HomeUncategorized41 ದಲಿತ ಕುಟುಂಬಗಳಿಗೆ ಸರಕಾರವೇ ಪುನರ್ವಸತಿ ಕಲ್ಪಿಸಿದ ಸ್ಥಳದಿಂದ ಜಾಗ ಖಾಲಿ ಮಾಡಲು ನೋಟಿಸ್

41 ದಲಿತ ಕುಟುಂಬಗಳಿಗೆ ಸರಕಾರವೇ ಪುನರ್ವಸತಿ ಕಲ್ಪಿಸಿದ ಸ್ಥಳದಿಂದ ಜಾಗ ಖಾಲಿ ಮಾಡಲು ನೋಟಿಸ್

- Advertisement -
- Advertisement -

ಉತ್ತರಪ್ರದೇಶದ ಹಾರ್ಪುರದ ಇಂದ್ರನಗರ ಕಾಲೋನಿಯಲ್ಲಿ 1986ರಿಂದ ವಾಸಿಸುತ್ತಿರುವ ದಲಿತ ಸಮುದಾಯಕ್ಕೆ ಸೇರಿದ 41 ಕುಟುಂಬಗಳಿಗೆ ನೀವು ಈ ಸ್ಥಳದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದೀರಿ, ಜಾಗ ಖಾಲಿ ಮಾಡಿ ಎಂದು ಪುರಸಭೆಯಿಂದ ನೋಟಿಸ್ ಜಾರಿಗೊಳಿಸಲಾಗಿದೆ.

ಇಲ್ಲಿ ದಲಿತರಿಗೆ ಸೇರಿದ 41 ಮನೆಗಳಲ್ಲಿ ನಲವತ್ತು ಮನೆಗಳನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅಡಿಯಲ್ಲಿ ನಿರ್ಮಿಸಲಾಗಿತ್ತು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2022ರ ವೇಳೆಗೆ “ಎಲ್ಲರಿಗೂ ವಸತಿ” ಒದಗಿಸುವ ಉದ್ದೇಶದಿಂದ ಆವಾಸ್ ಯೋಜನೆಯನ್ನು 2016ರಲ್ಲಿ ಪ್ರಾರಂಭಿಸಲಾಯಿತು. ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳ ನಿರ್ಮಾಣವನ್ನು ಬೆಂಬಲಿಸುವ ಯೋಜನೆಯನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ – ಗ್ರಾಮೀಣ (PMAY-G) ಎಂದು ಕರೆಯಲಾಗುತ್ತದೆ ಮತ್ತು ನಗರ ಪ್ರದೇಶಗಳಿಗೆ ಇದನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ – ನಗರ (PMAY-U) ಎಂದು ಕರೆಯಲಾಗುತ್ತದೆ.

ಇದೇ ಏಪ್ರಿಲ್ 8 ರಂದು ನೀಡಲಾದ ನೋಟಿಸ್‌ನಲ್ಲಿ ದಲಿತರು ಮನೆಗಳನ್ನು ನಿರ್ಮಿಸಿರುವ ಭೂಮಿ ಸರ್ಕಾರಕ್ಕೆ ಸೇರಿದ್ದು ಮತ್ತು ಅದು ಹಿಂದೆ ಕೊಳವಾಗಿತ್ತು ಎಂದು ಹೇಳಿದೆ.

