2024 ರ ಪದವಿಪೂರ್ವ ರಾಷ್ಟ್ರೀಯ ಅರ್ಹತಾ-ಪ್ರವೇಶ ಪರೀಕ್ಷೆಯ ಪತ್ರಿಕೆ ಸೋರಿಕೆ ಪ್ರಕರಣ ಮತ್ತು ಇತರ ಹಲವಾರು ಅಂತರರಾಜ್ಯ ಪರೀಕ್ಷಾ ಹಗರಣಗಳ ಪ್ರಮುಖ ಶಂಕಿತ ಆರೋಪಿ ಸಂಜೀವ್ ಕುಮಾರ್ ಮುಖಿಯಾ ಅವರನ್ನು ಶುಕ್ರವಾರ ಬಿಹಾರದ ಆರ್ಥಿಕ ಅಪರಾಧಗಳ ಘಟಕವು ಬಂಧಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ನೀಟ್-ಯುಜಿ
ಸುಮಾರು 11 ತಿಂಗಳ ಕಾಲ ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದ ಮುಖಿಯಾ ಅವರನ್ನು ದಾನಾಪುರದಲ್ಲಿ ಮಧ್ಯರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಈ ತಿಂಗಳ ಆರಂಭದಲ್ಲಿ, ಬಿಹಾರ ಸರ್ಕಾರವು ಅವರ ಬಗ್ಗೆ ಮಾಹಿತಿ ನೀಡಿದವರಿಗೆ 3 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು ಎಂದು ದಿ ಹಿಂದೂ ವರದಿ ಮಾಡಿದೆ.
ಮುಖಿಯಾ ಇರುವ ಸ್ಥಳದ ಬಗ್ಗೆ ಗುಪ್ತಚರ ಮಾಹಿತಿಯ ನಂತರ ಅವರನ್ನು ಅಪಾರ್ಟ್ಮೆಂಟೊಂದರಿಂದ ಬಂಧಿಸಲಾಗಿದೆ ಎಂದು ಆರ್ಥಿಕ ಅಪರಾಧಗಳ ಘಟಕದ ಹೆಚ್ಚುವರಿ ಮಹಾನಿರ್ದೇಶಕ ನಯ್ಯರ್ ಹುಸ್ನೈನ್ ಖಾನ್ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ಮುಖಿಯಾ ಬಿಹಾರ ಶಿಕ್ಷಕರ ನೇಮಕಾತಿ ಪರೀಕ್ಷೆ ಮತ್ತು ಉತ್ತರ ಪ್ರದೇಶ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ಸೇರಿದಂತೆ ಕನಿಷ್ಠ ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಲಾಗಿದೆ. ಜೊತೆಗೆ ಪೊಲೀಸರು ಮತ್ತು ಕೇಂದ್ರ ತನಿಖಾ ದಳವು ಅವರನ್ನು ಪ್ರಶ್ನಿಸುತ್ತಿದೆ ಎಂದು ಹುಸ್ನೈನ್ ಖಾನ್ ಹೇಳಿದ್ದಾರೆ.
ಜೂನ್‌ನಲ್ಲಿ ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ ವರ್ಗಾಯಿಸುವ ಮೊದಲು ಆರ್ಥಿಕ ಅಪರಾಧಗಳ ಘಟಕವು ಮುಖಿಯಾ ಅವರನ್ನು ನೀಟ್ ಪ್ರಕರಣದ ಪ್ರಮುಖ ಆರೋಪಿ ಎಂದು ಬಣ್ಣಿಸಿತ್ತು.
ಜೂನ್ 4 ರಂದು ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ರಾಷ್ಟ್ರೀಯ ಅರ್ಹತಾ-ಪ್ರವೇಶ ಪರೀಕ್ಷೆಯ ಫಲಿತಾಂಶಗಳು ಪ್ರಕಟವಾದ ನಂತರ, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇತರ ಅಕ್ರಮಗಳ ಆರೋಪಗಳನ್ನು ಮಾಡಲಾಗಿತ್ತು. ಈ ಪರೀಕ್ಷೆಯನ್ನು ಮೇ 5 ರಂದು ನಡೆಸಲಾಗಿತ್ತು. ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಇಲ್ಲಿಯವರೆಗೆ 45 ಜನರನ್ನು ಬಂಧಿಸಲಾಗಿದೆ ಮತ್ತು ಐದು ಆರೋಪಪಟ್ಟಿಗಳನ್ನು ಕೇಂದ್ರ ತನಿಖಾ ದಳ ಸಲ್ಲಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ.
ಮುಖಿಯಾ ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಮತ್ತು ಉತ್ತರ ಪತ್ರಿಕೆಗಳನ್ನು ತನ್ನ ಮೊಬೈಲ್ ಫೋನ್‌ನಲ್ಲಿ ಗುರುತಿಸಲಾಗದ “ಪ್ರೊಫೆಸರ್” ನಿಂದ ಪಡೆದಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಅವರು ಹಲವಾರು ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾಗಿದ್ದು, 2016 ರಲ್ಲಿ ಬಿಹಾರ ಸಾರ್ವಜನಿಕ ಸೇವಾ ಆಯೋಗದ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷಾ ಪತ್ರಿಕೆಯನ್ನು ಸೋರಿಕೆ ಮಾಡಿದ್ದಕ್ಕಾಗಿ ಅವರನ್ನು ಬಂಧಿಸಲಾಗಿದೆ ಎಂದು ಪತ್ರಿಕೆ ತಿಳಿಸಿದೆ.
ಅವರ ಮಗ, ವೈದ್ಯ ಶಿವ ಕುಮಾರ್ ಅವರನ್ನು ಮತ್ತೊಂದು ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಆದರೆ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ನೀಟ್-ಯುಜಿ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಸಂವಿಧಾನ ಸಂರಕ್ಷಕರ ಸಮಾವೇಶ-ದಾವಣಗೆರೆ | ನಗರದ ಪ್ರಮುಖ ರಸ್ತೆಗಳಲ್ಲಿ ಪರೇಡ್ ಮೂಲಕ ಅದ್ದೂರಿ ಚಾಲನೆ
ಸಂವಿಧಾನ ಸಂರಕ್ಷಕರ ಸಮಾವೇಶ-ದಾವಣಗೆರೆ | ನಗರದ ಪ್ರಮುಖ ರಸ್ತೆಗಳಲ್ಲಿ ಪರೇಡ್ ಮೂಲಕ ಅದ್ದೂರಿ ಚಾಲನೆ

