Homeಕರ್ನಾಟಕಪತ್ನಿಯನ್ನು ಕೊಲೆಗೈದ ಸುಳ್ಳು ಆರೋಪ: 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್ 'ಗೌರವಯುತ' ಖುಲಾಸೆ

ಪತ್ನಿಯನ್ನು ಕೊಲೆಗೈದ ಸುಳ್ಳು ಆರೋಪ: 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್ ‘ಗೌರವಯುತ’ ಖುಲಾಸೆ

- Advertisement -
- Advertisement -

ಪತ್ನಿಯನ್ನು ಕೊಲೆ ಮಾಡಿದ್ದಾರೆ ಎಂಬ ಸುಳ್ಳು ಆರೋಪದ ಮೇಲೆ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಬಸವನಹಳ್ಳಿ ನಿವಾಸಿ ಸುರೇಶ್‌ ಅವರನ್ನು ಮೈಸೂರಿನ 5ನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಲಯವು ‘ನಿರಪರಾಧಿ’ ಎಂದು ಘೋಷಿಸಿ ಬುಧವಾರ (ಏ.23) ‘ಗೌರವಯುತವಾಗಿ’ ಖುಸಲಾಸೆಗೊಳಿಸಿದೆ.

ಸುರೇಶ್ ಅವರ ಪತ್ನಿ ಮಲ್ಲಿಗೆ 2021ರಲ್ಲಿ ನಾಪತ್ತೆಯಾಗಿದ್ದರು. ಅವರನ್ನು ಸುರೇಶ್ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದ ಪೊಲೀಸರು, ಸುರೇಶ್ ಮೇಲೆ ಎಫ್‌ಐಆರ್ ದಾಖಲಿಸಿ ಬಂಧಿಸಿದ್ದರು. ಸುರೇಶ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಮೈಸೂರು ಜಿಲ್ಲಾ ನ್ಯಾಯಾಲಯ ಸುರೇಶ್ ಅವರಿಗೆ ಜೈಲು ಶಿಕ್ಷೆ ವಿಧಿಸಿತ್ತು. ಎರಡು ವರ್ಷ ಜೈಲಿನಲ್ಲಿದ್ದ ಸುರೇಶ್ 2023ರಲ್ಲಿ ಜಾಮೀನಿನ ಮೂಲಕ ಬಿಡುಗಡೆಗೊಂಡಿದ್ದರು.

ತಪ್ಪು ಮಾಡದೆ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್, ನಾಪತ್ತೆಯಾದ ತನ್ನ ಪತ್ನಿಯ ಕುರಿತು ಮಾಹಿತಿ ಕಲೆ ಹಾಕಲು ಮುಂದಾಗಿದ್ದರು. ಆಕೆಗಾಗಿ ಹುಡುಕಾಟ ನಡೆಸುತ್ತಿದ್ದರು. ಈ ನಡುವೆ 2025ರ ಏಪ್ರಿಲ್ 1ರಂದು ಸುರೇಶ್ ಅವರ ಪತ್ನಿ ಮಲ್ಲಿಗೆ ಮಡಿಕೇರಿಯ ಹೋಟೆಲ್ ಒಂದರಲ್ಲಿ ಪ್ರಿಯಕರ ಗಣೇಶ್ ಜೊತೆ ಪತ್ತೆಯಾಗಿದ್ದಾರೆ. ಈ ವಿಚಾರವನ್ನು ವಕೀಲರ ಮೂಲಕ ಸುರೇಶ್ ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ನ್ಯಾಯಾಲಯದ ಆದೇಶದಂತೆ ಗಣೇಶ್‌ ಜೊತೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ದೇವಾಲಯಕ್ಕೆ ತೆರಳುತ್ತಿದ್ದಾಗ ಮಡಿಕೇರಿ ಪೊಲೀಸರು ಮಲ್ಲಿಗೆಯನ್ನು ವಶಕ್ಕೆ ಪಡೆದು, ಕುಶಾಲನಗರ ಪೊಲೀಸರಿಗೆ ಒಪ್ಪಿಸಿದ್ದರು. ಪೊಲೀಸರು ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಮೈಸೂರು ಜಿಲ್ಲಾ ಸೆಷನ್ಸ್‌ ನ್ಯಾಯಾಲವು ಪ್ರಕರಣದ ಕುರಿತು 15 ದಿನಗಳೊಳಗೆ ವಿವರಣೆ ನೀಡುವಂತೆ ಕೊಡಗು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಸೂಚಿಸಿತ್ತು. ಪೊಲೀಸ್ ವರಿಷ್ಠಾಧಿಕಾರಿಯ ವಿಚಾರಣಾ ವರದಿಯನ್ನು ಬೈಲುಕುಪ್ಪೆ ವೃತ್ತ ನಿರೀಕ್ಷಕ ದೀಪಕ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ವಿಚಾರಣೆ ಸಂದರ್ಭದಲ್ಲಿ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಿ.ಜಿ.ಪ್ರಕಾಶ್, ಮಹೇಶ್ ಕುಮಾರ್, ಪ್ರಕಾಶ್ ಎತ್ತಿಮನಿ ಅವರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು, ದೋಷಾರೋಪ ಪಟ್ಟಿಗೆ ಏನು ಆಧಾರವಿದೆ? ಎಂದು ಪ್ರಶ್ನಿಸಿದ್ದರು.