ಗರ್ಮುಕ್ತೇಶ್ವರ ಪುರಸಭೆಯ ಕಾರ್ಯನಿರ್ವಾಹಕ ಅಧಿಕಾರಿ ಮುಕ್ತಾ ಸಿಂಗ್ ಅವರು ನೀಡಿದ ನೋಟಿಸ್‌ನಲ್ಲಿ, “ನೀವು ನಗರ ಪಾಲಿಕೆಯ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಿಕೊಂಡು ಅದರಲ್ಲಿ ಮನೆ ಕಟ್ಟಿದ್ದೀರಿ ಮತ್ತು ಈ ಮನೆಗಳನ್ನು ತೆರವು ಮಾಡಲು ನೀವು ಬಯಸುತ್ತಿಲ್ಲವಾದ್ದರಿಂದ, ನಿಮ್ಮ ವಿರುದ್ಧ ಕಾನೂನು ಕ್ರಮಗಳನ್ನು ಪ್ರಾರಂಭಿಸುವುದು ಮುಖ್ಯವಾಗಿದೆ. ಈ ನೋಟಿಸ್ ಸ್ವೀಕರಿಸಿದ 15 ದಿನಗಳಲ್ಲಿ, ಭೂಮಿಯಲ್ಲಿರುವ ನಿಮಗೆ ಸಂಬಂಧಿಸಿದ ವಸ್ತುಗಳನ್ನು ತೆಗೆದುಹಾಕಿ ಮತ್ತು ಭೂಮಿಯನ್ನು ನಗರ ಪಾಲಿಕೆಗೆ ಒಪ್ಸಿಪಿ, ಇಲ್ಲದಿದ್ದರೆ ನಿಮ್ಮ ವಿರುದ್ಧದ ಪ್ರಕರಣಕ್ಕೆ ನೀವೇ ಜವಾಬ್ದಾರರಾಗಿರುತ್ತೀರಿ” ಎಂದು ಬರೆದಿದ್ದಾರೆ.

ನಿವಾಸಿಗಳಿಗೆ ಹಲವಾರು ಬಾರಿ ಮೌಖಿಕವಾಗಿ ಎಚ್ಚರಿಕೆ ನೀಡಲಾಗಿದ್ದರೂ, “ಅವರ ಅಹಂಕಾರದಿಂದಾಗಿ” ಅವರು ಪುರಸಭೆಯ ಆದೇಶಗಳನ್ನು ಪಾಲಿಸಿಲ್ಲ ಎಂದು ನೋಟಿಸ್‌ನಲ್ಲಿ ಆರೋಪಿಸಲಾಗಿದೆ.

“ನಗರಸಭೆಯ ಅಧಿಕಾರಿಗಳು ನಿಮಗೆ ಭೂಮಿಯನ್ನು ಖಾಲಿ ಮಾಡುವಂತೆ ಹಲವಾರು ಬಾರಿ ಮೌಖಿಕವಾಗಿ ಆದೇಶ ನೀಡಲಾಗಿದ್ದರೂ, ಶಾಸನಬದ್ಧ ನಿಬಂಧನೆಗಳನ್ನು ಪಾಲಿಸದೆ ನೀವು ಭೂಮಿಯನ್ನು ಖಾಲಿ ಮಾಡಲು ನಿರಾಕರಿಸುತ್ತಿದ್ದೀರಿ ಮತ್ತು ನಿಮ್ಮ ಭೂ ದಾಖಲೆಗಳಲ್ಲಿ ಸದರಿ ಭೂಮಿಯನ್ನು ಸರಕಾರವು ತಮಗೆ ನೀಡಿದೆ ಮತ್ತು ದಾಖಲೆಗಳನ್ನು ನೀಡಿದೆ ಎಂದು ನೀವು ಹೇಳುತ್ತೀರಿ. ಸದರಿ ಭೂಮಿಯಲ್ಲಿ ಯಾವುದೇ ವಸತಿ ಪ್ಲಾಟ್‌ಗಳ ದಾಖಲೆಗಳಿಲ್ಲ ಮತ್ತು ಯಾವುದೇ ಸಂದರ್ಭದಲ್ಲಿ ಯಾರ ಹೆಸರಿನಲ್ಲಿ ಭೂ ದಾಖಲೆಗಳನ್ನು ಹೊಂದಿದ್ದರೆ ಅದನ್ನು ರದ್ದುಗೊಳಿಸಲಾಗಿದೆ.” ಎಂದು ಅವರು ಹೇಳಿದ್ದಾರೆ.

