Homeಮುಖಪುಟಪ. ಬಂ.ದಲ್ಲಿ ಕೋಮು ಗಲಭೆಗೆ ಬಿಜೆಪಿ ಮತ್ತು ಆರೆಸ್ಸೆಸ್ ಕಾರಣ: ಮಮತಾ ಬ್ಯಾನರ್ಜಿ

ಪ. ಬಂ.ದಲ್ಲಿ ಕೋಮು ಗಲಭೆಗೆ ಬಿಜೆಪಿ ಮತ್ತು ಆರೆಸ್ಸೆಸ್ ಕಾರಣ: ಮಮತಾ ಬ್ಯಾನರ್ಜಿ

- Advertisement -
- Advertisement -

ಕೋಲ್ಕತ್ತಾ: ರಾಜ್ಯದಲ್ಲಿ ಕೋಮು ಹಿಂಸಾಚಾರ ಭುಗಿಲೆಳುವುದಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಬಿಜೆಪಿ ಕಾರಣ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ  ಹೇಳಿದ್ದಾರೆ.

“ಪಶ್ಚಿಮ ಬಂಗಾಳದಲ್ಲಿ ಕೋಮು ಹಿಂಸಾಚಾರಕ್ಕೆ ಪ್ರಚೋದಿಸುತ್ತಿರುವುದು ಆರ್‌ಎಸ್‌ಎಸ್ ಮತ್ತು ಬಿಜೆಪಿಗಳಾಗಿವೆ. ಅವರ ಪ್ರಚೋದನೆಗಳಲ್ಲಿ ಸಿಲುಕಿಕೊಳ್ಳದಂತೆ ರಾಜ್ಯದ ಜನರು ಅತ್ಯಂತ ಜಾಗರೂಕರಾಗಿರಬೇಕು. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಇದ್ದಕ್ಕಿದ್ದಂತೆ ತುಂಬಾ ಆಕ್ರಮಣಕಾರಿಯಾಗಿವೆ. ಈ ಮಿತ್ರಪಕ್ಷಗಳಲ್ಲಿ ಆರ್‌ಎಸ್‌ಎಸ್ ಸೇರಿದೆ. ಈ ಶಕ್ತಿಗಳು ಪ್ರಚೋದನೆಯಿಂದಾಗಿ ಸಂಭವಿಸಿದ ದುರದೃಷ್ಟಕರ ಘಟನೆಯ ಹಿನ್ನೆಲೆಯನ್ನು ಬಳಸಿಕೊಳ್ಳುತ್ತಿವೆ ”ಎಂದು ಮುಖ್ಯಮಂತ್ರಿ ತಮ್ಮ ‘ಬಹಿರಂಗ ಪತ್ರ’ದಲ್ಲಿ ತಿಳಿಸಿದ್ದಾರೆ.

ಎಲ್ಲರ ಮೇಲೆ ಪರಿಣಾಮ ಬೀರುವ ಗಲಭೆಗಳನ್ನು ಅವರು (ಆರ್‌ಎಸ್‌ಎಸ್-ಬಿಜೆಪಿ) “ಪ್ರಚೋದಿಸಲು” ಬಯಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.

ನಾವು ಎಲ್ಲರನ್ನೂ ಪ್ರೀತಿಸುತ್ತೇವೆ. ನಾವು ಒಟ್ಟಿಗೆ ಇರಲು ಬಯಸುತ್ತೇವೆ. ನಾವು ಗಲಭೆಗಳನ್ನು ಖಂಡಿಸುತ್ತೇವೆ. ನಾವು ಗಲಭೆಗಳನ್ನು ವಿರೋಧಿಸುತ್ತೇವೆ. ಅವರು (ಆರ್‌ಎಸ್‌ಎಸ್-ಬಿಜೆಪಿ) ಚುನಾವಣಾ ರಾಜಕೀಯಕ್ಕಾಗಿ ನಮ್ಮನ್ನು ವಿಭಜಿಸಲು ಬಯಸುತ್ತಿದ್ದಾರೆ ಎಂದು ಅವರು ಹೇಳಿದರು.

ಎಲ್ಲರೂ ಶಾಂತವಾಗಿರಲು ಅವರು ಮನವಿ ಮಾಡಿಕೊಂಡರು, ಕೋಮು ಗಲಭೆಗಳನ್ನು ಖಂಡಿಸುವುದಾಗಿ ಹೇಳಿದರು.

ಗಲಭೆಯ ಹಿಂದಿನ ಅಪರಾಧಿಗಳನ್ನು ಖಂಡಿತವಾಗಿ ಪತ್ತೆಹಚ್ಚಬೇಕಾಗಿದೆ. ಆದರೆ ಏಕಕಾಲದಲ್ಲಿ ನಾವು ಪರಸ್ಪರ  ಅಪನಂಬಿಕೆಯನ್ನು ತಪ್ಪಿಸಬೇಕು. ಬಹುಸಂಖ್ಯಾತ ಮತ್ತು ಅಲ್ಪಸಂಖ್ಯಾತ ಸಮುದಾಯಗಳು ಒಟ್ಟಾಗಿ ಕೆಲಸ ಮಾಡಬೇಕು ಮತ್ತು ಪರಸ್ಪರ ಕಾಳಜಿ ವಹಿಸಬೇಕು ಎಂದು ಅವರು ಹೇಳಿದರು.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಮತ್ತು ಮಾನವ ಜೀವಗಳು ಮತ್ತು ಘನತೆಯನ್ನು ಉಳಿಸಲು, ರಾಜ್ಯ ಸರ್ಕಾರವು ಬಲವಾದ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಇಬ್ಬರು ಉಸ್ತುವಾರಿ ಪೊಲೀಸ್ ಅಧಿಕಾರಿಗಳನ್ನು ತೆಗೆದುಹಾಕಲಾಗಿದೆ ಮತ್ತು ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಒಂದು ದೇವಸ್ಥಾನ, ಒಂದು ಬಾವಿ ಹಾಗೂ ಒಂದೇ ಸ್ಮಶಾನ ಬಳಸುವಂತೆ ಹಿಂದೂಗಳಿಗೆ ಭಾಗವತ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...