ಸುರೇಶ್ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ ಪಾಂಡು ಪೂಜಾರಿ ಅವರು, ‘ಪೊಲೀಸರು ಉದ್ದೇಶ ಪೂರ್ವಕವಾಗಿ ಬುಡಕಟ್ಟು ಸಮುದಾಯವನ್ನು ಗುರಿಯಾಗಿಸಿ ಸುಳ್ಳು ಕಥೆ ಸೃಷ್ಟಿಸಿದ್ದಾರೆ. ತನಿಖಾಧಿಕಾರಿಗಳ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಲು ನಿರ್ದೇಶನ ನೀಡಬೇಕು’ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ವಾದ ಆಲಿಸಿದ ನ್ಯಾಯಾಧೀಶರು ತೀರ್ಪು ಕಾಯ್ದಿರಿಸಿ, ವಿಚಾರಣೆ ಮುಂದೂಡಿದ್ದರು. ಕಾಯ್ದಿರಿಸಿದ ತೀರ್ಪನ್ನು ಬುಧವಾರ ಪ್ರಕಟಸಲಾಗಿದೆ.

ನ್ಯಾಯಾಲಯದ ತೀರ್ಪು ಏನು?

ಪ್ರಕರಣ ಸಂಬಂಧ, ಪೊಲೀಸ್‌ ದಾಖಲೆಗಳಲ್ಲಿ ಸುರೇಶ್ ಅವರ ಹೆಸರನ್ನು ತೆಗೆದು ಹಾಕುವಂತೆ ಮೈಸೂರಿನ ಬೆಟ್ಟದಪುರ ಪೊಲೀಸರಿಗೆ ನ್ಯಾಯಾಧೀಶ ಗುರುರಾಜ್‌ ಸೋಮಕ್ಕಳವರ್‌ ಸೂಚನೆ ನೀಡಿದ್ದಾರೆ. ಸುರೇಶ್ ಅವರ ಜಾಮೀನು ಬಾಂಡ್‌ ಮತ್ತು ಅವರ ಶ್ಯೂರಿಟಿ ಬಾಂಡ್‌ ಅನ್ನು ರದ್ದುಗೊಳಿಸಲಾಗಿದೆ. ಅವರಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸರ್ಕಾರದ ಗೃಹ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ನ್ಯಾಯಾಲಯ ಸೂಚಿಸಿದೆ.

ಪ್ರಕರಣದ ತನಿಖಾಧಿಕಾರಿಯಾಗಿದ್ದ ಅಂದಿನ ಬೈಲಕುಪ್ಪೆ ಸರ್ಕಲ್‌ ಇನ್‌ಸ್ಪೆಕ್ಟರ್‌ ಬಿ.ಜಿ.ಪ್ರಕಾಶ್ ವಿರುದ್ಧ ಐಪಿಸಿ ಸೆಕ್ಷನ್‌ 193, 195 ರ ಅಡಿ (ಸುಳ್ಳು ಪ್ರಕರಣ ಸೃಷ್ಟಿ, ಸುಳ್ಳು ದೋಷಾರೋಪಣ ಪಟ್ಟಿ ಸಲ್ಲಿಕೆ) ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗೆ ನ್ಯಾಯಾಲಯ ಸೂಚಿಸಿದೆ.