ಪ್ರಕಟಣೆಯೊಂದಿಗೆ ಮಾತನಾಡಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರೇರಣಾ ಶರ್ಮಾ, “ನಾವು ಈ ವಿಷಯವನ್ನು ಪರಿಶೀಲಿಸುತ್ತಿದ್ದೇವೆ. ಇದನ್ನು ಮಂಗಳವಾರ ನಮ್ಮ ಗಮನಕ್ಕೆ ತರಲಾಗಿದೆ. ಜನರ ಹಕ್ಕುಗಳು ಸರಿಯಾಗಿದ್ದರೆ, ನಾವು ತನಿಖೆ ಮಾಡುತ್ತೇವೆ. PMAY ಯೋಜನೆಯಡಿಯಲ್ಲಿ ಭೂ ದಾಖಲೆಗಳ ದೃಢೀಕರಣವನ್ನು ನಾವು ಪರಿಶೀಲಿಸುವುದಿಲ್ಲ, ದಸ್ತಾವೇಜಿನ ಪ್ರಕಾರ ವ್ಯಕ್ತಿಯು ಸರಿಯಾದ ಮಾಲೀಕರೇ ಎಂಬುದನ್ನು ಮಾತ್ರ ನಾವು ಪರಿಶೀಲಿಸುತ್ತೇವೆ. ನಾವು ಹಕ್ಕುಗಳನ್ನು ಪರಿಶೀಲಿಸಬೇಕಾಗಿದೆ” ಎಂದು ವಿವರಿಸಿದ್ದಾರೆ.

ಆದಾಗ್ಯೂ ನೋಟಿಸ್‌ನಲ್ಲಿ ಬಳಸಲಾದ ಸ್ವರ ಮತ್ತು ಭಾಷೆಯ ಬಗ್ಗೆ ಕೇಳಿದಾಗ, ಅಧಿಕಾರಿಗಳು ಪ್ರತಿಕ್ರಿಯಿಸಲು ನಿರಾಕರಿಸಿದರು. ನೋಟಿಸ್ ಸ್ವೀಕರಿಸಿದ ನಂತರ ಹಲವಾರು ನಿವಾಸಿಗಳು ಕಾರ್ಯನಿರ್ವಾಹಕ ಅಧಿಕಾರಿಯನ್ನು ಭೇಟಿಯಾಗಿದ್ದಾರೆ.

ವರದಿಯ ಪ್ರಕಾರ 58 ವರ್ಷದ ಗಂಗಾರಾಮ್, “ನಾನು 4ನೇ ತರಗತಿಯವರೆಗೆ ಮಾತ್ರ ಓದಿದ್ದೇನೆ ಮತ್ತು ನನ್ನ ಹೆಸರನ್ನು ಮಾತ್ರ ಓದಬಲ್ಲೆ. ಕಾಲೋನಿಯಲ್ಲಿರುವ ಇತರರು ನನ್ನ ಮನೆಯನ್ನು ಖಾಲಿ ಮಾಡಬೇಕೆಂದು ನನಗೆ ವಿವರಿಸಿದರು. ನಮ್ಮ ಕಾಲೋನಿ ಅಕ್ರಮ ಎಂದು ಅಧಿಕಾರಿಗಳು ನಮಗೆ ಹೇಳಿದರು. ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಅವರು ನಮಗೆ ಹೇಳಿದರು. ನಾವು ಬಡವರು, ನಾವು ದೂರು ನೀಡಬಹುದು.” ಎಂದು ಆವಲತ್ತುಕೊಂಡಿದ್ದಾರೆ.

PMAY ಯೋಜನೆಯಡಿಯಲ್ಲಿ ಇಲ್ಲಿ ಮನೆ ನಿರ್ಮಾಣಕ್ಕೆ ಮೊದಲ COVID-19 ಲಾಕ್‌ಡೌನ್ ನಂತರ ನಾನು ಮೂರು ಕಂತುಗಳನ್ನು ಪಡೆದೆನು. ತಲಾ 1 ಲಕ್ಷ ರೂ. ಮತ್ತು ಮುಂದಿನ ಕಂತುಗಳಲ್ಲಿ ತಲಾ 50,000 ರೂ. ಪಡೆದೆನು. ಆಳಿದುಳಿದ ಮನೆ ನಿರ್ಮಾಣವನ್ನು ಪೂರ್ಣಗೊಳಿಸಲು ಹೆಚ್ಚುವರಿಯಾಗಿ ತಮ್ಮ ಉಳಿತಾಯದಿಂದ 1.5 ಲಕ್ಷ ರೂ.ಗಳನ್ನು ಬಳಕೆ ಮಾಡಿದೆ ಎಂದು ಅವರು ಹೇಳಿದರು.

