ಈಶಾನ್ಯ ದೆಹಲಿಯ ಮುಸ್ತಫಾಬಾದ್‌ನ ಶಕ್ತಿ ವಿಹಾರ್ ಪ್ರದೇಶದಲ್ಲಿ ಶನಿವಾರ (ಏ.19) ಬೆಳಗಿನ ಜಾವ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ನಾಲ್ವರು ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅವರ ರಕ್ಷಣಾ ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ.
ಕಟ್ಟಡ ಕುಸಿದಾಗ ಸುಮಾರು 22 ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ಸ್ಥಳಕ್ಕೆ ತಲುಪಿದ ನಂತರ ತಿಳಿಸಿದ್ದಾಗಿ ವರದಿಯಾಗಿದೆ.
ಇಲ್ಲಿಯವರೆಗೆ 14 ಜನರನ್ನು ರಕ್ಷಿಸಿ ಸ್ಥಳೀಯ ಜಿಟಿಬಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಟ್ಟಡ ಕುಸಿತದ ಬಗ್ಗೆ ದಯಾಳ್‌ಪುರ ಪೊಲೀಸ್ ಠಾಣೆಗೆ ಬೆಳಗಿನ ಜಾವ 3.02 ರ ಸುಮಾರಿಗೆ ಮಾಹಿತಿ ಬಂದಿದೆ. ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಘಟನಾ ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಅಗ್ನಿಶಾಮಕ ದಳ ಮತ್ತು ಪೊಲೀಸರ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ವರದಿಗಳು ಹೇಳಿವೆ.
ಜೈ ಶ್ರೀರಾಮ್ ಕೂಗಲು ನಿರಾಕರಣೆ: 13 ವರ್ಷದ ಮುಸ್ಲಿಂ ಬಾಲಕನಿಗೆ ಚಾಕು ಇರಿತ


