ಏಪ್ರಿಲ್ 22 ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಹತ್ಯೆಗೆ ಕಾರಣರಾದ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಎಚ್ಚರಿಸಿದ್ದಾರೆ. ಅವರು ಮುಂದೆ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದ ಪಾಟ್ನಾದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಹೇಳಿದ್ದು, ಭಯೋತ್ಪಾದಕನ್ನು ಗುರುತಿಸಿ, ಪತ್ತೆಹಚ್ಚಿ, ಶಿಕ್ಷಿಸಲಾಗುವುದು ಎಂದು ಹೇಳಿದ್ದಾರೆ. ಪಹಲ್ಗಾಮ್ ದಾಳಿಕೋರರಿಗೆ
ಬಿಹಾರದ ಮಧುಬನಿ ಜಿಲ್ಲೆಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು ಆಯೋಜಿಸಲಾದ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ, “ಭಾರತವು ಪ್ರತಿಯೊಬ್ಬ ಭಯೋತ್ಪಾದಕ, ಅವರ ನಿರ್ವಾಹಕರು ಮತ್ತು ಅವರ ಬೆಂಬಲಿಗರನ್ನು ಗುರುತಿಸಿ, ಟ್ರ್ಯಾಕ್ ಮಾಡಿ ಶಿಕ್ಷಿಸುತ್ತದೆ. ನಾವು (ಭಾರತ) ಅವರನ್ನು ಭೂಮಿಯ ತುದಿಯವರೆಗೆ ಹಿಂಬಾಲಿಸುತ್ತೇವೆ. ಅವರಿಗೆ ಅವರ ಕಲ್ಪನೆಗೂ ಮೀರಿ ಶಿಕ್ಷೆಯಾಗುತ್ತದೆ.” ಎಂದು ಮೋದಿ ಹೇಳಿದ್ದಾರೆ.
ಭಯೋತ್ಪಾದಕರ ದಾಳಿಯು ದೇಶದ 140 ಕೋಟಿ ಜನರ ಉತ್ಸಾಹವನ್ನು ಕುಗ್ಗಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. “ಭಯೋತ್ಪಾದನೆಯಿಂದ ಭಾರತದ ಆತ್ಮವು ಎಂದಿಗೂ ಮುರಿಯುವುದಿಲ್ಲ. ಘಟನೆಯಲ್ಲಿ ತಮ್ಮ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬಗಳಿಗೆ ನ್ಯಾಯ ಒದಗಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು” ಎಂದು ಅವರು ಹೇಳಿದ್ದಾರೆ.
ಭಯೋತ್ಪಾದಕರು ಮತ್ತು ಪಿತೂರಿಗಾರರನ್ನು ಅವರ ಘೋರ ಕೃತ್ಯಕ್ಕಾಗಿ ನ್ಯಾಯದ ಕಟಕಟೆಗೆ ತರುವ ದೃಢಸಂಕಲ್ಪದಲ್ಲಿ ಇಡೀ ರಾಷ್ಟ್ರ ದೃಢವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ಮಾನವೀಯತೆಯಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬರೂ ನಮ್ಮೊಂದಿಗಿದ್ದಾರೆ” ಎಂದು ಅವರು ಹೇಳಿದ್ದು, ಬಿಕ್ಕಟ್ಟಿನ ಸಮಯದಲ್ಲಿ ಭಾರತದೊಂದಿಗೆ ನಿಂತ ವಿವಿಧ ದೇಶಗಳ ಜನರು ಮತ್ತು ಅವರ ನಾಯಕರಿಗೆ ಕೃತಜ್ಞತೆಗಳನ್ನು ವ್ಯಕ್ತಪಡಿಸಿದ್ದಾರೆ.
ಭಾರತದ 140 ಕೋಟಿ ಜನರ ಚೈತನ್ಯವು ಭಯೋತ್ಪಾದನೆಯ ಬೆನ್ನೆಲುಬನ್ನು ಮುರಿಯುತ್ತದೆ ಎಂದು ಅವರು ಹೇಳಿದ್ದಾರೆ. “ಭಯೋತ್ಪಾದನೆಯ ವಿರುದ್ಧ ಕ್ರಮ ಕೈಗೊಳ್ಳುವ ಸಮಯ ಇದು” ಎಂದು ಅವರು ಪ್ರತಿಪಾದಿಸಿದ್ದಾರೆ. ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲಿನ ದಾಳಿಯನ್ನು ಇಡೀ ರಾಷ್ಟ್ರದ ಮೇಲಿನ ದಾಳಿ ಎಂದು ಅವರು ಬಣ್ಣಿಸಿದ್ದು, ಇದು ಅಪರಾಧಿಗಳಿಗೆ ಸೂಕ್ತ ಉತ್ತರವನ್ನು ನೀಡುತ್ತದೆ ಎಂದು ಹೇಳಿದ್ದಾರೆ. ಪಹಲ್ಗಾಮ್ ದಾಳಿಕೋರರಿಗೆ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಮಾನನಷ್ಟ ಪ್ರಕರಣ: ಮೇಧಾ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್
ಮಾನನಷ್ಟ ಪ್ರಕರಣ: ಮೇಧಾ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್