ಪ್ರಕರಣದ ತನಿಖಾ ತಂಡದಲ್ಲಿದ್ದ ಅಂದಿನ ಪ್ರೊಬೆಷನರಿ ಐಪಿಎಸ್‌ ಅಧಿಕಾರಿ ಜಿತೇಂದ್ರ ಕುಮಾರ್‌, ಬೆಟ್ಟದಪುರ ಪಿಎಸ್‌ಐ ಮಹೇಶ್ ಕುಮಾರ್, ಎಸ್‌ಐ ಪ್ರಕಾಶ್ ಯತ್ತಿಮನಿ ವಿರುದ್ಧ ಇಲಾಖಾ ತನಿಖೆ ನಡೆಸಬೇಕು ಎಂದು ಮೈಸೂರು ಐಜಿಪಿಗೆ, ಪ್ರಸ್ತುತ ಪ್ರಕರಣದಲ್ಲಿ ದಾಖಲಾದ ಯುಡಿಆರ್‌ ಕುರಿತು ತನಿಖೆ ನಡೆಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ನ್ಯಾಯಾಲಯ ಆದೇಶಿಸಿದೆ.

ಕುಶಾಲನಗರದ ಮಹಿಳೆ ನಾಪತ್ತೆ…ಮೈಸೂರಿನಲ್ಲಿ ಏಕೆ ಪ್ರಕರಣ?

2021ರ ಜುಲೈನಲ್ಲಿ ಕೊಡಗು ಜಿಲ್ಲೆ ಕುಶಾಲನಗರದ ಬಸವನಹಳ್ಳಿ ಹೊಸ ಬಡಾವಣೆಯ ನಿವಾಸಿ ಮಲ್ಲಿಗೆ ಕಾಣೆಯಾಗಿದ್ದಾರೆಂದು ಪ್ರಕರಣ ದಾಖಲಾಗಿತ್ತು. ಅದೇ ತಿಂಗಳ 18ರಂದು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಠಾಣಾ ವ್ಯಾಪ್ತಿಯ ಶಾನುಭೋಗನಹಳ್ಳಿಯ ಕಾಲುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿತ್ತು. ಅದು ಮಗಳದ್ದೇ ಎಂದು ಮಲ್ಲಿಗೆಯ ತಾಯಿ ಗುರುತಿಸಿದ್ದರು. ಪತಿ ಸುರೇಶ್‌ ಅವರನ್ನು ವಿಚಾರಣೆ ನಡೆಸಿದ ಪೊಲೀಸರು, ಆತ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿರುವುದಾಗಿ ತಿಳಿಸಿ, ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದರು. ತನ್ನ ಪತ್ನಿ ಕಾಣೆಯಾಗಿದ್ದಾರೆ ಎಂದು ಸುರೇಶ್ ಕುಶಾಲನಗರದಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ, ಯಾರದ್ದೋ ಶವವನ್ನು ಸುರೇಶ್ ಅವರ ಪತ್ನಿಯದ್ದೇ ಎಂದು ಬಿಂಬಿಸಿದ್ದ ಮೈಸೂರಿನ ಬೆಟ್ಟದಪುರ ಪೊಲೀಸರು, ಸುರೇಶ್ ಆಕೆಯನ್ನು ಕೊಲೆ ಮಾಡಿದ್ದಾರೆ ಎಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

 ಸುರೇಶ್‌ಗೆ ನ್ಯಾಯ ದೊರಕಿಸಿಕೊಟ್ಟ ವಕೀಲ ಪಾಂಡು ಪೂಜಾರಿ 

ಸುರೇಶ್‌ ಜೈಲಿನಲ್ಲಿದ್ದ ಸಮಯದಲ್ಲಿ ಅವರ ತಂದೆ ಗಾಂಧಿ ವಕೀಲ ಪಾಂಡು ಪೂಜಾರಿ ಅವರನ್ನು ಭೇಟಿಯಾಗಿ ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿ ಮಗನನ್ನು ಜೈಲಿಗೆ ಹಾಕಿರುವ ಬಗ್ಗೆ ತಿಳಿಸಿದ್ದರು. ಪ್ರಕರಣ ಕೈಗೆತ್ತಿಕೊಂಡ ಪಾಂಡು ಪೂಜಾರಿ ಇಲ್ಲಿಯವರೆಗೆ ಸುರೇಶ್‌ ಕುಟುಂಬದಿಂದ ಯಾವುದೇ ಶುಲ್ಕ ಪಡೆಯದೆ ವಾದ ಮಂಡಿಸಿ ನ್ಯಾಯ ದೊರಕಿಸಿಕೊಟ್ಟಿದ್ದಾರೆ ಎಂದು ವರದಿಗಳು ಹೇಳಿವೆ.

ಚಿಕ್ಕಬಳ್ಳಾಪುರ | ಹಾಡಹಗಲೇ ರೈತನಿಗೆ ಗುಂಡಿಕ್ಕಿದ ಗಣಿ ಮಾಲಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...