Homeಕರ್ನಾಟಕ'ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ದೇಶದಲ್ಲಿ ಕೆಟ್ಟದ್ದು ನಡೆಯುತ್ತೆ ಎಂದ ಬಿಜೆಪಿ: ಮೋದಿ ನಿನ್ನೆ ಸೌದಿಯಲ್ಲಿದ್ದರು,...

‘ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ದೇಶದಲ್ಲಿ ಕೆಟ್ಟದ್ದು ನಡೆಯುತ್ತೆ ಎಂದ ಬಿಜೆಪಿ: ಮೋದಿ ನಿನ್ನೆ ಸೌದಿಯಲ್ಲಿದ್ದರು, ನೆನಪಿಸಿದ ಜನ

- Advertisement -
- Advertisement -

“ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ, ದೇಶದಲ್ಲಿ ಏನಾದರು ಒಂದು ಕೆಟ್ಟದ್ದು ನಡೆಯುತ್ತದೆ” ಎಂದು ಕರ್ನಾಟಕ ಬಿಜೆಪಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿದೆ.

ಇತ್ತೀಚೆಗೆ ರಾಹುಲ್ ಗಾಂಧಿ ಅಮೆರಿಕದ ಬೋಸ್ಟನ್ ನಗರಕ್ಕೆ ಭೇಟಿ ನೀಡಿದ್ದರು. ಈ ಬೆನ್ನಲ್ಲೇ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದನ್ನು ಉದ್ದೇಶಿಸಿ ಬಿಜೆಪಿ ಈ ಪೋಸ್ಟ್ ಹಾಕಿದೆ.

ಆದರೆ, ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಅನೇಕ ಜನರು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿ ಬಂದಾಗ ದೇಶದಲ್ಲಿ ಕೆಟ್ಟದ್ದು ನಡೆಯುವುದಾದರೆ, ಪ್ರಧಾನಿ ನರೇಂದ್ರ ಮೋದಿ ಇವತ್ತು ಬೆಳಿಗ್ಗೆಯಷ್ಟೇ ಸೌದಿಯಿಂದ ಬಂದಿರಲ್ಲ, ಈ ಬಗ್ಗೆ ಏನು ಹೇಳುತ್ತೀರಿ?” ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಎರಡು ದಿನಗಳ ಭೇಟಿಗೆ ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಪಹಲ್ಗಾಮ್‌ನಲ್ಲಿ ದಾಳಿ ನಡೆದ ಹಿನ್ನೆಲೆ, ಯಾತ್ರೆ ಮೊಟಕುಗೊಳಿಸಿ ಇಂದು ಬೆಳಿಗ್ಗೆ ಅವರು ಭಾರತಕ್ಕೆ ಆಗಮಿಸಿದ್ದಾರೆ. ಸೌದಿಯಲ್ಲಿ ಅಲ್ಲಿನ ಉನ್ನತಧಿಕಾರಿಗಳನ್ನು ಮೋದಿ ಭೇಟಿಯಾಗಿದ್ದಾರೆ.

ಈ ಕುರಿತ ಫೋಟೋಗಳನ್ನು ಹಂಚಿಕೊಂಡಿರುವ ಎಕ್ಸ್‌ ಬಳಕೆದಾರರೊಬ್ಬರು “ಇವರಿಗೂ ನಿಮ್ಮ ಪೋಸ್ಟ್ ಅನ್ವಯಿಸುತ್ತಾ?” ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

“ಭದ್ರತಾ ವೈಫಲ್ಯಕ್ಕೆ ಅಧಿಕಾರದಲ್ಲಿರುವವರನ್ನು ದೂಷಿಸುವ ಬದಲು, ನೀವು ಬೇರೆ ಯಾರನ್ನೋ ದೂಷಿಸುತ್ತಿದ್ದೀರಿ. ಹೊಣೆ ಹೊತ್ತುಕೊಳ್ಳುವುದಕ್ಕಿಂತ ರಾಹುಲ್ ಗಾಂಧಿಯನ್ನು ದೂಷಿಸುವುದು ಭಯೋತ್ಪಾದನೆಗಿಂತ ಕೆಟ್ಟದ್ದು” ಎಂದು ಮತ್ತೊಬ್ಬರು ಹೇಳಿದ್ದಾರೆ.

“ಮೋದಿ ಕೂಡ ಹೊರ ದೇಶಕ್ಕೆ ಹೋಗಿದ್ದರು. ಮೋದಿ ಇಸ್ಲಾಮಿಕ್ ದೇಶಕ್ಕೆ ಹೋಗಿದ್ದರು, ಕಾರಣ ಏನಿರಬಹುದು? ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು? ಎಂದು ಅನೇಕರು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.”

