ಆತಂಕ ವ್ಯಕ್ತಪಡಿಸಿದರು.

ಸ್ವಿಜ್ ಬ್ಯಾಂಕಿನ ಕಪ್ಪು ಹಣ ಎಲ್ಲಿ?

“ಪ್ರಧಾನಿ ನರೇಂದ್ರ ಮೋದಿ ಅವರು ತಾವು ಅಧಿಕಾರಕ್ಕೆ ಬಂದರೆ ಭಾರತೀಯರು ಸ್ವಿಜ್ ಬ್ಯಾಂಕಿನಲ್ಲಿಟ್ಟಿರುವ ಕಪ್ಪು ಹಣವನ್ನು ತಂದು ಪ್ರತಿಯೊಬ್ಬ ಭಾರತೀಯನ ಖಾತೆಗೆ 15 ಲಕ್ಷ ಹಣ ಹಾಕುವುದಾಗಿ ಹೇಳಿದ್ದರು. ಖಾತೆ ಹಣ ಹಾಕುವುದಿರಲಿ, ಕನಿಷ್ಟ ಒಂದು ರೂಪಾಯಿ ಕಪ್ಪು ಹಣವನ್ನೂ ಭಾರತಕ್ಕೆ ವಾಪಸ್ ತರಲಾಗಲಿಲ್ಲ” ಎಂದು ಲೇವಡಿ ಮಾಡಿದರು.

“ವಿಜಯ್ ಮಲ್ಯ, ನೀರವ್ ಮೋದಿ, ಮೇಹುಲ್ ಚೋಕ್ಸಿ ಸೇರಿದಂತೆ ಅನೇಕ ಶ್ರೀಮಂತ ಉದ್ಯಮಿಗಳು ಭಾರತದ ಬ್ಯಾಂಕುಗಳಲ್ಲಿ ಸಾವಿರಾರು ಕೋಟಿ ಸಾಲ ಮಾಡಿ ವಿದೇಶಕ್ಕೆ ಓಡಿ ಹೋಗಿದ್ದಾರೆ. ಕನಿಷ್ಟ ಅವರನ್ನೂ ಸಹ ಭಾರತಕ್ಕೆ ಎಳೆದು ತರಲಾಗದವರು, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ವಿರುದ್ಧ ಚಾರ್ಜ್ ಶೀಟ್ ಹಾಕ್ತಾರೆ. ವಿಪಕ್ಷಗಳ ನಿರ್ಣಾಮಕ್ಕೆ ಮುಂದಾಗಿದ್ದಾರೆ” ಎಂದು ಕುಹಕವಾಡಿದರು.

ಹೋರಾಟವನ್ನು ಪ್ರತಿ ಹಳ್ಳಿಯಲ್ಲೂ ಮುನ್ನಡೆಸಿ:

“ಬಿಜೆಪಿ ಸರ್ಕಾರದ ಬೆಲೆ ಏರಿಕೆ ಹಾಗೂ ಜನ ವಿರೋಧಿ ಆಡಳಿತದ ವಿರುದ್ಧದ ಹೋರಾಟವನ್ನು ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ಪ್ರತಿ ಹಳ್ಳಿಗೂ ತಲುಪಿಸಬೇಕು” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕರೆ ನೀಡಿದರು.

“ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಪ್ರತಿಯೊಬ್ಬ ಕಾಂಗ್ರೆಸಿಗರು ಬೀದಿಗಿಳಿದು ಹೋರಾಟ ನಡೆಸಬೇಕು. ಸಾಮಾಜಿಕ ಜಾಲತಾಣಗಳ ಮೂಲಕವೂ ಈ ವಿಚಾರಗಳನ್ನು ಜನ ಸಾಮಾನ್ಯರ ಗಮನಕ್ಕೆ ತರಬೇಕು. ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಇಳಿಸುವವರೆಗೆ ನಮ್ಮ ಹೋರಾಟ ಮುಂದುವರೆಯಬೇಕು” ಎಂದರು.

ಜಾತಿ ಸಮೀಕ್ಷೆ ಇನ್ನೂ ಓದಿಲ್ಲ; ಅದರ ಬಗ್ಗೆ ರಾಜ್ಯ ಸರ್ಕಾರ ನಿರ್ಧರಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ; ವೀಡಿಯೊ ವೈರಲ್ ಬಳಿಕ ಆರೋಪಿ ಬಂಧನ

ಏಳು ತಿಂಗಳ ಹಿಂದಿನ ಘಟನೆಯ ಎರಡು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ 20 ವರ್ಷದ ದಲಿತ ವ್ಯಕ್ತಿಯ ಮೇಲೆ ಹಲ್ಲೆ ಮತ್ತು ಅವಮಾನ ಮಾಡಿದ ಆರೋಪದ...

ಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ

ಸುಮಾರು ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಸಿದ್ದತೆ ನಡೆಸಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಮಂಗಳವಾರ (ಜ.3) ಆಯ್ಕೆ...

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...