ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ್ದ ಜಾತಿವಾರು ಆಧಾರಿತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ-2015 ವರದಿ (ಜಾತಿ ಸಮೀಕ್ಷೆ ವರದಿ) ಬಗ್ಗೆ ಚರ್ಚಿಸಲು ಏಪ್ರಿಲ್ ೧೭ರ ಗುರುವಾರ ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ಯಾವುದೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿಲ್ಲ ಎಂದು ವರದಿಯಾಗಿದೆ. ಜಾತಿ ಸಮೀಕ್ಷೆ ವರದಿ
ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಚುಕ್ಕಾಣಿ ಹಿಡಿದ ದಿನದಿಂದಲೇ ‘‘ವರದಿ ಸ್ವೀಕರಿಸುವ ನನ್ನ ನಿರ್ಧಾರ ಅಚಲ’’ ಎಂದು ಸಿದ್ದರಾಮಯ್ಯ ಆಶಯ ವ್ಯಕ್ತಪಡಿಸಿಕೊಂಡೇ ಬಂದಿದ್ದರು. ಲೋಕಸಭೆ ಚುನಾವಣೆ ವೇಳೆ ವರದಿಯನ್ನು ಸಹ ಸ್ವೀಕರಿಸಿ, ಕಳೆದ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಓಪನ್ ಮಾಡಿದ್ದರು. ಅದಾಗ್ಯೂ, ಈ ಬಗ್ಗೆ ವಿಶೇಷ ಸಂಪುಟ ಸಭೆ ಕರೆದಿದ್ದರೂ ಯಾವುದೇ ತೀರ್ಮಾನ ಕೈಗೊಳ್ಳಲಾಗಿಲ್ಲ.
ವರದಿ ಬಗ್ಗೆ ಚರ್ಚಿಸಲೆಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 17ರಂದು ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದರು. ಒಂದೆಡೆ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯ ತುರ್ತು ಸಭೆಗಳನ್ನು ನಡೆಸಿ, ಜಾತಿ ಗಣತಿ ವರದಿ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಮತ್ತೊಂದೆಡೆ ಕಾಂಗ್ರೆಸ್‌ನ ಅಹಿಂದ ನಾಯಕರು ವರದಿ ಸಾರ್ವಜನಿಕವಾಗಿ ಬಹಿಂಗವಾಗಬೇಕು ಎಂದು ಆಗ್ರಹಿಸಿದ್ದರು.
ಈ ಎಲ್ಲ ಹಿನ್ನೆಲೆಯಲ್ಲಿ ಮಹತ್ವ ಪಡೆದಿದ್ದ ಗುರುವಾರದ ಸಚಿವ ಸಂಪುಟದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಬಗ್ಗೆ ಚರ್ಚೆ ಅಷ್ಟೇ ನಡೆದಿದ್ದು, ಸದ್ಯಕ್ಕೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ವರದಿ ಉಲ್ಲೇಖಿಸಿದೆ. ಮುಂದಿನ ದಿನಗಳಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ವರದಿ ಜಾರಿಗೆ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳುವ ಬಗ್ಗೆ ಚರ್ಚೆ ನಡೆದಿದೆ ಎಂದು ಈದಿನ.ಕಾಂ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.
ಜಾತಿ ಗಣತಿ ವರದಿ ಬಗ್ಗೆ ಚರ್ಚಿಸಲು ಮುಂದಿನವಾರ ಸಭೆ ಸೇರಲು ನಿರ್ಧರಿಸಲಾಗಿದ್ದು, ಅಷ್ಟರೊಳಗೆ ಅಗತ್ಯವಿರುವ ಸಮಾಲೋಚನೆ ಸಭೆಗಳನ್ನು ಮುಗಿಸಿ, ಮುಂದಿನ ತೀರ್ಮಾನ ಕೈಗೊಳ್ಳುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ಜೊತೆಗೆ ಮುಖ್ಯಮಂತ್ರಿ ಎಲ್ಲಾ ಸಚಿವರಿಂದ ವೈಯಕ್ತಿಕವಾಗಿ ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಮಹಾರಾಷ್ಟ್ರದಲ್ಲಿ ಎನ್‌ಇಪಿ ಜಾರಿ | 1-5ನೇ ತರಗತಿಗಳಿಗೆ ಹಿಂದಿ ಭಾಷೆ ಕಡ್ಡಾಯ ಮಾಡದ ಬಿಜೆಪಿ ಸರ್ಕಾರ!
https://naanugauri.com/maharashtra-nep-implementation-class-1-5-hindi-language-compulsory/

