Homeಮುಖಪುಟಪಹಲ್ಗಾಮ್ ದಾಳಿ ಬಗ್ಗೆ ಸುಳಿವು ಸಿಕ್ಕಿದ್ದರೂ ನಿರ್ಲಕ್ಷಿಸಿದ್ದ ಗುಪ್ತಚರ, ಭದ್ರತಾ ಪಡೆ: ವರದಿ

ಪಹಲ್ಗಾಮ್ ದಾಳಿ ಬಗ್ಗೆ ಸುಳಿವು ಸಿಕ್ಕಿದ್ದರೂ ನಿರ್ಲಕ್ಷಿಸಿದ್ದ ಗುಪ್ತಚರ, ಭದ್ರತಾ ಪಡೆ: ವರದಿ

- Advertisement -
- Advertisement -

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರರ ದಾಳಿಯು ಗಂಭೀರ ಗುಪ್ತಚರ ಮತ್ತು ಭದ್ರತಾ ವೈಫಲ್ಯ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಘಟನೆಗೆ ಕೆಲವು ದಿನಗಳ ಮೊದಲೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಒಕೆ)ದಲ್ಲಿ ನೆಲೆಸಿರುವ ಭಯೋತ್ಪಾದಕನೊಬ್ಬ ದಾಳಿಯ ಬಗ್ಗೆ ಸುಳಿವು ನೀಡಿದ್ದನು ಎಂದು ಮೂಲಗಳು ಹೇಳಿದ್ದು, ಆದರೆ ಗುಪ್ತಚರ ಸಂಸ್ಥೆಗಳು ಮತ್ತು ಭದ್ರತಾ ಪಡೆಗಳು ಅದರ ಮೇಲೆ ಕ್ರಮ ಕೈಗೊಳ್ಳಲು ವಿಫಲವಾಗಿದ್ದು, ಇದು ಭೀಕರ ದುರಂತಕ್ಕೆ ಕಾರಣವಾಯಿತು ಎಂದು ವರದಿಯಾಗಿದೆ. ಪಹಲ್ಗಾಮ್ ದಾಳಿ

ಪಿಒಕೆ ಮತ್ತು ಪಾಕಿಸ್ತಾನದಲ್ಲಿ ನೆಲೆಗೊಂಡಿದ್ದ ಅಂತರರಾಷ್ಟ್ರೀಯ ನಿರ್ವಾಹಕರು ಕಾಲ ಕಾಲಕ್ಕೆ ಉಗ್ರರಿಗೆ ನಿರ್ದೇಶನಗಳನ್ನು ನೀಡುತ್ತಿದ್ದರು ಎಂದು ವರದಿಯಾಗಿದೆ. ದಾಳಿಯಲ್ಲಿ ಭಾಗಿಯಾಗಿರುವ ಉಗ್ರರು ಶಸ್ತ್ರಾಸ್ತ್ರಗಳನ್ನು ಬಳಸುವಲ್ಲಿ ಉತ್ತಮ ತರಬೇತಿ ಪಡೆದಿದ್ದರು ಮತ್ತು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಜನಪ್ರಿಯ ಪ್ರವಾಸಿ ತಾಣಗಳಾಗಿದ್ದರೂ ಭದ್ರತಾ ಪಡೆಗಳ ನಿಯೋಜನೆ ಕಡಿಮೆ ಇರುವ ಪ್ರದೇಶಗಳ ವಿವರವಾದ ವರದಿಗಳನ್ನು ಒದಗಿಸಿದ್ದರು ಎಂದು ಗುಪ್ತಚರ ಮೂಲಗಳು ತಿಳಿಸಿವೆ.