 

 

 

 

 

“ಮಣಿಪುರ ಹೊತ್ತಿ ಉರಿಯಿತು, ಬಂಗಾಳದಲ್ಲಿ ಗಲಭೆ ಆಯಿತು, ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಆಯಿತು. ನಿಮ್ಮ ಪ್ರಧಾನಿ ಎಲ್ಲಿದ್ದಾರೆ. ಒಂದೆಡೆ ಅವರು ಶೇಖ್ ಸಲ್ಮಾನ್ ಜೊತೆ ಮೈತ್ರಿಕೊಂಡರೆ, ಮತ್ತೊಂದೆಡೆ ಮುಸ್ಲಿಮರನ್ನು ವಿಷಯವನ್ನು ತಿರುಗಿಸಲು ಮುಸ್ಲಿಮರನ್ನು ಗುರಿಯಾಗಿಸುತ್ತಿದ್ದಾರೆ” ಎಂದು ಮತ್ತೊಬ್ಬರು ಎಕ್ಸ್‌ ಬಳಕೆದಾರರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

 

 

 

 

 

 

 

 

 

 

 

 

“ರಾಹುಲ್ ಗಾಂಧಿ ಮತ್ತು ನೆಹರೂ ವಂಶಸ್ಥರನ್ನು ದೂಷಿಸುವುದನ್ನು ನಿಲ್ಲಿಸಿ. ನೀವು ಮತ್ತು ನಿಮ್ಮ ನೇತಾರರು ಏನು ಮಾಡುತ್ತಿದ್ದೀರಿ ???? ನಿಮಗೆ ನಿಜವಾಗಿಯೂ ನಾಯಕರಿದ್ದಾರೆಯೇ ?? ಉಚಿತ ಕೊಡುಗೆಗಳು, ಯೋಜನೆಗಳು, ಮೀಸಲಾತಿಗಳನ್ನು ವಿತರಿಸುವ, ತೆರಿಗೆಗಳ ಹೆಸರಿನಲ್ಲಿ ನಮ್ಮ ಹಣವನ್ನು ಕಸಿದುಕೊಳ್ಳುವ ನೇತಾರರು ಮಾತ್ರ. ಮೋದಿ ರಾಜೀನಾಮೆ ನೀಡಬೇಕೆಂದು ಕೇಳಿ. ನಮಗೆ ಯೋಗಿ ಜೀ ಪ್ರಧಾನಿಯಾಗಬೇಕು” ಎಂದು ಇನ್ನೊಬ್ಬರು ಎಕ್ಸ್‌ ಬಳಕೆದಾರರು ಅಸಮಧಾನ ವ್ಯಕ್ತಪಡಿಸಿದ್ದಾರೆ.

“ನಾನು ರಾಹುಲ್ ಗಾಂಧಿಗೆ ಮತ ಹಾಕಿಲ್ಲ. ನಾನು ಮೋದಿ ಜಿಗೆ ಮತ ಹಾಕಿದ್ದೇನೆ. ಅವರು ಏನು ಮಾಡುತ್ತಿದ್ದಾರೆ? ಅವರು ಯಾಕೆ ಇಷ್ಟೊಂದು ಶಕ್ತಿಹೀನ ಮತ್ತು ಭಯಭೀತರಾಗಿದ್ದಾರೆ? ಅವರು ಹಿಂದೂಗಳ ಜೀವನದ ಬಗ್ಗೆ ಏಕೆ ತಲೆಕೆಡಿಸಿಕೊಳ್ಳುತ್ತಿಲ್ಲ? ಅವರನ್ನು ರಾಜೀನಾಮೆ ನೀಡಿ ಯೋಗಿ ಜಿ ಅಧಿಕಾರ ವಹಿಸಿಕೊಳ್ಳಲಿ. ಪ್ರಧಾನಿಯಾಗಿದ್ದಾಗಲೂ ಇನ್ನೊಬ್ಬರನ್ನು ದೂರುವುದು ಎಷ್ಟು ಸರಿ?” ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

ಪಹಲ್ಗಾಮ್ ದಾಳಿ | ಜಮ್ಮು ಕಾಶ್ಮೀರ ಬಂದ್‌ಗೆ ಗ್ರ್ಯಾಂಡ್‌ ಮುಫ್ತಿ ಸೇರಿದಂತೆ ಮುಸ್ಲಿಂ ಧಾರ್ಮಿಕ ಸಂಘಟನೆಗಳ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...