Homeಮುಖಪುಟಪಹಲ್ಗಾಮ್ ಭಯೋತ್ಪಾದಕ ದಾಳಿ: ಸಾವಿಗೀಡಾದವರ ಸಂಖ್ಯೆ 28ಕ್ಕೆ ಏರಿಕೆ; ಕರ್ನಾಟಕದ ಇಬ್ಬರು ಬಲಿ

ಪಹಲ್ಗಾಮ್ ಭಯೋತ್ಪಾದಕ ದಾಳಿ: ಸಾವಿಗೀಡಾದವರ ಸಂಖ್ಯೆ 28ಕ್ಕೆ ಏರಿಕೆ; ಕರ್ನಾಟಕದ ಇಬ್ಬರು ಬಲಿ

- Advertisement -
- Advertisement -

ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಬೈಸರನ್ ಕಣಿವೆಯ ಸುಂದರ ಹುಲ್ಲುಗಾವಲಿನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಮಂಗಳವಾರ (ಏ.22) ನಡೆಸಿದ ಗುಂಡಿನ ದಾಳಿಯಲ್ಲಿ ಸಾವಿಗೀಡಾದವರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ.

ಪಹಲ್ಗಾಮ್ ಎಂಬ ರೆಸಾರ್ಟ್ ಪಟ್ಟಣದಿಂದ ಸುಮಾರು ಆರು ಕಿಲೋಮೀಟರ್ ದೂರದಲ್ಲಿರುವ ಬೈಸರನ್‌ನಲ್ಲಿ ಮಧ್ಯಾಹ್ನ 2:30ರ ಸುಮಾರಿಗೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ದಟ್ಟವಾದ ಪೈನ್ ಕಾಡುಗಳು ಮತ್ತು ಪರ್ವತಗಳಿಂದ ಸುತ್ತುವರೆದಿರುವ ಈ ವಿಶಾಲವಾದ ಹುಲ್ಲುಗಾವಲು ಪ್ರದೇಶ ದೇಶ ವಿದೇಶಗಳ ಪ್ರವಾಸಿಗರ ನೆಚ್ಚಿನ ತಾಣವಾಗಿದೆ.

2019ರ ಪುಲ್ವಾಮಾ ದಾಳಿಯ ನಂತರ ಈ ಪ್ರದೇಶದಲ್ಲಿ ನಡೆದ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ಇದಾಗಿದೆ.

ಪಾಕಿಸ್ತಾನ ಮೂಲದ ನಿಷೇಧಿತ ಲಷ್ಕರ್-ಎ-ತೈಬಾ (ಎಲ್‌ಇಟಿ) ಭಯೋತ್ಪಾದಕ ಗುಂಪಿನ ಜೊತೆ ನಂಟು ಹೊಂದಿರುವ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ದಾಳಿಯ ಹೊಣೆ ಹೊತ್ತುಕೊಂಡಿದೆ ಎಂದು ವರದಿಗಳು ಹೇಳಿವೆ.

ಇಬ್ಬರು ಕನ್ನಡಿಗರು ಸಾವು

ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಮತ್ತು ಬೆಂಗಳೂರಿನಲ್ಲಿ ವಾಸವಿದ್ದ ಹಾವೇರಿ ಮೂಲದ ಭರತ್ ಭೂಷಣ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ದಾಳಿಯಲ್ಲಿ ಮಂಜುನಾಥ್ ಅವರ ಪತ್ನಿ ಪಲ್ಲವಿ ಮತ್ತು ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಂಡ ಕಳುಹಿಸಿದ ಕರ್ನಾಟಕ ಸರ್ಕಾರ

ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.

ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಿಎಂ, ತಕ್ಷಣ ಕಾರ್ಯಪ್ರವತ್ತರಾಗುವಂತೆ ಸೂಚನೆ ನೀಡಿದ್ದಾರೆ. ಸಿಎಂ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಐಪಿಎಸ್‌ ಅಧಿಕಾರಿ ಚೇತನ್ ಆರ್ ಮತ್ತು ಇತರ ಅಧಿಕಾರಿಗಳ ತಂಡ ಕಾಶ್ಮೀರಕ್ಕೆ ತಲುಪಿದ್ದಾರೆ.

ದಾಳಿಯಲ್ಲಿ ಸಾವಿಗೀಡಾದ ಕರ್ನಾಟಕ ಇಬ್ಬರ ಸೇರಿದಂತೆ 25 ಜನರ ಶವಗಳನ್ನು ಅವರ ಊರುಗಳಿಗೆ ತಲುಪಿಸಲು ವಿಮಾನದ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ವ್ಯವಸ್ಥೆಗಳನ್ನು ಮಾಡಿದೆ.

