Homeಕರ್ನಾಟಕಬಿಸ್ಮಿಲ್ಲಾ... ಎನ್ನುತ್ತಾ ಸ್ಥಳೀಯ ಮುಸ್ಲಿಮರು ನಮಗೆ ಸಹಾಯ ಮಾಡಿದರು: ಪಹಲ್ಗಾಮ್ ದಾಳಿಯ ಸಂತ್ರಸ್ತೆ

ಬಿಸ್ಮಿಲ್ಲಾ… ಎನ್ನುತ್ತಾ ಸ್ಥಳೀಯ ಮುಸ್ಲಿಮರು ನಮಗೆ ಸಹಾಯ ಮಾಡಿದರು: ಪಹಲ್ಗಾಮ್ ದಾಳಿಯ ಸಂತ್ರಸ್ತೆ

- Advertisement -
- Advertisement -

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯ ವೇಳೆ ಮೂವರು ಸ್ಥಳೀಯ ಮುಸ್ಲಿಮರು ‘ಬಿಸ್ಮಿಲ್ಲಾ…ಬಿಸ್ಮಿಲ್ಲಾ’ ಎಂದು ಪಠಿಸುತ್ತಾ ದಾಳಿಯ ಸ್ಥಳದಿಂದ ನಮಗೆ ಕೆಳಗೆ ಬರಲು ಸಹಾಯ ಮಾಡಿದರು ಎಂದು ಘಟನೆಯಲ್ಲಿ ಹತ್ಯೆಯಾದ ಕರ್ನಾಟಕದ ನಿವಾಸಿ ಮಂಜುನಾಥ ರಾವ್ ಅವರ ಪತ್ನಿ ಪಲ್ಲವಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿಯಲ್ಲಿ ರಾಜ್ಯದ ಇಬ್ಬರು ಸೇರಿದಂತೆ 28 ಜನರು ಮೃತಪಟ್ಟಿದ್ದಾರೆ. ಶಿವಮೊಗ್ಗದ ನಿವಾಸಿ ಆಗಿರುವ ಮಂಜುನಾಥ್ ರಾವ್ ಮತ್ತು ಬೆಂಗಳೂರಿನ ಮತ್ತಿಕೆರೆ ನಿವಾಸಿ ಭರತ್ ಭೂಷಣ್ ಅವರು ದಾಳಿಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಿಂದ ಇಬ್ಬರ ಕುಟುಂಬಗಳು ಸುರಕ್ಷಿತವಾಗಿವೆ ಎಂದು ವರದಿಗಳು ಉಲ್ಲೇಖಿಸಿವೆ.

ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ 41 ವರ್ಷದ ಭರತ್ ಭೂಷಣ್, 47 ವರ್ಷದ ರಿಯಲ್ ಎಸ್ಟೇಟ್ ಏಜೆಂಟ್ ಮಂಜುನಾಥ ರಾವ್ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ. ಈ ವೇಳೆ ಅವರೊಂದಿಗೆ ಇದ್ದ ಅವರ ಕುಟುಂಬ ದಾಳಿಯಿಂದ ಬಚಾವಾಗಿದ್ದಾರೆ ಎಂದು ವರದಿಯಾಗಿದೆ.

ಘಟನೆ ನಂತರ ಮಾಧ್ಯಮಗಳ ಜೊತೆಗೆ ಪಹಲ್ಗಾಮ್‌ನಿಂದ ಮಾತನಾಡಿದ್ದ ಮಂಜುನಾಥ್ ಅವರ ಪತ್ನಿ ಪಲ್ಲವಿ, ಭಯೋತ್ಪಾದಕರು ತನ್ನ ಪತಿಯ ಮೇಲೆ ಗುಂಡು ಹಾರಿಸಿದಾಗ, ತಾನು ಮತ್ತು ತನ್ನ ಮಗ ಅಲ್ಲೇ ಇದ್ದೆವು. ನಾವು ಕುದುರೆ ಸವಾರಿಯ ಮೂಲಕ ಸ್ಥಳಕ್ಕೆ ತಲುಪಿದ್ದೆವು. ನನ್ನ ಪತಿ ನನ್ನ ಮಗನಿಗೆ ತಿಂಡಿ ಖರೀದಿಸಲು ತೆರಳಿದ್ದರು ಈ ವೇಳೆ ದಾಳಿ ನಡೆಸಿದೆ ಎಂದು ಅವರು ಹೇಳಿದ್ದಾರೆ.

