Homeಮುಖಪುಟರಾಜಸ್ಥಾನ | ಮಸೀದಿ ಹೊರಗೆ ಗುಂಪುಕಟ್ಟಿ ಪ್ರಚೋದನಕಾರಿ ಘೋಷಣೆ ಕೂಗಿದ ಬಿಜೆಪಿ ಶಾಸಕ; ಎಫ್‌ಐಆರ್

ರಾಜಸ್ಥಾನ | ಮಸೀದಿ ಹೊರಗೆ ಗುಂಪುಕಟ್ಟಿ ಪ್ರಚೋದನಕಾರಿ ಘೋಷಣೆ ಕೂಗಿದ ಬಿಜೆಪಿ ಶಾಸಕ; ಎಫ್‌ಐಆರ್

- Advertisement -
- Advertisement -

ರಾಜಸ್ಥಾನದ ವಾಲ್ಡ್ ಸಿಟಿಯಲ್ಲಿರುವ ಜುಮಾ ಮಸೀದಿಯ ಹೊರಗೆ ಬಿಜೆಪಿಯ ಶಾಸಕನೊಬ್ಬ ಗುಂಪುಕಟ್ಟಿ ಘೋಷಣೆ ಕೂಗಿರುವ ಘಟನೆ ಶುಕ್ರವಾರ ನಡೆದಿದೆ. ದುಷ್ಕರ್ಮಿ ಗುಂಪಿನ ನೇತೃತ್ವ ವಹಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಜೈಪುರದ ಪೊಲೀಸರು ಶಾಸಕನ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ರಾಜಸ್ಥಾನ

ಬಿಜೆಪಿ ಶಾಸಕ ಬಲ್ಮುಕುಂದ್ ಆಚಾರ್ಯ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ವರದಿ ಹೇಳಿದೆ. ಅದಾಗ್ಯೂ, ನಂತರ ಶಾಸಕ ಆಚಾರ್ಯ ಅವರು ಘಟನೆಗೆ ವಿಷಾದ ವ್ಯಕ್ತಪಡಿಸಿ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದು, ಇನ್ನು ಮುಂದೆ ಮಸೀದಿಗಳಿಗೆ ಪ್ರವೇಶಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಆಚಾರ್ಯ, ಬಿಜೆಪಿ ನಾಯಕರು ಮತ್ತು ಕಾರ್ಯಕರ್ತ ದುಷ್ಕರ್ಮಿಗಳೊಂದಿಗೆ ಆಕ್ರಮಣಕಾರಿ ಘೋಷಣೆಗಳನ್ನು ಕೂಗಿದ್ದು, ಕೇಸರಿ ಧ್ವಜಗಳು ಮತ್ತು ಟಾರ್ಚ್‌ಗಳನ್ನು ಹಿಡಿದು ಮಸೀದಿ ಆವರಣದಲ್ಲಿ ಪೋಸ್ಟರ್‌ಗಳನ್ನು ಹಾಕಿದ್ದರು ಎಂದು ಆರೋಪಿಸಲಾಗಿದೆ.

ಜುಮಾ ಮಸೀದಿ ಸಮಿತಿಯ ಸದಸ್ಯ ಹಫೀಜ್ ಮನ್ಸೂರ್ ಅಲಿ ಖಾನ್, ಆಚಾರ್ಯ ರಾತ್ರಿ 8:30 ರ ಸುಮಾರಿಗೆ ಆವರಣಕ್ಕೆ ಪ್ರವೇಶಿಸಿ, ಗೇಟ್‌ನಲ್ಲಿ “ಪಾಕಿಸ್ತಾನ ಮುರ್ದಾಬಾದ್” ಪೋಸ್ಟರ್ ಅನ್ನು ಇರಿಸಿ “ಜೈ ಶ್ರೀ ರಾಮ್” ಎಂದು ಕೂಗಿದರು ಎಂದು ಹೇಳಿದ್ದಾರೆ. ಘಟನೆ ಭದ್ರತಾ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಇದರಿಂದಾಗಿ ಮಸೀದಿ ಪಕ್ಕದ ಬಾಡಿ ಚೌಪರ್ ಪ್ರದೇಶದ ಉದ್ವಿಗ್ನಗೊಂಡಿದೆ ಎಂದು ವರದಿಯಾಗಿದೆ.

ಕಾಂಗ್ರೆಸ್ ಶಾಸಕರಾದ ರಫೀಕ್ ಖಾನ್ ಮತ್ತು ಅಮೀನ್ ಕಾಗ್ಜಿ, ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್ ಅವರೊಂದಿಗೆ ಮಧ್ಯಪ್ರವೇಶಿಸಿ ಪರಿಸ್ಥಿತಿ ಉಲ್ಬಣಗೊಳ್ಳದಂತೆ ತಡೆಯುವ ಪ್ರಯತ್ನ ನಡೆಸಿದ್ದಾರೆ ಎಂದು ವರದಿಯಾಗಿದೆ.