ಸಾವಿಗೀಡಾದವರ ಶವ ಊರಿಗೆ ತಲುಪಿಸಲು ವಿಮಾನದ ವ್ಯವಸ್ಥೆ

ಅಧಿಕಾರಿಗಳ ಸಭೆ ನಡೆಸಿದ ಅಮಿತ್ ಶಾ

ಭಯೋತ್ಪಾದಕ ದಾಳಿ ನಡೆದ ಬೆನ್ನಲ್ಲೇ ಮಂಗಳವಾರ ಸಂಜೆ ದೆಹಲಿಯಿಂದ ಕಾಶ್ಮೀರಕ್ಕೆ ತೆರಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಶ್ರೀನಗರದ ರಾಜಭವನದಲ್ಲಿ ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಅಧಿಕಾರಿಗಳ ಸಭೆ ನಡೆಸಿದ ಅಮಿತ್ ಶಾ

ಸೌದಿಯಿಂದ ಹಿಂದಿರುಗಿದ ಪ್ರಧಾನಿ ಮೋದಿ

ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡು ದಿನಗಳ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ಹಿಂದಿರುಗಿದ್ದಾರೆ. ಎರಡು ದಿನಗಳ ಭೇಟಿಗೆ ಮಂಗಳವಾರ ಸೌದಿ ತಲುಪಿದ ಅವರು, ಇಂದು ಮುಂಜಾನೆ ತುರ್ತಾಗಿ ದೇಶಕ್ಕೆ ಮರಳಿದ್ದಾರೆ. ಅಧಿಕಾರಿಗಳ ಜೊತೆ ಇಂದು ಪ್ರಧಾನಿ ಸಭೆ ನಡೆಸುವ ಸಾಧ್ಯತೆ ಇದೆ.

ಅಮಿತ್ ಶಾ ಜೊತೆ ರಾಹುಲ್ ಗಾಂಧಿ ಚರ್ಚೆ

ಭೀಕರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಗೃಹ ಸಚಿವ ಅಮಿತ್ ಶಾ, ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಮತ್ತು ಜಮ್ಮು ಕಾಶ್ಮೀರ ಪಿಸಿಸಿ ಅಧ್ಯಕ್ಷ ತಾರಿಕ್ ಕರ್ರಾ ಅವರೊಂದಿಗೆ ಮಾತನಾಡಿದೆ. ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದೆ. ಬಲಿಪಶುಗಳ ಕುಟುಂಬಗಳಿಗೆ ನ್ಯಾಯ ಮತ್ತು ನಮ್ಮ ಸಂಪೂರ್ಣ ಬೆಂಬಲ ಬೇಕು ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಸಹಾಯವಾಣಿ ತೆರೆದ ಪೊಲೀಸರು

ಅಗತ್ಯವಿರುವ ಪ್ರವಾಸಿಗರಿಗೆ ತಕ್ಷಣದ ಬೆಂಬಲ ಮತ್ತು ಮಾಹಿತಿಯನ್ನು ಒದಗಿಸಲು ಅನಂತನಾಗ್ ಪೊಲೀಸರು ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ 24/7 ತುರ್ತು ಸಹಾಯ ಕೇಂದ್ರವನ್ನು ಸ್ಥಾಪಿಸಿದ್ದಾರೆ. ಯಾವುದೇ ತುರ್ತು ಪರಿಸ್ಥಿತಿಗಳು ಅಥವಾ ಪ್ರಶ್ನೆಗಳಿಗೆ ಪ್ರವಾಸಿಗರಿಗೆ ಸಹಾಯ ಮಾಡಲು ಮೀಸಲಾಗಿರುವ ಅನಂತ್‌ನಾಗ್ ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ ಈಗ ದಿನದ 24 ಗಂಟೆಯೂ ವಿಶೇಷ ಸಹಾಯ ಕೇಂದ್ರ ಕಾರ್ಯನಿರ್ವಹಿಸುತ್ತಿದೆ.

ಸಹಾಯವಾಣಿಯ ಸಂಪರ್ಕ ಸಂಖ್ಯೆಗಳು ಕೆಳಗಿವೆ

9596777669
01932225870
ವಾಟ್ಸಾಪ್ : 9419051940

ತಮಿಳುನಾಡು ರಾಜ್ಯಪಾಲರ ವಿರುದ್ಧದ ಸುಪ್ರೀಂಕೋರ್ಟ್‌ನ ತೀರ್ಪು ಕೇರಳಕ್ಕೆ ಅನ್ವಯಿಸುವುದಿಲ್ಲ: ಕೇಂದ್ರ ಸರ್ಕಾರ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...