Homeಕರ್ನಾಟಕಬೆಂಗಳೂರಲ್ಲಿ ಟ್ರಾನ್ಸ್‌ಜೆಂಡರ್ ಶವವಾಗಿ ಪತ್ತೆ: ಕೊಲೆ ಶಂಕೆ

ಬೆಂಗಳೂರಲ್ಲಿ ಟ್ರಾನ್ಸ್‌ಜೆಂಡರ್ ಶವವಾಗಿ ಪತ್ತೆ: ಕೊಲೆ ಶಂಕೆ

- Advertisement -
- Advertisement -

ಬೆಂಗಳೂರಿನ ಕೆ.ಆರ್‌ ಪುರದ ಗಾಯತ್ರಿ ಲೇಔಟ್‌ನಲ್ಲಿ ಸುಮಾರು 40 ವರ್ಷ ವಯಸ್ಸಿನ ಟ್ರಾನ್ಸ್‌ಜೆಂಡರ್ ಒಬ್ಬರು ಭಾನುವಾರ (ಏ.20) ಶವವಾಗಿ ಪತ್ತೆಯಾಗಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಅವರನ್ನು ಕೊಲೆ ಮಾಡಲಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.

ತನುಶ್ರೀ ಸಾವಿಗೀಡಾದ ಟ್ರಾನ್ಸ್‌ಜೆಂಡರ್. ಮನೆಯಲ್ಲೇ ತನುಶ್ರೀ ಅವರ ಶವ ಕಂಡು ಬಂದಿದೆ. ಅಲ್ಲಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ಮೂರು ದಿನಗಳ ಹಿಂದೆಯೇ ತನುಶ್ರೀ ಹತ್ಯೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕೋಟ್ಯಾಧಿಪತಿಯಾಗಿದ್ದ ತನುಶ್ರೀ ಅವರು ‘ಸಂಗಮ’ ಎಂಬ ಸಮಾಜಸೇವಾ ಸಂಘಟನೆ ನಡೆಸುತ್ತಿದ್ದರು. ಕನ್ನಡ ಪರ ಸಂಘಟನೆಗಳ ಜೊತೆಗೂ ಗುರುತಿಸಿಕೊಂಡಿದ್ದರು. ಮೂರು ತಿಂಗಳ ಹಿಂದೆಯಷ್ಟೇ ಜಗನ್ನಾಥ್ ಎಂಬವರ ಜೊತೆ ಇವರ ಮದುವೆ ನಡೆದಿತ್ತು.

ಮದುವೆ ಬಳಿಕ ತನುಶ್ರೀ ಮನೆಯಲ್ಲೇ ಜಗನ್ನಾಥ್ ವಾಸವಿದ್ದರು. ತನುಶ್ರೀ ಸಾವಿಗೀಡಾದ ಬಳಿಕ ಅವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಹಾಗಾಗಿ, ತನುಶ್ರೀ ಬಳಿಯಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಲಪಟಾಯಿಸಲೆಂದೇ ಮದುವೆಯಾಗಿದ್ದ ಜಗನ್ನಾಥ್, ತನ್ನ ಸಂಚಿನಂತೆ ಅವರನ್ನು ಕೊಲೆ ಮಾಡಿ ಹಣ, ಚಿನ್ನಾಭರಣದ ಜೊತೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ತನುಶ್ರೀ ಸಾವಿಗೀಡಾದ ಬಳಿಕ, ಅವರ ಮನೆಯ ಕೆಲಸದಾಕೆಯೂ ಕಾಣುತ್ತಿಲ್ಲ ಎನ್ನಲಾಗಿದೆ. ಹಾಗಾಗಿ, ಜಗನ್ನಾಥ್ ಮತ್ತು ಮನೆ ಕೆಲಸದಾಕೆ ಒಟ್ಟಿಗೆ ಹೋಗಿರುವ ಶಂಕೆ ಉಂಟಾಗಿದೆ.

ಘಟನಾ ಸ್ಥಳಕ್ಕೆ ಕೆ.ಆರ್‌ ಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕ ಮಾಜಿ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...