“ಕೆಲವೇ ನಿಮಿಷಗಳಲ್ಲಿ, ನನ್ನ ಪತಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಬಂತು. ಅವರು ನನ್ನ ಕಣ್ಣ ಮುಂದೆಯೇ ನಿಧನರಾದರು, ಮತ್ತು ನಾನು ಅಸಹಾಯಕಳಾಗಿದ್ದೆ. ತನ್ನನ್ನೂ ಕೊಲ್ಲುವಂತೆ ಉಗ್ರಗಾಮಿಗಳಿಗೆ ಕೇಳಿಕೊಂಡೆ. ನನ್ನ ಮಗ ಮತ್ತು ನಾನು ಇಬ್ಬರೂ ಉಗ್ರಗಾಮಿಗಳನ್ನು ನಮ್ಮನ್ನೂ ಕೊಲ್ಲುವಂತೆ ಕೇಳಿಕೊಂಡೆವು” ಎಂದು ಅವರು ಹೇಳಿದ್ದಾರೆ.

ಅದಾಗ್ಯೂ, ಭಯೋತ್ಪಾದಕ ನಮ್ಮನ್ನು ಕೊಲ್ಲುವುದಿಲ್ಲ, ಇದನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ತಿಳಿಸಬೇಕೆಂದು ಹೇಳಿದ ಎಂದು ಅವರು ಹೇಳಿದ್ದಾರೆ. ದಾಳಿಯ ಸಮಯದಲ್ಲಿ ಯಾವುದೇ ಸೇನಾ ಸಿಬ್ಬಂದಿ ಇರಲಿಲ್ಲ ಎಂದು ಅವರು ಹೇಳಿದ್ದಾರೆ.

“ದಾಳಿಯಿಂದ ನಮ್ಮನ್ನು ರಕ್ಷಿಸುವಲ್ಲಿ ನಮ್ಮ ಚಾಲಕ ಹಾಗೂ ಸ್ಥಳೀಯ ಮೂವರು ಮುಸ್ಲಿಮರು ಸಹಾಯ ಮಾಡಿದ್ದಾರೆ. ಘಟನೆ ನಡೆದಾಗಿನಿಂದ ಚಾಲಕ ನಮ್ಮೊಂದಿಗಿದ್ದಾರೆ. ಮೂವರು ಸ್ಥಳೀಯ ಮುಸ್ಲಿಮರು ‘ಬಿಸ್ಮಿಲ್ಲಾ… ಬಿಸ್ಮಿಲ್ಲಾ…’ ಎಂದು ಹೇಳುತ್ತಾ ದಾಳಿ ನಡೆದ ಸ್ಥಳದಿಂದ ಸುರಕ್ಷಿತವಗಿ ಕೆಳಗೆ ಬರಲು ನಮಗೆ ಸಹಾಯ ಮಾಡಿದರು” ಎಂದು ಅವರು ಹೇಳಿದ್ದಾರೆ.

ಅವರು ನನ್ನ ಸಹೋದರರಂತೆ ಇದ್ದರು. ಅವರಲ್ಲಿ ಒಬ್ಬರು ನನ್ನ ಮಗನನ್ನು ಎತ್ತಿಕೊಂಡು ಬಂದರು. ಇನ್ನಿಬ್ಬರು ಕಠಿಣ ಭೂಪ್ರದೇಶವನ್ನು ದಾಟಲು ನನಗೆ ಸಹಾಯ ಮಾಡಿದರು ಎಂದು ಪಲ್ಲವಿ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ದೇಶದಲ್ಲಿ ಕೆಟ್ಟದ್ದು ನಡೆಯುತ್ತೆ ಎಂದ ಬಿಜೆಪಿ: ಮೋದಿ ನಿನ್ನೆ ಸೌದಿಯಲ್ಲಿದ್ದರು, ನೆನಪಿಸಿದ ಜನ

‘ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ದೇಶದಲ್ಲಿ ಕೆಟ್ಟದ್ದು ನಡೆಯುತ್ತೆ ಎಂದ ಬಿಜೆಪಿ: ಮೋದಿ ನಿನ್ನೆ ಸೌದಿಯಲ್ಲಿದ್ದರು, ನೆನಪಿಸಿದ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...