ದಾಳಿಕೋರರು ಹೆಲ್ಮೆಟ್ ಅಳವಡಿಸಿದ ಕ್ಯಾಮೆರಾಗಳನ್ನು ಹೊಂದಿದ್ದರು ಎಂದು ವರದಿಯು ಉಲ್ಲೇಖಸಿದ್ದು, ಇದು ಪ್ರವಾಸಿಗರ ಹತ್ಯಾಕಾಂಡವನ್ನು ರೆಕಾರ್ಡ್ ಮಾಡಲು ಮತ್ತು ದೃಶ್ಯಗಳನ್ನು ಅವರ ಭಯೋತ್ಪಾದಕ ಅಂಗಸಂಸ್ಥೆಗಳಿಗೆ ರವಾನಿಸಲು ಉದ್ದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ, ಬುಧವಾರ ಭದ್ರತಾ ಸಂಸ್ಥೆಗಳು ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಲಾಗಿರುವ ಮೂವರು ವ್ಯಕ್ತಿಗಳ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದೆ. ಆರೋಪಿಗಳನ್ನು ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಎಂದು ಗುರುತಿಸಲಾಗಿದ್ದು ಅವರು ಮೂಸಾ, ಯೂನಸ್ ಮತ್ತು ಆಸಿಫ್ ಎಂಬ ಸಂಕೇತನಾಮಗಳನ್ನು ಹೊಂದಿದ್ದಾರೆ ಎನ್ನಲಾಗಿದೆ. ಅವರು ಪೂಂಚ್‌ನಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ಘಟನೆಗಳಲ್ಲಿಯೂ ಭಾಗಿಯಾಗಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಪಾಕಿಸ್ತಾನ ಮೂಲದ ನಿಷೇಧಿತ ಲಷ್ಕರ್-ಎ-ತೈಬಾ ಭಯೋತ್ಪಾದಕ ಗುಂಪಿನ ಸಂಘಟನೆಯಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಮಂಗಳವಾರ ಮಧ್ಯಾಹ್ನ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಹಿರಿಯ ಕಮಾಂಡರ್ ಅಲಿಯಾಸ್ ಖಾಲಿದ್ ಎಂದೂ ಕರೆಯಲ್ಪಡುವ ಸೈಫುಲ್ಲಾ ಕಸೂರಿಯನ್ನು ಹತ್ಯಾಕಾಂಡದ ಹಿಂದಿನ ಮಾಸ್ಟರ್ ಮೈಂಡ್ ಎಂದು ಗುಪ್ತಚರ ಸಂಸ್ಥೆಗಳು ಗುರುತಿಸಿವೆ.

ಸೈಫುಲ್ಲಾ ಖಾಲಿದ್ ಪಾಕಿಸ್ತಾನದ ಗುಜ್ರಾನ್‌ವಾಲಾ ನಗರದಿಂದ ಕಾರ್ಯನಿರ್ವಹಿಸುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ನಡೆದ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು, ಇದರಲ್ಲಿ ಲೆಫ್ಟಿನೆಂಟ್ ಗವರ್ನರ್ ಕೂಡ ಭಾಗವಹಿಸಿದ್ದರು. ದೇಶವು ಭಯೋತ್ಪಾದನೆಗೆ ಮಣಿಯುವುದಿಲ್ಲ ಮತ್ತು ಪ್ರವಾಸಿಗರ ಹತ್ಯೆಗೆ ಕಾರಣರಾದವರನ್ನು ಬಿಡಲಾಗುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಮೂಲಗಳ ಪ್ರಕಾರ, ಕೇಂದ್ರವು ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಮತ್ತು ಸರ್ವಪಕ್ಷ ಸಭೆಯನ್ನು ಕರೆದಿದ್ದು, ಈ ಸಂದರ್ಭದಲ್ಲಿ ಸರ್ಕಾರವು ಅಂತರರಾಷ್ಟ್ರೀಯ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಗುರಿಯನ್ನು ಹೊಂದಿದೆ. ಪಹಲ್ಗಾಮ್ ದಾಳಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ?: ಪ್ರಿಯಾಂಕ್ ಪ್ರಶ್ನೆ

ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ?: ಪ್ರಿಯಾಂಕ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...