Homeದಲಿತ್ ಫೈಲ್ಸ್ಮಧ್ಯಪ್ರದೇಶ | ಮದುವೆಗೆ ಕುದುರೆ ಮೆರವಣಿಗೆ ಮಾಡುತ್ತಿದ್ದ ದಲಿತರ ಹಲ್ಲೆ

ಮಧ್ಯಪ್ರದೇಶ | ಮದುವೆಗೆ ಕುದುರೆ ಮೆರವಣಿಗೆ ಮಾಡುತ್ತಿದ್ದ ದಲಿತರ ಹಲ್ಲೆ

- Advertisement -
- Advertisement -

ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತದ್ದ ದಲಿತ ವರನ ಮೇಲೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಟಿಕಮ್‌ಗಢ ಜಿಲ್ಲೆಯ ಮೋಖ್ರಾ ಗ್ರಾಮದಲ್ಲಿ ನಡೆದಿದೆ. ಘಟನೆ ವಿರುದ್ಧ ಗ್ರಾಮದ ಮೂವರು ನಿವಾಸಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಶನಿವಾರ ವರದಿ ಮಾಡಿದೆ. ಮಧ್ಯಪ್ರದೇಶ 

ಭನ್ ಕುನ್ವರ್ ರಾಜಾ ಪರ್ಮಾರ್ ಮತ್ತು ಇತರ ಇಬ್ಬರು – ಸೂರ್ಯ ಪಾಲ್ ಮತ್ತು ಡ್ರಿಗ್ಪಾಲ್ – ಶುಕ್ರವಾರ ಜಿತೇಂದ್ರ ಅಹಿರ್ವರ್ ಎಂಬ ದಲಿತ ಸಮುದಾಯದ ಯುವಕನ ಮೇಲೆ ಕಲ್ಲುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ದುಷ್ಕರ್ಮಿಗಳು ಪರ್ಮಾರ್ ಅಹಿರ್ವರ್ ಮೇಲೆ ಜಾತಿವಾದಿ ನಿಂದನೆಗಳನ್ನು ಕೂಗಿದ್ದಾರೆ ಮತ್ತು “ಕೆಳಜಾತಿಯ ವ್ಯಕ್ತಿ” ಕುದುರೆ ಸವಾರಿ ಮಾಡಬಾರದು ಎಂದು ಹೇಳಿದ್ದಾಗಿ ವರದಿ ಹೇಳಿದೆ.

“ನಾವು ಪ್ರದೇಶದ ಮೂಲಕ ಹಾದುಹೋಗುವಾಗ ಅವರು ನಮ್ಮನ್ನು ತಡೆದು, ಕಲ್ಲುಗಳನ್ನು ಎಸೆದು, ಕುದುರೆಯನ್ನು ಇಳಿಸಿ ಬರಿಗಾಲಿನಲ್ಲಿ ನಡೆಯಲು ಹೇಳಿದರು. ಅವರು ನಮ್ಮನ್ನು ಅವಮಾನಿಸಿದ್ದು, ನಾವು ಅವರ ಮನೆಗಳ ಬಳಿ ಚಪ್ಪಲಿಗಳನ್ನು ಕೂಡಾ ಧರಿಸಬಾರದು ಎಂದು ಹೇಳಿದ್ದಾರೆ.” ಎಂದು ಅಹಿರ್ವರ್ ಆರೋಪಿಸಿದ್ದಾರೆ.

ಹಲ್ಲೆಯಲ್ಲಿ ನಾಲ್ವರಿಗೆ ಗಾಯ

ಅಹಿರ್ವರ್ ನೀಡಿದ ದೂರಿನ ಮೇರೆಗೆ ಮೂವರು ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್‌ಗಳ ಅಡಿಯಲ್ಲಿ ಹಲ್ಲೆ, ತಪ್ಪು ನಿಯಂತ್ರಣ, ಕ್ರಿಮಿನಲ್ ಬೆದರಿಕೆ ಮತ್ತು ಅಶ್ಲೀಲ ನಡವಳಿಕೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು IANS ವರದಿ ಮಾಡಿದೆ.

ಪರ್ಮಾರ್‌ನನ್ನು ವಶಕ್ಕೆ ಪಡೆಯಲಾಗಿದ್ದು, ಇತರ ಇಬ್ಬರು ಶಂಕಿತರನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದು ಬಡಗಾಂವ್ ಧಸನ್ ಠಾಣೆಯ ಉಸ್ತುವಾರಿ ನರೇಂದ್ರ ವರ್ಮಾ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಮಧ್ಯಪ್ರದೇಶ 

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜಸ್ಥಾನ | ಮಸೀದಿ ಹೊರಗೆ ಗುಂಪುಕಟ್ಟಿ ಪ್ರಚೋದನಕಾರಿ ಘೋಷಣೆ ಕೂಗಿದ ಬಿಜೆಪಿ ಶಾಸಕ; ಎಫ್‌ಐಆರ್

ರಾಜಸ್ಥಾನ | ಮಸೀದಿ ಹೊರಗೆ ಗುಂಪುಕಟ್ಟಿ ಪ್ರಚೋದನಕಾರಿ ಘೋಷಣೆ ಕೂಗಿದ ಬಿಜೆಪಿ ಶಾಸಕ; ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...