ಜುಮಾ ಮಸೀದಿ ಸಮಿತಿಯ ದೂರಿನ ಮೇರೆಗೆ ಪೊಲೀಸರು ಬಿಜೆಪಿ ಶಾಸಕ ಆಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 298 (ಪೂಜಾ ಸ್ಥಳವನ್ನು ಅಪವಿತ್ರಗೊಳಿಸುವುದು), 300 (ಧಾರ್ಮಿಕ ಸಭೆಗೆ ತೊಂದರೆ ನೀಡುವುದು), 302 (ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶದಿಂದ ಪದಗಳನ್ನು ಉಚ್ಚರಿಸುವುದು) ಮತ್ತು 351 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

“ಶುಕ್ರವಾರ ರಾತ್ರಿಯ ಪರಿಸ್ಥಿತಿ ಅತ್ಯಂತ ಉದ್ವಿಗ್ನವಾಗಿತ್ತು. ನಾವು ಸಾಕಷ್ಟು ಕಷ್ಟಪಟ್ಟು ಜನಸಮೂಹವನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದೇವೆ.” ಎಂದು ಮನಕ್ ಚೌಕ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ಗುರು ಭೂಪೇಂದ್ರ ಸಿಂಗ್ ಹೇಳಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್ ಶಾಸಕರಾದ ಕಾಗ್ಜಿ ಮತ್ತು ಖಾನ್ ಅವರು ಬಿಜೆಪಿ ಶಾಸಕ ಆಚಾರ್ಯ ಅವರ ನಡೆಗಳು ಮುಸ್ಲಿಮರನ್ನು ತೀವ್ರವಾಗಿ ನೋಯಿಸಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಅದಾಗ್ಯೂ, ಬಿಜೆಪಿ ತನ್ನ ಶಾಸಕನ ನಡೆಯಿಂದ ಅಂತರ ಕಾಪಾಡಿಕೊಂಡಿದೆ. ಪಕ್ಷದ ರಾಜ್ಯ ಅಧ್ಯಕ್ಷ ಮದನ್ ರಾಥೋಡ್ ಪ್ರತಿಕ್ರಿಯಿಸಿ, “ನಾನು ಬಲ್ಮುಕುಂದ್ ಆಚಾರ್ಯ ಅವರೊಂದಿಗೆ ಮಾತನಾಡಿದೆ. ಅವರು ಪಹಲ್ಗಾಮ್ ಘಟನೆಯ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿರುವುದಾಗಿ ಹೇಳಿದರು. ಮಸೀದಿಗೆ ತಲುಪಿದ ಜನಸಮೂಹವನ್ನು ಶಾಂತಗೊಳಿಸಲು ತಾನು ಪ್ರಯತ್ನಿಸುತ್ತಿರುವುದಾಗಿ ಅವರು ಹೇಳಿಕೊಂಡರು” ಎಂದು ಹೇಳಿದ್ದಾರೆ.

“ಆದಾಗ್ಯೂ, ಯಾರೂ ಮಸೀದಿಗೆ ಪ್ರವೇಶಿಸಬಾರದು ಎಂದು ನಾನು ಅವರಿಗೆ ದೃಢವಾಗಿ ಹೇಳಿದೆ. ಅಂತಹ ಕ್ರಮಗಳು ಕೋಮು ವಿಭಜನೆಗಳನ್ನು ಸೃಷ್ಟಿಸುತ್ತವೆ. ನಾವು ರಾಷ್ಟ್ರವಿರೋಧಿ ಶಕ್ತಿಗಳ ವಿರುದ್ಧ ಒಗ್ಗಟ್ಟಿನಿಂದ ಇರಬೇಕು, ಮುಗ್ಧ ನಾಗರಿಕರನ್ನು ಗುರಿಯಾಗಿಸಬಾರದು. ನಾವು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇವೆ.” ಎಂದು ಹೇಳಿದ್ದಾರೆ.

ಹವಾ ಮಹಲ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಆಚಾರ್ಯ ಮೊದಲ ಬಾರಿಗೆ ಶಾಸಕರಾಗಿದ್ದಾರೆ. ಅವರು ಈ ಹಿಂದೆ ಮಾಂಸ ಸೇವನೆ, ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆ, ಶಾಲೆಗೆ ಹಿಜಾಬ್ ಧರಿಸಿದ ಹುಡುಗಿಯರು ವಿರುದ್ಧ ಪ್ರೊಪಗಾಂಡ ಹರಡಿದ್ದರು. ಅಲ್ಲದೆ, ಜೈಪುರದಿಂದ ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾ ನಿರಾಶ್ರಿತರನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿದ್ದರು. ಅವರು ಹಥೋಜ್ ಧಾಮ್ ದೇವಾಲಯದ ಮುಖ್ಯ ಅರ್ಚಕ ಕೂಡಾ ಆಗಿದ್ದಾರೆ. ರಾಜಸ್ಥಾನ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ, ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿಎಂ ವ್ಯಂಗ್ಯ

ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ, ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿಎಂ ವ್ಯಂಗ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. CM has correctly told. Sangha Parivar has not supported Independence Movement.In fact they have supported Britishers. Now they are making false propaganda.

LEAVE A REPLY

Please enter your comment!
Please enter your name here

- Advertisment -

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...