Homeಮುಖಪುಟವಕ್ಫ್ ತಿದ್ದುಪಡಿ ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುವುದಿಲ್ಲ: ಸುಪ್ರಿಂಕೋರ್ಟ್‌ನಲ್ಲಿ ಕಾಯ್ದೆ ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ

ವಕ್ಫ್ ತಿದ್ದುಪಡಿ ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುವುದಿಲ್ಲ: ಸುಪ್ರಿಂಕೋರ್ಟ್‌ನಲ್ಲಿ ಕಾಯ್ದೆ ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ

- Advertisement -
- Advertisement -

ಸುಪ್ರೀಂ ಕೋರ್ಟ್ ಮುಂದೆ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಶುಕ್ರವಾರ ಸಮರ್ಥಿಸಿಕೊಂಡಿದ್ದು, ತಮ್ಮ ಸರ್ಕಾರ ಜಾರಿಗೆ ತಂದಿರುವ ಈ ಕಾಯ್ದೆಯು ಸಂವಿಧಾನದಡಿಯಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕುಗಳ ಕಾನೂನು ಉಲ್ಲಂಘಿಸುವುದಿಲ್ಲ ಎಂದು ಹೇಳಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ಶೇರ್ಷಾ ಸಿ ಶೇಕ್ ಮೊಹಿದ್ದೀನ್ ಸಲ್ಲಿಸಿದ ಪ್ರಾಥಮಿಕ ಅಫಿಡವಿಟ್‌ನಲ್ಲಿ, ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಕೇಂದ್ರ ಸರ್ಕಾರವು ವಿರೋಧಿಸಿದೆ.

ತಿದ್ದುಪಡಿಗಳನ್ನು ವಕ್ಫ್ ಆಸ್ತಿ ನಿರ್ವಹಣೆಯ ಜಾತ್ಯತೀತ ಅಂಶಗಳನ್ನು ನಿಯಂತ್ರಿಸಲು ಮಾತ್ರ ತರಲಾಗಿದೆ ಮತ್ತು ಸಂವಿಧಾನದ 25 ಮತ್ತು 26 ನೇ ವಿಧಿಗಳ ಅಡಿಯಲ್ಲಿ ಧಾರ್ಮಿಕ ಸ್ವಾತಂತ್ರ್ಯಗಳಿಗೆ ಇದು ಅಡ್ಡಿಯಾಗುವುದಿಲ್ಲ ಎಂದು ಅದು ವಾದಿಸಿದೆ. ಅಲ್ಲದೆ, ಈ ಕಾಯ್ದೆಯು ಸರ್ಕಾರದ ನಿಯಂತ್ರಕ ಅಧಿಕಾರಗಳ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿದೆ.

ವಕ್ಫ್ ಎನ್ನುವುದು ಧಾರ್ಮಿಕ, ಶೈಕ್ಷಣಿಕ ಅಥವಾ ದತ್ತಿ ಉದ್ದೇಶಕ್ಕಾಗಿ ಮೀಸಲಾಗಿರುವ ಇಸ್ಲಾಮಿಕ್ ಕಾನೂನಿನಡಿಯಲ್ಲಿನ ಒಂದು ದತ್ತಿಯಾಗಿದೆ. ಪ್ರತಿಯೊಂದು ರಾಜ್ಯವು ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ, ಹಿಡಿದಿಟ್ಟುಕೊಳ್ಳುವ ಮತ್ತು ವರ್ಗಾಯಿಸುವ ಅಧಿಕಾರವನ್ನು ಹೊಂದಿರುವ ಕಾನೂನು ಘಟಕದ ನೇತೃತ್ವದಲ್ಲಿ ವಕ್ಫ್ ಮಂಡಳಿಯನ್ನು ಹೊಂದಿದೆ.

2024 ರ ವಕ್ಫ್ ತಿದ್ದುಪಡಿ ಮಸೂದೆಯು 1995 ರ ವಕ್ಫ್ ಕಾಯ್ದೆಯ 44 ಸೆಕ್ಷನ್‌ಗಳಿಗೆ ತಿದ್ದುಪಡಿಗಳನ್ನು ಪ್ರಸ್ತಾಪಿಸಿದೆ. ಇದರಲ್ಲಿ ಮುಸ್ಲಿಮೇತರರಿಗೆ ವಕ್ಫ್ ಮಂಡಳಿಗಳಲ್ಲಿ ಅವಕಾಶ ನೀಡುವುದು, ಆಸ್ತಿ ದೇಣಿಗೆಗಳನ್ನು ನಿರ್ಬಂಧಿಸುವುದು ಮತ್ತು ವಕ್ಫ್ ನ್ಯಾಯಮಂಡಳಿಗಳು ಕಾರ್ಯನಿರ್ವಹಿಸುವ ವಿಧಾನವನ್ನು ಬದಲಾಯಿಸುವುದು ಸೇರಿವೆ.

ಈ ಮಸೂದೆಯನ್ನು ಏಪ್ರಿಲ್ 4 ರಂದು ಸಂಸತ್ತು ಅಂಗೀಕರಿಸಿತು. ಇದು ಏಪ್ರಿಲ್ 5 ರಂದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆಯಿತು ಮತ್ತು ಏಪ್ರಿಲ್ 8 ರಂದು ಜಾರಿಗೆ ಬಂದಿತು. ಕಾಂಗ್ರೆಸ್ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೇಹಾದುಲ್ ಮುಸ್ಲಿಮೀನ್ ಸೇರಿದಂತೆ ಇತರರು ಮಸೂದೆಯ ಸಾಂವಿಧಾನಿಕತೆಯನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಸುಪ್ರೀಂಕೋರ್ಟ್ ಮೇ 5 ರಂದು ಈ ಪ್ರಕರಣದ ವಿಚಾರಣೆ ನಡೆಸಲಿದೆ. ಏಪ್ರಿಲ್ 17 ರಂದು ಕೇಂದ್ರ ಸರ್ಕಾರವು ವಕ್ಫ್ ಆಸ್ತಿಗಳನ್ನು ಡಿನೋಟಿಫೈ ಮಾಡುವುದಿಲ್ಲ ಅಥವಾ ಆ ದಿನಾಂಕದವರೆಗೆ ಕೇಂದ್ರ ವಕ್ಫ್ ಕೌನ್ಸಿಲ್ ಅಥವಾ ರಾಜ್ಯ ವಕ್ಫ್ ಮಂಡಳಿಗಳಿಗೆ ಯಾವುದೇ ಹೊಸ ನೇಮಕಾತಿಗಳನ್ನು ಮಾಡುವುದಿಲ್ಲ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಹಲ್ಗಾಮ್ ದಾಳಿ: ದೇಶ ರಕ್ಷಣೆಯ ಗುಪ್ತಚರ ಸಂಸ್ಥೆಯನ್ನು ವಿಪಕ್ಷ ನಾಯಕರ ವಿರುದ್ಧ ಕಳುಹಿಸುತ್ತಿದ್ದೀರಿ: ತೇಜಸ್ವಿ ಯಾದವ್

ಪಹಲ್ಗಾಮ್ ದಾಳಿ: ದೇಶ ರಕ್ಷಣೆಯ ಗುಪ್ತಚರ ಸಂಸ್ಥೆಯನ್ನು ವಿಪಕ್ಷ ನಾಯಕರ ವಿರುದ್ಧ ಕಳುಹಿಸುತ್ತಿದ್ದೀರಿ: ತೇಜಸ್ವಿ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...