1986ರಲ್ಲಿ ಗಾಜಿಯಾಬಾದ್ ಜಿಲ್ಲೆಯ ಭಾಗವಾಗಿದ್ದ ಗರ್ಮುಕ್ತೇಶ್ವರದ ಚುಪ್ಲಾದಿಂದ ಸರಕಾರವು ಆ ಪ್ರದೇಶಕ್ಕೆ ತಮ್ಮನ್ನು ಸ್ಥಳಾಂತರಿಸಲಾಗಿದೆ ಎಂದು ನಿವಾಸಿಗಳು ಹೇಳಿದರು.

ಆ ಸಮಯದಲ್ಲಿ ಹೊರಡಿಸಲಾದ ನೋಟಿಸ್‌ನಲ್ಲಿ, “ಪುನರ್ವಸತಿ ಉದ್ದೇಶಕ್ಕಾಗಿ, ಸಾಮೂಹಿಕ ಅರ್ಜಿ ಪತ್ರವನ್ನು ಪರಿಗಣಿಸಿ, ಪುನರ್ವಸತಿ ಸಮಸ್ಯೆ ಬಗೆಹರಿಯಲು 100 ಗಜ ಭೂಮಿಯನ್ನು ನಿಮಗೆ ನೀಡಲು ನಾವು ನಿರ್ಧರಿಸಿದ್ದೇವೆ. ಭೂಮಿಯನ್ನು ಮಾರಾಟ ಮಾಡುವ ಮತ್ತು ವರ್ಗಾಯಿಸುವ ಹಕ್ಕು ನಿಮಗೆ ಇರುವುದಿಲ್ಲ. ನೀವು ಮತ್ತು ನಿಮ್ಮ ಕುಟುಂಬ ಸದಸ್ಯರು ವಸತಿ ಉದ್ದೇಶಗಳಿಗಾಗಿ ಭೂಮಿಯನ್ನು ಬಳಸುತ್ತೀರಿ” ಎಂದಿದೆ.

ಅವರು ಸ್ಥಳಾಂತರಗೊಂಡಾಗ ಅಲ್ಲಿ ಬತ್ತಿದ ಕೊಳವಿತ್ತು ಎಂದು ಗಂಗಾರಾಮ್ ಹೇಳುತ್ತಾರೆ. ಆದಾಗ್ಯೂ ನಗರ ಪಾಲಿಕೆ ಅಧಿಕಾರಿಗಳು ಅದನ್ನು ಮುಚ್ಚಿಸಿ ಅಲ್ಲಿಗೆ ನಮ್ಮನ್ನು ಸ್ಥಳಾಂತರಿಸಲು ಸಹಾಯ ಮಾಡಿದರು ಎಂದು ಅವರು ಹೇಳುತ್ತಾರೆ.

ಮತ್ತೊಬ್ಬ ನಿವಾಸಿ ಕಮಲಾ ಅವರು, “ಅವರು (ಅಧಿಕಾರಿಗಳು) ತಾವು ಮಾಡಬೇಕಾದ್ದನ್ನು ಮಾಡಿದ್ದೇವೆ ಎಂದು ನಮಗೆ ಹೇಳಿದರು, ಮತ್ತು ಈಗ ನಮಗೆ ಸಾಧ್ಯವಾದದ್ದನ್ನು ಮಾಡುವುದು ನಮ್ಮ ಜವಾಬ್ದಾರಿಯಾಗಿದೆ… ನಮಗೆ ನಿದ್ರೆ ಬರುತ್ತಿಲ್ಲ, ನಮ್ಮ ಉಳಿತಾಯದ ಎಲ್ಲಾ ಹಣವನ್ನು ನಮ್ಮ ಮನೆಗಳನ್ನು ನಿರ್ಮಿಸಲು ಬಳಸಿದ್ದೇವೆ. ಈಗ ನಾವು ಎಲ್ಲಿಗೆ ಹೋಗುಬೇಕು” ಎಂದು ಪ್ರಶ್ನಿಸುತ್ತಾರೆ.

ಹಣ, ಹೆಂಡಕ್ಕೆ ಮತ ನೀಡಿದರೆ ಮುಂದಿನ ಜನ್ಮದಲ್ಲಿ ನಾಯಿ, ಬೆಕ್ಕುಗಳಾಗಿ ಹುಟ್ಟುತ್ತೀರಿ: ಬಿಜೆಪಿ ಶಾಸಕಿ ಉಷಾ ಠಾಕೂರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...