Homeಮುಖಪುಟ"ಕೊಲೆ ಪ್ರಕರಣದಲ್ಲಿ ಸತ್ಯಾಂಶವನ್ನು ಮರೆಮಾಚಿದ್ದಾರೆ": ಡಿಐಜಿಗೆ 5 ಲಕ್ಷ ರೂ. ದಂಡ ವಿಧಿಸಿದ ಮಧ್ಯ ಪ್ರದೇಶ...

“ಕೊಲೆ ಪ್ರಕರಣದಲ್ಲಿ ಸತ್ಯಾಂಶವನ್ನು ಮರೆಮಾಚಿದ್ದಾರೆ”: ಡಿಐಜಿಗೆ 5 ಲಕ್ಷ ರೂ. ದಂಡ ವಿಧಿಸಿದ ಮಧ್ಯ ಪ್ರದೇಶ ಹೈಕೋರ್ಟ್

- Advertisement -
- Advertisement -

ಕೊಲೆ ಪ್ರಕರಣವೊಂದರಲ್ಲಿ ಸತ್ಯಾಂಶಗಳನ್ನು ಮರೆಮಾಚಿದ ಆರೋಪದ ಮೇಲೆ ಮಧ್ಯಪ್ರದೇಶ ಹೈಕೋರ್ಟ್ ಭೋಪಾಲ್ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಮಾಯಾಂಕ್ ಅವಸ್ಥಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಅವರಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಡಿಐಜಿ ಅವಸ್ಥಿ ಅವರಿಗೆ “ನೆಲದ ಕಾನೂನಿನ ಬಗ್ಗೆ ಯಾವುದೇ ಗೌರವವಿಲ್ಲ. ಅವರು ತಮ್ಮ ಸ್ವಇಚ್ಛೆಯಂತೆ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುವ ಅಭ್ಯಾಸ ಹೊಂದಿದ್ದಾರೆ” ಎಂದು ನ್ಯಾಯಮೂರ್ತಿ ಜಿ.ಎಸ್ ಅಹ್ಲುವಾಲಿಯಾ ಆದೇಶ ನೀಡುವ ವೇಳೆ ಹೇಳಿದ್ದಾರೆ.

ದಾತಿಯಾ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯಾಗಿರುವ ಅರ್ಜಿದಾರರಾದ ಮನ್ವೇಂದ್ರ ಸಿಂಗ್ ಗುರ್ಜರ್, ಘಟನೆಯ ದಿನಾಂಕ ಮತ್ತು ಸ್ಥಳದ ಬಗ್ಗೆ ಪ್ರಾಸಿಕ್ಯೂಷನ್‌ನ ಹೇಳಿಕೆಗಳನ್ನು ಪ್ರಶ್ನಿಸಿ 2018ರಲ್ಲಿ ಅರ್ಜಿ ಸಲ್ಲಿಸಿದ್ದರು.

ಘಟನೆ ನಡೆದ ಸ್ಥಳದಲ್ಲಿ ಹತ್ಯೆಗೀಡಾಗಿದ್ದ ವ್ಯಕ್ತಿ ಹಾಗೂ ಸಾಕ್ಷಿದಾರರು ಉಪಸ್ಥಿತರಿರಲಿಲ್ಲ ಎಂಬುದನ್ನು ನಿರೂಪಿಸುವ ಪ್ರಯತ್ನದ ಭಾಗವಾಗಿ ಕರೆ ವಿವರ ದಾಖಲೆಗಳನ್ನು ಸಂರಕ್ಷಿಸಿಡಬೇಕು ಎಂದು ಅರ್ಜಿದಾರ ಮನ್ವೇಂದರ್ ಸಿಂಗ್ ಗುರ್ಜರ್ ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದರು. ಈ ಕುರಿತು ಪ್ರತಿವಾದ ಮಂಡಿಸಿದ ಅವಸ್ಥಿ, ಈ ಅರ್ಜಿ ತೀರ್ಮಾನವಾಗುವ ಹೊತ್ತಿಗೆ ನಾನು ನನ್ನ ಹುದ್ದೆಯಿಂದ ವರ್ಗಾವಣೆಗೊಂಡಿದ್ದೆ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸುವ ಯಾವ ಅಧಿಕಾರವೂ ನನಗಿರಲಿಲ್ಲ ಎಂದು ಸಮರ್ಥಿಸಿಕೊಂಡಿದ್ದರು.

ನಿರ್ದಿಷ್ಟ ಮೊಬೈಲ್ ಸಂಖ್ಯೆಗಳ ಕರೆ ವಿವರಗಳು, ಸ್ಥಳಗಳು ಮತ್ತು ಸಿಮ್ ಅನ್ನು ಸಂರಕ್ಷಿಸಿಡಬೇಕು ಎಂದು ವಿಚಾರಣಾ ನ್ಯಾಯಾಲಯ ಆದೇಶಿಸಿರುವುದು ಹಾಗೂ ಈ ವಿವರಗಳನ್ನು ಸೆಪ್ಟೆಂಬರ್ 17, 2018ರಂದು ಅವಸ್ಥಿಗೆ ಇಮೇಲ್ ಮೂಲಕ ರವಾನಿಸಿರುವುದನ್ನು ಮತ್ತು ಅವಸ್ಥಿ ಮುಕ್ತ ಹಾಗೂ ನ್ಯಾಯಸಮ್ಮತ ತನಿಖೆಯ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿರುವುದು ಹೈಕೋರ್ಟ್ ಗಮನಿಸಿದೆ.

ಇಂತಹ ವ್ಯಕ್ತಿಗಳನ್ನು ಪೊಲೀಸ್ ಇಲಾಖೆಯಲ್ಲಿ ಉಳಿಸಿಕೊಳ್ಳಬೇಕೇ ಅಥವಾ ಬೇಡವೇ? ಎಂಬುವುದರ ಕುರಿತು ತೀರ್ಮಾನಿಸಬೇಕು ಎಂದು ಮಧ್ಯಪ್ರದೇಶ ಪೊಲೀಸ್ ಮಹಾ ನಿರ್ದೇಶಕರಿಗೂ ನ್ಯಾಯಾಲಯ ಸೂಚಿಸಿದೆ.

41 ದಲಿತ ಕುಟುಂಬಗಳಿಗೆ ಸರಕಾರವೇ ಪುನರ್ವಸತಿ ಕಲ್ಪಿಸಿದ ಸ್ಥಳದಿಂದ ಜಾಗ ಖಾಲಿ ಮಾಡಲು ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...