Homeಅಂತರಾಷ್ಟ್ರೀಯಪಹಲ್ಗಾಮ್ ಭಯೋತ್ಪಾದಕ ದಾಳಿ: ಪಾಕ್‌ ಜೊತೆಗಿನ ಸಂಬಂಧ ಕಡಿದುಕೊಂಡ ಭಾರತ

ಪಹಲ್ಗಾಮ್ ಭಯೋತ್ಪಾದಕ ದಾಳಿ: ಪಾಕ್‌ ಜೊತೆಗಿನ ಸಂಬಂಧ ಕಡಿದುಕೊಂಡ ಭಾರತ

- Advertisement -
- Advertisement -

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಪ್ರವಾಸಿಗರನ್ನು ಹತ್ಯೆಗೈದಿರುವುದಕ್ಕೆ ಪ್ರತ್ಯುತ್ತರವಾಗಿ ಭಾರತ ಪಾಕಿಸ್ತಾನ ಜೊತೆಗಿನ ಸಂಬಂಧವನ್ನು ಕಡಿದುಕೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಏ.23) ನಡೆದ ಭದ್ರತೆ ಕುರಿತ ಸಂಪುಟ ಸಮಿತಿಯ (ಸಿಸಿಎಸ್) ಎರಡೂವರೆ ಗಂಟೆಗಳ ಸಭೆಯ ನಂತರ, ಪಾಕಿಸ್ತಾನದೊಂದಿಗಿನ ಸಂಬಂಧ ಕಡಿತಗೊಳಿಸುವ ನಿರ್ಧಾರ ಹೊರಬಿದ್ದಿದೆ.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಸಿಸಿಎಸ್ ಸಭೆಯ ನಿರ್ಣಯಗಳನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಭಯೋತ್ಪಾದಕ ದಾಳಿಗೆ ಪ್ರತ್ಯುತ್ತರವಾಗಿ 1960ರಲ್ಲಿ ಭಾರತ-ಪಾಕಿಸ್ತಾನ ಸಹಿ ಹಾಕಿರುವ ಸಿಂಧೂ ಜಲ ಒಪ್ಪಂದವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಭಾರತ-ಪಾಕಿಸ್ತಾನ ನಡುವಿನ ಅಟ್ಟಾರಿ ಗಡಿಯನ್ನು ಬಂದ್ ಮಾಡಲಾಗುವುದು. ಪಾಕಿಸ್ತಾನದ ಪ್ರಜೆಗಳಿಗೆ ನೀಡಲಾಗುವ ಸಾರ್ಕ್‌ ವೀಸಾ ಸೌಲಭ್ಯ ರದ್ದುಗೊಳಿಸಲಾಗಿದೆ. ಪಾಕಿಸ್ತಾನದ ಭಾರತೀಯ ರಾಯಭಾರ ಕಚೇರಿಯಿಂದ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳಲಾಗುವುದು. ಪಾಕಿಸ್ತಾನದ ಮಿಲಿಟರಿ ರಾಜತಾಂತ್ರಿಕರಿಗೆ ಭಾರತದಿಂದ ಹೊರ ನಡೆಯಲು ಸೂಚನೆ ನೀಡಲಾಗುವುದು. ಸಾರ್ಕ್ ವೀಸಾ ವಿನಾಯಿತಿ ಸೌಲಭ್ಯದ ಮೇಲೆ ಭಾರತದಲ್ಲಿರುವ ಪಾಕ್ ಪ್ರಜೆಗಳಿಗೆ ದೇಶ ತೊರೆಯಲು ಗಡುವು ನೀಡಲಾಗಿದೆ” ಎಂದು ವಿಕ್ರಮ್ ಮಿಸ್ರಿ ವಿವರಿಸಿದ್ದಾರೆ.

ಸಿಂಧೂ ಜಲ ಒಪ್ಪಂದ ರದ್ದು

1960ರ ಸೆಪ್ಟೆಂಬರ್ 19ರಂದು ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಪಾಕಿಸ್ತಾನದ ಅಧ್ಯಕ್ಷ ಫೀಲ್ಡ್ ಮಾರ್ಷಲ್ ಅಯೂಬ್ ಖಾನ್ ನಡುವೆ ಸಹಿ ಹಾಕಲಾದ ಸಿಂಧೂ ಜಲ ಒಪ್ಪಂದವು, ಪಶ್ಚಿಮದ ನದಿಗಳಾದ ಸಿಂಧೂ, ಝೀಲಂ ಮತ್ತು ಚೆನಾಬ್‌ಗಳನ್ನು ಪಾಕಿಸ್ತಾನಕ್ಕೆ ಮತ್ತು ಪೂರ್ವದ ನದಿಗಳಾದ ರಾವಿ, ಬಿಯಾಸ್ ಮತ್ತು ಸಟ್ಲೆಜ್‌ಗಳನ್ನು ಭಾರತಕ್ಕೆ ಹಂಚಿಕೆ ಮಾಡಿತ್ತು. ಈ ಒಪ್ಪಂದವನ್ನು ರದ್ದುಗೊಳಿಸಲು ಭಾರತ ತೀರ್ಮಾನಿಸಿದೆ.

