Homeಮುಖಪುಟಮಹಾರಾಷ್ಟ್ರದ 19ನೇ ಸಿಎಂ ಆಗಿ ಉದ್ಧವ್‌ ಠಾಕ್ರೆ ಪ್ರಮಾಣ ವಚನ ಸ್ವೀಕಾರ: ಮೊದಲ ಬಾರಿಗೆ ಠಾಕ್ರೆ...

ಮಹಾರಾಷ್ಟ್ರದ 19ನೇ ಸಿಎಂ ಆಗಿ ಉದ್ಧವ್‌ ಠಾಕ್ರೆ ಪ್ರಮಾಣ ವಚನ ಸ್ವೀಕಾರ: ಮೊದಲ ಬಾರಿಗೆ ಠಾಕ್ರೆ ಸರ್ಕಾರ್‌ ಶುರು

ಎನ್‌ಸಿಪಿಯ ಛಗನ್ ಭುಜ್ಬಾಲ್ ಜ್ಯೋತಿ ಬಾ ಫುಲೆ, ಶಾಹು ಮಹರಾಜ್‌, ಅಂಬೇಡ್ಕರ್‌ ಮತ್ತು ಸಾವಿತ್ರಿ ಬಾಯಿ ಫುಲೆಯ ಹೆಸರಿನಲ್ಲಿ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

- Advertisement -
- Advertisement -

ಉನ್ನತ ಅಧಿಕಾರದ ಹುದ್ದೆಗೇರಿದ ಠಾಕ್ರೆ ಕುಟುಂಬದ ಮೊದಲಿಗರಾದ ಉದ್ಧವ್‌ ಠಾಕ್ರೆ ಮಹಾರಾಷ್ಟ್ರದ 19ನೇ ಸಿಎಂ ಆಗಿ ಇಂದು ಸಂಜೆ 6.44ಕ್ಕೆ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಅಲ್ಲಿಗೆ ಇಂದಿನಿಂದ ಠಾಕ್ರೆ ಸರ್ಕಾರ್‌ ಶುರುವಾಗಲಿದ್ದು ಅವರ ಸಚಿವ ಸಂಪುಟದಲ್ಲಿ ಎನ್‌ಸಿಪಿ ಮುಖಂಡರಾದ ಛಗನ್ ಭುಜ್ಬಾಲ್, ಜಯಂತ್ ಪಾಟೀಲ್ ಶಿವಸೇನೆಯ ಏಕ್‌ನಾಥ್‌ ಸಿಂಧೆ ಮತ್ತು ಸುಭಾಶ್‌ ದೇಸಾಯಿ ಮತ್ತು ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಮುಖ್ಯಸ್ಥ ಬಾಲಾಸಾಹೇಬ್ ಥೋರತ್, ಹಾಗೂ ನಿತಿನ್‌ ರಾವತ್‌ ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮಹಾರಾಷ್ಟ್ರ ವಿಕಾಸ್ ಅಘಾಡಿ ಹೆಸರಿನಲ್ಲಿ ಸರ್ಕಾರ ರಚನೆಯಾಗಲಿದ್ದು ಉಪಮುಖ್ಯಮಂತ್ರಿಗಳು ಯಾರಾಗಲಿದ್ದಾರೆ ಎಂಬುದು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ.

ದಾದರ್‌ನ ಶಿವಾಜಿ ಪಾರ್ಕ್‌ನಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತು. 9000 ಚದರ ಅಡಿಗಳ ಬೃಹತ್‌ ವೇದಿಕೆ ನಿರ್ಮಿಸಲಾಗಿತ್ತು. ಅದೇ ಜಾಗದಲ್ಲಿ ದಿವಂಗತ ಬಾಳ್‌ ಠಾಕ್ರೆಯವರು 1966 ರಲ್ಲಿ ಶಿವಸೇನೆ ಸ್ಥಾಪಿಸಿದ್ದರು. ಮತ್ತು ಅವರ ಸಮಾಧಿ ಕೂಡ ಅಲ್ಲಿಯೇ ಇದೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಕೂಡ ಸಮಾರಂಭರಲ್ಲಿ ಭಾಗವಹಿಸಿ ಉದ್ಧವ್‌ ಠಾಕ್ರೆಯ ಕೈಕುಲುಕಿ ಶುಭಾಶಯ ತಿಳಿಸಿದ್ದಾರೆ. ಇದು ಒಂದು ವಾರದಿಂದ ನಡೆದ ಕಹಿ ಘಟನೆಗಳನ್ನು ಒಂದಷ್ಟು ಕಡಿಮೆ ಮಾಡಿತ್ತು.

ಎನ್‌ಸಿಪಿಯ ಛಗನ್ ಭುಜ್ಬಾಲ್ ಜ್ಯೋತಿ ಬಾ ಫುಲೆ, ಶಾಹು ಮಹರಾಜ್‌, ಅಂಬೇಡ್ಕರ್‌ ಮತ್ತು ಸಾವಿತ್ರಿ ಬಾಯಿ ಫುಲೆಯ ಹೆಸರಿನಲ್ಲಿ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್; ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್; ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌ ಮತ್ತು ಮಧ್ಯಪ್ರದೇಶದ ಸಿಎಂ ಕಮಲ್‌ ನಾಥ್‌, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಉದ್ಧವ್ ಠಾಕ್ರೆ ಅವರ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದಿದ್ದಕ್ಕಾಗಿ ರಾಹುಲ್ ಗಾಂಧಿ ಗುರುವಾರ ವಿಷಾದ ವ್ಯಕ್ತಪಡಿಸಿದ್ದಾರೆ. “ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಕಾರಣವಾದ ಘಟನೆಗಳು ನಮ್ಮ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಪೂರ್ವನಿದರ್ಶನವನ್ನು ನೀಡಿವೆ. ನಮ್ಮ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಬಿಜೆಪಿಯ ಪ್ರಯತ್ನವನ್ನು ಸೋಲಿಸಲು ಮಹಾರಾಷ್ಟ್ರ ವಿಕಾಸ್ ಅಘಾಡಿ ಒಗ್ಗೂಡಿರುವುದಕ್ಕೆ ನನಗೆ ಸಂತೋಷವಾಗಿದೆ. ಮಹಾರಾಷ್ಟ್ರದ ಜನರು ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದ್ದಾರೆ. ಮೈತ್ರಿ ಸರ್ಕಾರ ಅವರಿಗೆ ಸ್ಥಿರ, ಜಾತ್ಯತೀತ ಮತ್ತು ಬಡವರ ಪರವಾದ ಸರ್ಕಾರವನ್ನು ಒದಗಿಸುತ್ತದೆ ಎಂದು ನನಗೆ ವಿಶ್ವಾಸವಿದೆ ” ಎಂಬ ರಾಹುಲ್ ಗಾಂಧಿಯವರ ಪತ್ರವನ್ನು ಓದಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...