ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಚರ್ಚಿಸಲು ಕಾಂಗ್ರೆಸ್‌ನ ಉನ್ನತ ನಾಯಕರು ಗುರುವಾರ (ಏ.24) ಪಕ್ಷದ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ತುರ್ತು ಸಭೆ ನಡೆಸಿದರು. ಸಭೆಯಲ್ಲಿ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಲಾಗ್ತಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ಜೈರಾಮ್ ರಮೇಶ್, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವರು ದೆಹಲಿಯ 24, ಅಕ್ಬರ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು.
The Congress Working Committee, in its meeting today, strongly condemned the recent Pahalgam terror attack and paid tribute to the innocent lives lost.
We stand united in the fight against terrorism.
📍 New Delhi pic.twitter.com/bFCwnD3jvz
— Congress (@INCIndia) April 24, 2025
ಮೌನಾಚರಣೆ ಮಾಡುವ ಮೂಲಕ ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದವರಿಗೆ ಸಭೆಯಲ್ಲಿ ಕಾಂಗ್ರೆಸ್ ನಾಯಕರು ನಮನ ಸಲ್ಲಿಸಿದರು. ರಾಹುಲ್ ಗಾಂಧಿ ಸಿಡಬ್ಲ್ಯೂಸಿ ಸಭೆಯಲ್ಲಿ ಭಾಗವಹಿಸಲು ಅಮೆರಿಕ ಪ್ರವಾಸವನ್ನು ಮೊಟಕುಗೊಳಿಸಿದ್ದರು.
ಇಂದು ಸಂಜೆ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ನಡೆಸಲಿದ್ದು, ಈ ಸಭೆಯಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಮತ್ತು ಕೇಂದ್ರಾಡಳಿತ ಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕರಿಗೆ ಕರೆ ಮಾಡಿ ಭಯೋತ್ಪಾದಕ ದಾಳಿಯ ಕುರಿತು ಮಾಹಿತಿ ಪಡೆದಿರುವುದಾಗಿ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಹೇಳಿದ್ದಾರೆ.