ಪಾಕಿಸ್ತಾನಿ ಪ್ರಜೆಗಳು 48 ಗಂಟೆಗಳಲ್ಲಿ ಭಾರತ ತೊರೆಯಲು ಗಡುವು

ರಾಜತಾಂತ್ರಿಕ ಮತ್ತು ಭದ್ರತಾ ಕ್ರಮಗಳ ಭಾಗವಾಗಿ, ಭಾರತವು ಪಾಕಿಸ್ತಾನಿ ರಾಜತಾಂತ್ರಿಕರು ದೇಶ ತೊರೆಯಲು ಆದೇಶಿಸಿದೆ. ನವದೆಹಲಿಯ ಪಾಕಿಸ್ತಾನಿ ಹೈಕಮಿಷನ್‌ನಲ್ಲಿರುವ ರಕ್ಷಣಾ, ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರನ್ನು ‘ಪರ್ಸನಾ ನಾನ್ ಗ್ರಾಟಾ’ ಎಂದು ಘೋಷಿಸಲಾಗಿದೆ. ಅವರು ಭಾರತ ತೊರೆಯಲು ಒಂದು ವಾರದ ಕಾಲವಕಾಶವಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಹೇಳಿದ್ದಾರೆ.

ಭಾರತವು ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್‌ನಿಂದ ತನ್ನ ಮಿಲಿಟರಿ ಸಲಹೆಗಾರರನ್ನು ವಾಪಸ್ ಕರೆಸಿಕೊಳ್ಳಲಿದೆ. ಸಾರ್ಕ್ ವೀಸಾ ಹೊಂದಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳು 48 ಗಂಟೆಗಳ ಭಾರತ ತೊರೆಯಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಾರ್ಕ್ ವೀಸಾ ವಿನಾಯಿತಿ ಯೋಜನೆ (SVES) ಅಡಿಯಲ್ಲಿ ಪಾಕಿಸ್ತಾನಿ ಪ್ರಜೆಗಳಿಗೆ ಭಾರತಕ್ಕೆ ಪ್ರಯಾಣಿಸಲು ಇನ್ನು ಮುಂದೆ ಅವಕಾಶವಿರುವುದಿಲ್ಲ. ಈಗಾಗಲೇ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾದ ಎಲ್ಲಾ SVES ವೀಸಾಗಳನ್ನು ರದ್ದುಗೊಳಿಸಲಾಗಿದೆ ಎಂದು ಮಿಸ್ರಿ ಘೋಷಿಸಿದ್ದಾರೆ.

ಏಕೈಕ ಭೂ ಮಾರ್ಗ ಬಂದ್

ಭಾರತ ಮತ್ತು ಪಾಕಿಸ್ತಾನ ನಡುವಿನ ಏಕೈಕ ಭೂ ಮಾರ್ಗ ವಾಘಾ-ಅಟ್ಟಾರಿ ಗಡಿಯನ್ನು ಮುಚ್ಚಲು ಸರ್ಕಾರ ನಿರ್ಧರಿಸಿದೆ. “ಅಟ್ಟಾರಿ ಸಮಗ್ರ ಚೆಕ್‌ಪೋಸ್ಟ್’ ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಲಾಗುವುದು. ಅನುಮತಿ ಪಡೆದು ಗಡಿ ದಾಟಿದವರು ಮೇ 1, 2025ರ ಮೊದಲು ವಾಘಾ-ಅಟ್ಟಾರಿ ಮಾರ್ಗದ ಮೂಲಕ ಹಿಂತಿರುಗಬಹುದು ಎಂದು ಮಿಸ್ರಿ ತಿಳಿಸಿದ್ದಾರೆ.

ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್ ಪಟ್ಟಣದ ಬಳಿಯ ಪ್ರವಾಸಿತಾಣ ಬೈಸರನ್‌ ಹುಲ್ಲುಗಾವಲಿನಲ್ಲಿ ಮಂಗಳವಾರ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ.

2019ರ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ. ಪಾಕಿಸ್ತಾನ ಮೂಲದ ನಿಷೇಧಿತ ಲಷ್ಕರ್-ಎ-ತೈಬಾ (LeT) ಜೊತೆ ನಂಟು ಹೊಂದಿರುವ ರೆಸಿಸ್ಟೆನ್ಸ್ ಫ್ರಂಟ್ (TRF)ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.

ಪಹಲ್ಗಾಮ್ ದಾಳಿ ಬಗ್ಗೆ ಸುಳಿವು ಸಿಕ್ಕಿದ್ದರೂ ನಿರ್ಲಕ್ಷಿಸಿದ್ದ ಗುಪ್ತಚರ, ಭದ್ರತಾ ಪಡೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...